ಬೆಂಗಳೂರು ಮಹರಾಣಿ ಕಾಲೇಜು ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

| Updated By: ವಿವೇಕ ಬಿರಾದಾರ

Updated on: Jun 18, 2024 | 2:50 PM

ಬೆಂಗಳೂರಿನ ಪ್ರತಿಷ್ಠಿತ ಮಹಾರಾಣಿ ಕಾಲೇಜಿನಲ್ಲಿ ಬಿಎಸ್​ಸಿ ಪ್ರಥಮ ವರ್ಷ ಓದುತ್ತಿದ್ದ ವಿದ್ಯಾರ್ಥಿನಿ ಪಾವನಾ ಹಾಸ್ಟೇಲ್​​ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈಗ್ರೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಕಲೆಹಾಕಿದರು.

ಬೆಂಗಳೂರು ಮಹರಾಣಿ ಕಾಲೇಜು ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಜೂನ್​ 18: ನಗರದ ಪ್ರತಿಷ್ಠಿತ ಮಹಾರಾಣಿ ಕಾಲೇಜಿನ (Maharani College) ಹಾಸ್ಟೆಲ್​​ನಲ್ಲಿ ಓರ್ವ ವಿದ್ಯಾರ್ಥಿನಿ (Student) ಡೆತ್​ನೋಟ್​​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಎಸ್​ಇ ಓದುತ್ತಿದ್ದ ಪಾವನಾ (19) ಮೃತ ದುರ್ದೈವಿ. ಮೃತ ಪಾವನಾ ಮಹಾರಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್​ಸಿ ಓದುತ್ತಿದ್ದರು. ವಿದ್ಯಾರ್ಥಿನಿ ಪಾವನಾ ಜೂ.16 ರಂದು ಹಾಸ್ಟೆಲ್​ನ ರೂಂ‌ ನಂಬರ್ 17ರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದು ರಾತ್ರಿ 11.30ರ ಸುಮಾರಿಗೆ ಗೆಳತಿಯರು ಪಾವನಾ ರೂಂನಲ್ಲಿ ಇಣುಕಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕೂಡಲೆ ವಿದ್ಯಾರ್ಥಿನಿಯರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಈ ವಿಚಾರ ತಿಳಿದ ಹೈಗ್ರೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಕಲೆಹಾಕಿದರು. ಪೊಲೀಸರು ಪಾವನಾ ಡೆತ್​ ನೋಟ್​ ವಶಕ್ಕೆ ಪಡೆದು, ನೋಡಿದಾಗ ಪಾವನಾ ” ಆ್ಯಪ್​ವೊಂದರಲ್ಲಿ 15 ಸಾವಿರ ರೂ. ಹೂಡಿಕೆ ಮಾಡಿದ್ದು” ಉಲ್ಲೇಖವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಪ್ರಕರಣ ಸಂಬಂಧ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಮಾತನಾಡಿ, ಅವರ ತಂದೆ ನೀಡಿದ ದೂರಿನ ಮೇಲೆ ಅಸ್ವಾಭಾವಿಕ ಸಾವು ಅಂತ ದೂರು ಮಾಡಿಕೊಂಡಿದ್ದೇವೆ. ಪಾವನಾ ಅವರು 15 ಸಾವಿರ ಹಣವನ್ನ ಆನ್ ಲೈನ್ ಆ್ಯಪ್​ನಲ್ಲಿ ಹಣ ಹೂಡಿಕೆ‌ ಮಾಡಿದ್ದರು. ಆದರೆ, ಹೂಡಿಕೆ ಮಾಡಿದ ಹಣ ವಾಪಸ್ಸು ಬಂದಿಲ್ಲ. ಅದ್ದರಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಿದರು.

ರೈಲಿಗೆ ಸಿಕ್ಕಿ ಯುವತಿ ಸಾವು

ಕೋಲಾರ: ರೈಲಿಗೆ ಸಿಕ್ಕಿ ಯುವತಿ ಮೃತಪಟ್ಟಿರುವ ಘಟನೆ ಮಾಲೂರು ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮಾಲೂರು ತಾಲೂಕಿನ ಅರಳೇರಿ ಗ್ರಾಮದ ಸಂಧ್ಯಾ (22) ಮೃತ ಯುವತಿ. ಯುವತಿ ಸಂಧ್ಯಾ ಫ್ಲಿಪ್ಕಾರ್ಟ್ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಬೆಳಗ್ಗೆ ಗ್ರಾಮದಿಂದ ಕೆಲಸಕ್ಕೆ ಎಂದು ಬಂದ ಯುವತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ

ಇನ್ಫೋಸಿಸ್ ಉದ್ಯೋಗಿ ಆತ್ಮಹತ್ಯೆ

ಕೋಲಾರ: ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮದ ಇನ್ಫೋಸಿಸ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹರೀಶ್ (28) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಒಂದು ತಿಂಗಳ ಹಿಂದಷ್ಟೇ ದೇವನಹಳ್ಳಿ ಮೂಲದ‌ ಹುಡುಗಿಯೊಂದಿಗೆ ಹರೀಶ್​ನ ವಿವಾಹವಾಗಿತ್ತು, ಇಂದು ಬೆಳಗಿನ ಜಾವ ಕೆಲಸ ಮುಗಿಸಿಕೊಂಡು ಹೋಗಿ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:25 pm, Tue, 18 June 24