AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿಯಲ್ಲಿ 750 ಕೋಟಿ ಅಕ್ರಮ ಆಸ್ತಿ ಪತ್ತೆ: ಅಧಿಕೃತ ವಿವರ ನೀಡಿದ ಐಟಿ ಇಲಾಖೆ

IT Raid: ಅಕ್ರಮವಾಗಿ 40 ಜನರ ಹೆಸರಿನಲ್ಲಿ ನೀರಾವರಿ, ಹೆದ್ದಾರಿ ಯೋಜನೆಗಳಲ್ಲಿ ಉಪ ಗುತ್ತಿಗೆ ಪಡೆದು ಅಕ್ರಮ ಎಸಗಿರುವುದು ದಾಳಿಯ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಟಿ ದಾಳಿಯಲ್ಲಿ 750 ಕೋಟಿ ಅಕ್ರಮ ಆಸ್ತಿ ಪತ್ತೆ: ಅಧಿಕೃತ ವಿವರ ನೀಡಿದ ಐಟಿ ಇಲಾಖೆ
ಪ್ರಾತಿನಿಧಿಕ ಚಿತ್ರ
TV9 Web
| Updated By: guruganesh bhat|

Updated on:Oct 12, 2021 | 5:54 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರ ಮನೆಗಳ ಮೇಲೆ ಐಟಿ ದಾಳಿಯಲ್ಲಿ 750 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿದೆ ಎಂದು ಐಟಿ ಇಲಾಖೆ ಅಧಿಕಾರಿಗಳಿಂದ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.ಅಕ್ಟೋಬರ್ 7ರಂದು 4 ರಾಜ್ಯಗಳಲ್ಲಿ 47 ಕಡೆ ಐಟಿ ದಾಳಿ ನಡೆದಿತ್ತು. ಐಟಿ ದಾಳಿ ವೇಳೆ 4.69 ಕೋಟಿ ನಗದು ಜಪ್ತಿ ಮಾಡಲಾಗಿದೆ. 8.67 ಕೋಟಿ ಮೊತ್ತದ ಚಿನ್ನ, 29.83 ಲಕ್ಷ ಮೌಲ್ಯದ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ 40 ಜನರ ಹೆಸರಿನಲ್ಲಿ ನೀರಾವರಿ, ಹೆದ್ದಾರಿ ಯೋಜನೆಗಳಲ್ಲಿ ಉಪ ಗುತ್ತಿಗೆ ಪಡೆದು ಅಕ್ರಮ ಎಸಗಿರುವುದು ದಾಳಿಯ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ವೇಳೆ ಮೂರು ಕಂಪನಿಗಳು ನಕಲಿಯಾಗಿ ಖರೀದಿ ಮಾಡಿ ಕೆಲಸ ಮಾಡಿದ್ದಾಗಿ ದಾಖಲೆಗಳನ್ನು ಸೃಷ್ಟಿ ಮಾಡಿ ಲಾಭ ಗಳಿಸುರುವುದು ಪತ್ತೆಯಾಗಿದೆ. ನಕಲಿಯಾಗಿ ಕಾರ್ಮಿಕ ವೆಚ್ಚ, ನಕಲಿಯಾಗಿ ಬೋಗಸ್ ಸಬ್ ಕಂಟ್ರಾಕ್ಟ್ ಗಳು ಮಾಡಿರೊದು ಪತ್ತೆಯಾಗಿದೆ. ಒಂದು ಕಂಪನಿಗೆ ಸಂಬಂಧಿಸಿದಂತೆ ಇಲ್ಲದ 40 ವ್ಯಕ್ತಿಗಳ ಹೆಸರಲ್ಲಿ ಸಬ್ ಕಾಂಟ್ರಾಕ್ಟ್ ವೆಚ್ಚ ಸೃಷ್ಟಿ ಮಾಡಿರುವುದು ಪತ್ತೆಯಾಗಿದೆ. ಜತೆಗೆ ವಿಚಾರಣೆ ವೇಳೆ ನಕಲಿಯಾಗಿ ದಾಖಲೆಗಳನ್ನು ಸೃಷ್ಟಿ ಮಾಡಿರುವುದಾಗಿ ಐಟಿ ಇಲಾಖೆಯ ಅಧಿಕಾರಿಗಳ ಮುಂದೆ ಸಬ್ ಕಾಂಟ್ರಾಕ್ಟರ್ಗಳು ಒಪ್ಪಿಕೊಂಡಿದ್ದಾರೆ ಎಂದು ಇಲಾಖೆ ತಿಳಿಸಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರ ಮನೆ ಮೇಲೆ ದಾಳಿ ನಡೆದ ಕಾರಣ ಇದು ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿತ್ತು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರ ಮೇಲಿನ ಐಟಿ ದಾಳಿ ವಿಚಾರವಾಗಿ ಇಂದು (ಅಕ್ಟೋಬರ್​ 12) ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ. ಸಿದ್ದರಾಮಯ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ಗೆ ಕಾರಣ. ಸಿದ್ದರಾಮಯ್ಯ ಪವರ್‌ಗಾಗಿ ಏನು ಬೇಕಾದರೂ ಮಾಡುತ್ತಾರೆ. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಸಹಾ ಅದರ ಭಾಗವಾಗಿದೆ. ಹೇಗಾದರೂ ಸರಿ ಸಿದ್ದರಾಮಯ್ಯಗೆ ಅಧಿಕಾರಬೇಕು ಎಂದು ಹೇಳಿದ್ದಾರೆ.

ಯಡಿಯೂರಪ್ಪ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ಮಾಡಲಾಗಿದೆ. ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ. ಇದರ ಬಗ್ಗೆ ಅನುಮಾನ ಇಲ್ಲ ಎಂದು ಚಾಮುಂಡಿಬೆಟ್ಟದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: 

IT raid in Bangalore: ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ; ಚಾರ್ಟೆಡ್ ಅಕೌಂಟೆಂಟ್ ಅಮಲಾ ಮನೆ ಮೇಲೆ IT ರೇಡ್

ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

Published On - 5:27 pm, Tue, 12 October 21

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ