ಬೆಂಗಳೂರಿನ ಜಿಟಿ ಮಾಲ್​​ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್​​ನಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಮಾಲ್​​ನ 3ನೇ ಮಹಡಿಯಿಂದ ಬಿದ್ದು ಯುವ ಮೃತಪಟ್ಟಿದ್ದಾನೆ. ಮಾಲ್ ಬೆಳಗ್ಗೆ ತೆರೆಯುತ್ತಿದ್ದಂತೆ ಕಟ್ಟಡದಿಂದ ಬಿದ್ದು ಯುವಕ ಕೊನೆಯುಸಿರೆಳೆದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಕೆಪಿ ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಯತಪ್ಪಿ ಬಿದ್ದಿದ್ದೋ ಎಂದು ತಿಳಿಯಲು ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಲಾಗುತ್ತಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಮಾಲ್​ಗೆ ಸಾರ್ವಜನಿಕರ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದಾರೆ.

ಬೆಂಗಳೂರಿನ ಜಿಟಿ ಮಾಲ್​​ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವು
ಬೆಂಗಳೂರು ಮಾಲ್
Edited By:

Updated on: Oct 20, 2025 | 11:41 AM

ಬೆಂಗಳೂರು, ಅಕ್ಟೋಬರ್ 20: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್​​ನಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಮಾಲ್​​ನ 3ನೇ ಮಹಡಿಯಿಂದ ಬಿದ್ದು ಯುವ ಮೃತಪಟ್ಟಿದ್ದಾನೆ. ಮಾಲ್ ಬೆಳಗ್ಗೆ ತೆರೆಯುತ್ತಿದ್ದಂತೆ ಕಟ್ಟಡದಿಂದ ಬಿದ್ದು ಯುವಕ ಕೊನೆಯುಸಿರೆಳೆದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಕೆಪಿ ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಯತಪ್ಪಿ ಬಿದ್ದಿದ್ದೋ ಎಂದು ತಿಳಿಯಲು ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಲಾಗುತ್ತಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಮಾಲ್​ಗೆ ಸಾರ್ವಜನಿಕರ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದಾರೆ.

ಕಳೆದ ವರ್ಷ ಹಾವೇರಿ ಮೂಲದ ವ್ಯಕ್ತಿಯೊಬ್ಬರು ರೈತರ ಸಾಂಪ್ರದಾಯಿಕ ಉಡುಪು ಧರಿಸಿ ಬಂದಿದ್ದರು, ಅವರಿಗೆ ಮಾಲ್ ಒಳಗೆ ಪ್ರವೇಶಕ್ಕೆ ಅನುಮತಿ ನೀಡದೆ ಜಿಟಿ ಮಾಲ್ ಸುದ್ದಿಯಾಗಿತ್ತು. 7 ದಿನಗಳ ಕಾಲ ಮಾಲ್ ಬಂದ್ ಮಾಡಲಾಗಿತ್ತು. ವ್ಯಕ್ತಿಯ ಬಟ್ಟೆ ನೋಡಿ ಅವಮಾನಿಸಿದ ಘಟನೆ ಜುಲೈ 16ರಂದು ನಡೆದಿತ್ತು.

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:35 am, Mon, 20 October 25