ಬೆಂಗಳೂರಿನ ಮಹಾಲಕ್ಷ್ಮೀಯನ್ನು 50ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿದ್ದ ಹಂತಕ ಆತ್ಮಹತ್ಯೆ

ಇಡೀ ಬೆಂಗಳೂರನ್ನೇ ನಡುಗಿಸಿದ್ದ ವೈಯಾಲಿಕಾವಲ್​ನಲ್ಲಿ ನಡೆದ ಮಹಾಲಕ್ಷ್ಮೀ ಕೊಲೆ ಪ್ರಕರಣವನ್ನು ಕೊನೆಗೂ ಪೊಲೀಸರು ಭೇದಿಸಿದ್ದಾರೆ. ಮಹಾಲಕ್ಷ್ಮಿಯ ಮೃತದೇಹವನ್ನ ಪೀಸ್ ಪೀಸ್ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಕೂಡ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗಾಗಲೇ ಒಡಿಶಾಗೆ ಬೆಂಗಳೂರು ಪೊಲೀಸರ ತಂಡ ತೆರಳಿದೆ.

ಬೆಂಗಳೂರಿನ ಮಹಾಲಕ್ಷ್ಮೀಯನ್ನು 50ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿದ್ದ ಹಂತಕ ಆತ್ಮಹತ್ಯೆ
ಬೆಂಗಳೂರಿನ ಮಹಾಲಕ್ಷ್ಮೀಯನ್ನು 50ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿದ್ದ ಹಂತಕ ಆತ್ಮಹತ್ಯೆ
Follow us
Jagadisha B
| Updated By: ಗಂಗಾಧರ​ ಬ. ಸಾಬೋಜಿ

Updated on:Sep 25, 2024 | 8:55 PM

ಬೆಂಗಳೂರು, ಸೆಪ್ಟೆಂಬರ್​​ 25: ನಗರದ ವೈಯಾಲಿಕಾವಲ್​ನಲ್ಲಿ ನಡೆದ ಮಹಾಲಕ್ಷ್ಮೀ (Mahalaxmi) ಕೊಲೆ ಪ್ರಕರಣವನ್ನು ಪೊಲೀಸರು ಕೊನೆಗೂ ಭೇದಿಸಿದ್ದಾರೆ. ಕೊಲೆಗಾರ ಒಡಿಶಾದಲ್ಲಿರುವುದು ಪೊಲೀಸರಿಗೆ ಗೊತ್ತಾಗಿತ್ತು. ಇನ್ನೇನು ಆತನನ್ನು ಬಂಧಿಸಬೇಕು ಎನ್ನುವಾಗಲೇ ಶಂಕಿತ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಕ್ತಿ ರಂಜನ್​ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಮಹಾಲಕ್ಷ್ಮೀ ಕೊಲೆ ಬಳಿಕ ಮೃತ ಮುಕ್ತಿ ರಂಜನ್​ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈಗಾಗಲೇ ಬೆಂಗಳೂರು ಪೊಲೀಸರು ವಿಚಾರಣೆಗೆ ಒಡಿಶಾಗೆ ತೆರಳಿದ್ದಾರೆ.

ಮಹಾಲಕ್ಷ್ಮೀ ಕೊಲೆ ಕೇಸ್​ನಲ್ಲಿ ಸಾಕಷ್ಟು ಜನರ ಹೆಸರು ತಳುಕು ಹಾಕಿಕೊಂಡಿತ್ತು. ಸುಂದರಿ ಸಂಪರ್ಕದಲ್ಲಿದ್ದವರಿಗೆ ಸಂಕಷ್ಟ ಎದುರಾಗಿತ್ತು. ಹಂತಕ ಯಾರು ಅನ್ನೋದು ಪತ್ತೆ ಹಚ್ಚುವುದೇ  ಸವಾಲಾಗಿತ್ತು. ನಿರಂತರ ತನಿಖೆ ಬಳಿಕ ಹಂತಕನ ಸುಳಿವು ಪೊಲೀಸರಿಗೆ ಸಿಕ್ಕಿತ್ತು.

ಇದನ್ನೂ ಓದಿ: ಬೆಂಗಳೂರು ಮಹಾಲಕ್ಷ್ಮೀ ಕೊಲೆ: ಸಾವಿನ ಮನೆಯಲ್ಲಿ ಹಲವರ ಬೆರಳಚ್ಚು ಗುರುತು ಪತ್ತೆ, ಹೊರ ರಾಜ್ಯಗಳಲ್ಲೂ ಪೊಲೀಸರ ತಲಾಶ್​

ಇಷ್ಟಕ್ಕೂ ಮಹಾಲಕ್ಷ್ಮೀ ಮಲ್ಲೇಶ್ವರಂನಲ್ಲಿರುವ ಫ್ಯಾಷನ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಳು. ಒಡಿಶಾ ಮೂಲದ ಮುಕ್ತಿ ರಂಜನ್ ರಾಯ್ ಅನ್ನೋನು ಇಲ್ಲಿ ಟೀಮ್ ಹೆಡ್ ಆಗಿದ್ದ. ಮಹಾಲಕ್ಷ್ಮೀ ಬ್ಯೂಟಿಗೆ ಮನಸೋತಿದ್ದ. ಇಬ್ಬರ ನಡುವೆ ಸಲುಗೆ ಬೆಳೆದಿತ್ತು. ಸೆಪ್ಟೆಂಬರ್ 1 ರಂದು ಕೆಲಸಕ್ಕೆ ಬಂದಿದು, ಮಾರನೇ ದಿನ ಒಟ್ಟಿಗೆ ವೀಕ್ಲಿ ಆಫ್ ತಗೊಂಡಿದ್ದರು. ತನ್ನ ತಾಯಿಗೆ ಫೋನ್ ಮಾಡಿದ್ದ ಮಹಾಲಕ್ಷ್ಮೀ, ಅಮ್ಮ ಮನೆಗೆ ಬರ್ತೀನಿ ಅಂತ ಹೇಳಿದ್ದಳು. ಬಳಿಕ ಅದೇನ್ ಆಯ್ತೋ ಏನೋ.. ಹಂತಕ ಮುಕ್ತಿ ರಂಜನ್ ರಾಯ್ ತನ್ನ ಗೆಳತಿ ಮಹಾಲಕ್ಷ್ಮೀಯನ್ನ ಬರ್ಬರವಾಗಿ ಕೊಲೆ ಮಾಡಿದ್ದ. ಮೃತದೇಹವನ್ನ 50ಕ್ಕೂ ಹೆಚ್ಚು ಪೀಸ್ ಮಾಡಿ, ಫ್ರೀಡ್ಜ್​ಗೆ ತುಂಬಿಸಿ ತನ್ನೂರಿಗೆ ಎಸ್ಕೇಪ್ ಆಗಿದ್ದ.

ಬೆಂಗಳೂರಿನಲ್ಲಿ ಹತ್ಯೆ: ಒಡಿಶಾದಲ್ಲಿ ಹಂತಕ ಸೂಸೈಡ್

ವಿಪರ್ಯಾಸ ಅಂದರೆ ಬೆಂಗಳೂರಿನಲ್ಲಿ ಮಹಾಲಕ್ಷ್ಮೀಯನ್ನ ಕೊಂದು ಒಡಿಶಾಗೆ ಎಸ್ಕೇಪ್ ಆಗಿದ್ದ ಆರೋಪಿ, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೊಲೀಸರು ತನ್ನ ಜನ್ಮ ಜಾಲಾಡುತ್ತಿದ್ದಾರೆ ಎಂಬ ವಿಷಯ ತಿಳಿದು ನೇಣಿಗೆ ಕೊರಳೊಡ್ಡಿದ್ದಾನೆ. ಆರೋಪಿಯ ಬೆನ್ನು ಬಿದ್ದಿದ್ದ ವೈಯಾಲಿಕಾವಲ್ ಪೊಲೀಸರಿಗೆ ಒಡಿಶಾದಲ್ಲಿ ವಿಷಯ ಗೊತ್ತಾಗಿದೆ.

ಇದನ್ನೂ ಓದಿ: ಬೆಂಗಳೂರು ಮಹಾಲಕ್ಷ್ಮಿ ಕೊಲೆ ಕೇಸ್: ಹಂತಕ ಅಶ್ರಫ್ ಅಲ್ಲ, ಹೊರರಾಜ್ಯದವನು; ಪೊಲೀಸರಿಗೆ ಸಿಕ್ತು ಸ್ಫೋಟಕ ಮಾಹಿತಿ

ಸದ್ಯ ಇಲ್ಲಿ ಕೊಲೆಗೆ ಕಾರಣ ತಿಳಿಸಬೇಕಿದ್ದ ಕೊಲೆಗಾರನೂ ಸಾವಿನ ಕದ ತಟ್ಟಿದ್ದಾನೆ. ಇಡೀ ಬೆಂಗಳೂರನ್ನೇ ನಡುಗಿಸಿರುವ ಕೊಲೆ ಯಾವ ಕಾರಣಕ್ಕೆ ನಡೆಯಿತು ಎನ್ನುವುದು ಸದ್ಯಕ್ಕಂತೂ ನಿಗೂಢವಾಗೇ ಉಳಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:29 pm, Wed, 25 September 24

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು