ಕೊರೊನಾ ಆತಂಕದ ಕಾರಣದಿಂದ ಸ್ಥಗಿತವಾಗಿದ್ದ ಬೆಂಗಳೂರು-ಕಾರವಾರ ನಡುವೆ ರೈಲು ಸಂಚಾರ ಪುನಾರಂಭವಾಗಲಿದೆ. ಆಗಸ್ಟ್ 16ರಿಂದ ಹಗಲಿನಲ್ಲಿ ಒಂದು ರೈಲು ಸಂಚಾರ ಸೇವೆ ನೀಡಲಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮೇರೆಗೆ ಬೆಂಗಳೂರು- ಕಾರವಾರ ರೈಲು ಪುನರಾರಂಭಗೊಳ್ಳಲಿದೆ. ಈ ಮಾರ್ಗದ ರೈಲಿನಲ್ಲಿ ವಿಸ್ಟಾಡೋಮ್ ಕೋಚ್ ಅಳವಡಿಸಲು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮನವಿ ಸಲ್ಲಿಸಿದ್ದಾರೆ.
Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,669 ಜನರಿಗೆ ಕೊರೊನಾ ದೃಢ; 22 ಮಂದಿ ಸಾವು
ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 13) ಹೊಸದಾಗಿ 1,669 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,26,401 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,66,739 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 22 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,933 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 22,703 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 425 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,32,220 ಕ್ಕೆ ಏರಿಕೆಯಾಗಿದೆ. 12,32,220 ಸೋಂಕಿತರ ಪೈಕಿ 12,08,097 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,933 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,189 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 2, ಬಳ್ಳಾರಿ 2, ಬೆಳಗಾವಿ 49, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 425, ಬೀದರ್ 0, ಚಾಮರಾಜನಗರ 22, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 51, ಚಿತ್ರದುರ್ಗ 16, ದಕ್ಷಿಣ ಕನ್ನಡ 390, ದಾವಣಗೆರೆ 18, ಧಾರವಾಡ 8, ಗದಗ 3, ಹಾಸನ 113, ಹಾವೇರಿ 0, ಕಲಬುರಗಿ 3, ಕೊಡಗು 73, ಕೋಲಾರ 27, ಕೊಪ್ಪಳ 2, ಮಂಡ್ಯ 35, ಮೈಸೂರು 106, ರಾಯಚೂರು 2, ರಾಮನಗರ 0, ಶಿವಮೊಗ್ಗ 56, ತುಮಕೂರು 69, ಉಡುಪಿ 115, ಉತ್ತರ ಕನ್ನಡ 62, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ:
TV9 Kannada Digital Poll: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕೇ? ಬೇಡವೇ? ನಿಮ್ಮ ಅಭಿಪ್ರಾಯ ತಿಳಿಸಿ
ದೇಶವ್ಯಾಪಿ ರೈಲು ನಿಲ್ದಾಣಗಳಿಗೆ ಕಾಯಕಲ್ಪ: ಅತ್ಯಾಧುನಿಕ ಸೌಕರ್ಯ, ಕಣ್ಸೆಳೆಯುವ ಅಲಂಕಾರ
(Bengaluru Karwar railway starts from August 16 by Request of Central Minister Shobha Karandlaje)
Published On - 6:15 pm, Fri, 13 August 21