ನವಕಲ್ಯಾಣ ಕರ್ನಾಟಕ ಸೌಹಾರ್ದ ಬ್ಯಾಂಕಿನಲ್ಲಿ ಉದ್ಯೋಗಾವಕಾಶ: ಪಿಯುಸಿ, ಪದವೀಧರರಿಂದ ಅರ್ಜಿ ಆಹ್ವಾನ
ಬೆಂಗಳೂರಿನ ರಾಜಾಜಿನಗರದಲ್ಲಿರುವ ನವಕಲ್ಯಾಣ ಕರ್ನಾಟಕ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಗ್ರಾಹಕ ಸಂಪರ್ಕ ನಿರ್ವಾಹಕ (CRE) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸ್ನಾತಕೋತ್ತರ ಅಥವಾ ಪದವಿ ಪಡೆದ ಆಸಕ್ತ ಅಭ್ಯರ್ಥಿಗಳು ನಿಗದಿತ ಶೈಕ್ಷಣಿಕ ಅರ್ಹತೆಯೊಂದಿಗೆ ಸ್ವ-ಹಸ್ತಾಕ್ಷರದ ಅರ್ಜಿಯನ್ನು ಸಲ್ಲಿಸಬಹುದು. ಉತ್ತಮ ವೇತನ ಶ್ರೇಣಿಯ ಈ ಹುದ್ದೆಗಳಿಗೆ ತಕ್ಷಣವೇ ಅರ್ಜಿ ಸಲ್ಲಿಸಿ.

ಬೆಂಗಳೂರಿನ ರಾಜಾಜಿನಗರದಲ್ಲಿರುವ ನವಕಲ್ಯಾಣ ಕರ್ನಾಟಕ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿಯಮಿತವು ತನ್ನ ಪ್ರಧಾನ ಕಚೇರಿ ಹಾಗೂ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತರು ತಕ್ಷಣವೇ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ:
ಸೊಸೈಟಿಯ ಪ್ರಧಾನ ಕಚೇರಿಗೆ ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿ (Deputy CEO) ದರ್ಜೆಯ ೧ ಹುದ್ದೆ ಹಾಗೂ ಪ್ರಧಾನ ಕಚೇರಿಯ ಶಾಖೆಗೆ ಗ್ರಾಹಕ ಸಂಪರ್ಕ ನಿರ್ವಾಹಕರು (Customer Relation Executive) ದರ್ಜೆಯ ೧ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 35000 ದಿಂದ 51000ರೂ. ವೇತನ ಶ್ರೇಣಿ ಹಾಗೂ ಗ್ರಾಹಕ ಸಂಪರ್ಕ ನಿರ್ವಾಹಕ ಹುದ್ದೆಗೆ 13500 ರಿಂದ 23300 ರೂ. ವೇತನ ಶ್ರೇಣಿ ನಿಗದಿಪಡಿಸಲಾಗಿದೆ.
ಅಗತ್ಯ ಶೈಕ್ಷಣಿಕ ವಿದ್ಯಾರ್ಹತೆ:
ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯಲ್ಲಿ (Post Graduation) ಸರಾಸರಿ ಕನಿಷ್ಠ ಶೇಕಡಾ 50 ರಷ್ಟು ಅಂಕಗಳನ್ನು ಗಳಿಸಿರಬೇಕು. ಅದೇ ರೀತಿ, ಗ್ರಾಹಕ ಸಂಪರ್ಕ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಪದವಿಯಲ್ಲಿ (Graduation) ಸರಾಸರಿ ಕನಿಷ್ಠ ಶೇಕಡಾ 50 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಇದನ್ನೂ ಓದಿ: ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!
ಅರ್ಜಿ ಸಲ್ಲಿಸುವ ವಿಧಾನ ಮತ್ತು ಸಂಪರ್ಕ ವಿವರ:
ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಸ್ವ-ಹಸ್ತಾಕ್ಷರದಲ್ಲಿ (Handwritten) ಅರ್ಜಿಯನ್ನು ಸಿದ್ಧಪಡಿಸಿ ಸೊಸೈಟಿಯ ವಿಳಾಸಕ್ಕೆ ಸಲ್ಲಿಸಬೇಕಿರುತ್ತದೆ.
- ಸಂಸ್ಥೆಯ ವಿಳಾಸ: ನವಕಲ್ಯಾಣ ಕರ್ನಾಟಕ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿಯಮಿತ, ನಂ. ೨೭೭/೨೭, ೫೯ನೇ ಅಡ್ಡರಸ್ತೆ, ವಾಟಾಳ್ ನಾಗರಾಜ್ ರಸ್ತೆ, ೩ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು – ೫೬೦ ೦೧೦.
- ಸಂಪರ್ಕ ದೂರವಾಣಿ ಸಂಖ್ಯೆ: 080-23150036, 94812 50036
- ಇಮೇಲ್: nkkcredit@gmail.com
- ಅಧಿಕೃತ ವೆಬ್‌ಸೈಟ್: www.nkkcredit.com
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




