Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಕ್ಕೆ 14 ಗಂಟೆ ಕೆಲಸಕ್ಕೆ ಕರ್ನಾಟಕ ಐಟಿ ಕಂಪನಿಗಳಿಂದ ಸರ್ಕಾರಕ್ಕೆ ಪ್ರಸ್ತಾಪ: ಭುಗಿಲೆದ್ದ ಆಕ್ರೋಶ

ಕರ್ನಾಟಕದಲ್ಲಿನ ಖಾಸಗಿ ಸಂಸ್ಥೆಗಳು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂಬ ವಿಧೇಯಕಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಖಾಸಗಿ ಉದ್ಯಮಿಗಳ ಒತ್ತಡದ ಬಳಿಕ ಅದನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದುಕೊಂಡ ಬೆನ್ನಲ್ಲೇ, ಐಟಿ ಕಂಪನಿಗಳಲ್ಲಿ ಉದ್ಯೋಗ ಅವಧಿ ವಿಸ್ತರಣೆ ವಿವಾದ ಶುರುವಾಗಿದೆ.

ದಿನಕ್ಕೆ 14 ಗಂಟೆ ಕೆಲಸಕ್ಕೆ ಕರ್ನಾಟಕ ಐಟಿ ಕಂಪನಿಗಳಿಂದ ಸರ್ಕಾರಕ್ಕೆ ಪ್ರಸ್ತಾಪ: ಭುಗಿಲೆದ್ದ ಆಕ್ರೋಶ
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Jul 21, 2024 | 5:54 PM

ಬೆಂಗಳೂರು, (ಜುಲೈ 21): ಕರ್ನಾಟಕದ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾಪವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹೌದು…ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ತಿದ್ದುಪಡಿಯಲ್ಲಿ ತಮ್ಮ ಬೇಡಿಕೆಯಾದ ಕೆಲಸದ ಅವಧಿ ವಿಸ್ತರಣೆಯನ್ನು ಸೇರಿಸಬೇಕು ಎಂದು ಐಟಿ ಕಂಪೆನಿಗಳು ಮನವಿ ಮಾಡಿವೆ ಎಂದು ತಿಳಿದುಬಂದಿದೆ. ಆದ್ರೆ, ಸರ್ಕಾರ ಇನ್ನೂ ಈ ಪಸ್ತಾವನೆ ಕುರಿತು ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಇನ್ನು ಈ ವಿಚಾರ ತಿಳಿಯಿತ್ತಿದ್ದಂತೆಯೇ ಕಂಪನಿಗಳ ಈ ನಡೆಗೆ ಕಾರ್ಮಿಕ ಸಂಘಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ.

ಇದೊಂದು ಅಮಾನವೀಯ ನಡೆಯಾಗಿದೆ. ಕೆಲಸದ ಅವಧಿ 9ರಿಂದ 14 ಗಂಟೆಗೆ ಹೆಚ್ಚಿಸುವುದರಿಂದ ಉದ್ಯೋಗಿಗಳ  ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೆ ಐಟಿ-ಬಿಟಿ ಕಂಪನಿಗಳು ಉದ್ಯೋಗ ಕಡಿತಗೊಳಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Bengaluru Real Estate: ಮನೆ ಖರೀದಿಸಲು ಎನ್​ಆರ್​ಐಗಳಿಗೆ ಬೆಂಗಳೂರೇ ಇಷ್ಟವಂತೆ; ಕಾರಣಗಳಿವು…

ಹೊಸ ಪ್ರಸ್ತಾವನೆಯಂತೆ ಐಟಿ ಉದ್ಯೋಗಿಗಳು, ಬಿಪಿಓಗಳಲ್ಲಿ 12 ಗಂಟೆಗೂ ಅಧಿಕ ಕೆಲಸ ಮಾಡಲು ಅವಕಾಶ ನೀಡಬೇಕು. ಅಲ್ಲದೇ ನಿಯಮಿತವಾಗಿ ಮೂರು ತಿಂಗಳು 125 ಗಂಟೆ ಮೀರದಂತೆ ಕೆಲಸ ಇರಬೇಕು ಎಂದು ಮನವಿ ಮಾಡಲಾಗಿದೆ. ಈ ಪ್ರಸ್ತಾವನೆ ಕುರಿತು ಸರ್ಕಾರ ಒಂದು ಸುತ್ತಿನ ಮಾತುಕತೆ ನಡೆಸಿದೆ. ಐಟಿ ಕಂಪನಿಗಳ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ ಬಳಿಕ ಈ ಕುರಿತು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಿದೆ.

ಐಟಿ ಕಂಪನಿಗಳ ಈ ಪ್ರಸ್ತಾವನೆಗೆ ಆರಂಭದಲ್ಲಿಯೇ ಸಾಕಷ್ಟು ವಿರೋಧ ಕೇಳಿ ಬಂದಿದೆ. ಕರ್ನಾಟಕ ರಾಜ್ಯ ಐಟಿ/ ಐಟಿಇಎಸ್ ನೌಕರರ ಸಂಘ (ಕೆಐಟಿಯು) ಸಹ ಪ್ರಸ್ತಾವನೆಯನ್ನು ವಿರೋಧಿಸಿದೆ. ಈ ಪಸ್ತಾವನೆಗೆ ಒಪ್ಪಿಗೆ ನೀಡಿದರೆ ಕಂಪನಿಗಳು ಈಗಿರುವ 3 ಶಿಫ್ಟ್‌ಗಳಿಂದ 2 ಶಿಫ್ಟ್‌ಗಳಿಗೆ ಬದಲಾಗಲಿವೆ. ಆದ್ದರಿಂದ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಕೆಐಟಿಯು ಅಂದಾಜಿಸಿದೆ.

ಅಲ್ಲದೇ ಈಗಾಗಲೇ ಐಟಿ ಉದ್ಯೋಗಿಗಳು ಒತ್ತಡದಿಂದ ಹಲವು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಒಂದು ವೇಳೆ 14 ಗಂಟೆ ಕೆಲಸದ ಅವಧಿಗೆ ಒಪ್ಪಿಗೆ ನೀಡಿದರೆ ಉದ್ಯೋಗಿಗಳ ಆರೋಗ್ಯದ ಮೇಲೆ ಪರಿಣಾಮ ಉಂಟಾಗಲಿದೆ. ಈ ಕುರಿತು ಈಗಾಗಲೇ ನಡೆದಿರುವ ಹಲವು ಸಮೀಕ್ಷೆಗಳನ್ನು ಕೆಐಟಿಯು ಉಲ್ಲೇಖಿಸಿದೆ.

ಇದನ್ನೂ ಓದಿ: 25,000 ಜನರಿಗೆ ಕೆಲಸ ಕೊಟ್ಟಿದ್ದೇನೆ, ನನ್ನ ಮಕ್ಕಳು ಕರ್ನಾಟಕದಲ್ಲಿ ಕೆಲಸ ಮಾಡಬಾರದಾ?: ಮೀಸಲಾತಿ ಮಸೂದೆಗೆ ಫೋನ್​ಪೆ ಸಂಸ್ಥಾಪಕರ ಕಿಡಿ

ಐಟಿ ಕಂಪನಿಗಳ ಉದ್ಯೋಗಿಗಳನ್ನು ಸರ್ಕಾರ ಯಂತ್ರದಂತೆ ನೋಡಬಾರದು. ಅವರು ಸಹ ಮನುಷ್ಯರು, 14 ಗಂಟೆಗಳ ಕೆಲಸದ ಅವಧಿಗೆ ಒಪ್ಪಿಗೆ ನೀಡುವುದು ಸರಿಯಲ್ಲ. ಈ ಪ್ರಸ್ತಾವನೆಗೆ ಒಪ್ಪಿಗೆ ನೀಡುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ವಿವರವಾದ ಅಧ್ಯಯನ ನಡೆಸಬೇಕು ಎಂದು ಐಟಿ ಉದ್ಯೋಗಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಕರ್ನಾಟಕ ಸರ್ಕಾರ 14 ಗಂಟೆ ಕೆಲಸದ ಅವಧಿ ವಿಸ್ತರಣೆಗೆ ಕಾನೂನು ಒಪ್ಪಿಗೆ ನೀಡುವ ಪ್ರಸ್ತಾವನೆಗೆ ಒಪ್ಪಿಲ್ಲ. ಆದರೆ ಐಟಿ ಕಂಪನಿಗಳ ಜೊತೆಗಿನ ಸಭೆಯಲ್ಲಿ ಯಾವ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್
ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್