AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಗೆಳತಿಯ ಅಣ್ಣನಿಂದ ಬೆಂಗಳೂರಿನ ಬಾಲಕಿ ಮೇಲೆ ಅತ್ಯಾಚಾರ; ವಿಡಿಯೋ ಮಾಡಿಕೊಂಡು ಬ್ಲಾಕ್​ಮೇಲ್

Rape in Bangalore: ಕಳೆದ ಅಕ್ಟೋಬರ್‌ನಲ್ಲಿ ಆ ಬಾಲಕಿ ತನ್ನ ಸ್ನೇಹಿತೆಯ ಮನೆಗೆ ಹೋದಾಗ ಈ ಘಟನೆ ನಡೆದಿದ್ದು, ಆಕೆಯ ಸ್ನೇಹಿತೆ ಮನೆಯಲ್ಲಿ ಇರದಿದ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆದಿದೆ.

Bengaluru Crime: ಗೆಳತಿಯ ಅಣ್ಣನಿಂದ ಬೆಂಗಳೂರಿನ ಬಾಲಕಿ ಮೇಲೆ ಅತ್ಯಾಚಾರ; ವಿಡಿಯೋ ಮಾಡಿಕೊಂಡು ಬ್ಲಾಕ್​ಮೇಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 10, 2022 | 7:20 PM

Share

ಬೆಂಗಳೂರು: ಬೆಂಗಳೂರಿನಲ್ಲಿ 15 ವರ್ಷದ ಬಾಲಕಿಯ ಮೇಲೆ 20 ವರ್ಷದ ಯುವಕ ಮತ್ತು ಇಬ್ಬರು ಅಪ್ರಾಪ್ತರು ಸೇರಿದಂತೆ 5 ಜನರು ಅತ್ಯಾಚಾರ ನಡೆಸಿ, ಬ್ಲಾಕ್ ಮೇಲ್ ಮಾಡಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಬಾಲಕಿಯ ಸ್ನೇಹಿತೆಯ ಅಣ್ಣ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು ಮಾತ್ರವಲ್ಲದೆ ತನ್ನ ಮೊಬೈಲ್ ಫೋನ್‌ನಲ್ಲಿ ತಾವು ಮಾಡಿದ ಅತ್ಯಾಚಾರವನ್ನು ರೆಕಾರ್ಡ್​ ಮಾಡಿಕೊಂಡಿದ್ದಾನೆ. ಆ ವಿಡಿಯೋವನ್ನು ತನ್ನ ಇತರೆ ಗೆಳೆಯರಿಗೆ ಶೇರ್ ಮಾಡಿದ್ದು, ಇದೇ ವಿಡಿಯೋವನ್ನಿಟ್ಟುಕೊಂಡು ಅವರೆಲ್ಲರೂ ಸೇರಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆಕೆಯಿಂದ ಹಣ ವಸೂಲಿ ಮಾಡಲು ಪ್ರಯತ್ನಿಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಆ ಬಾಲಕಿ ತನ್ನ ಸ್ನೇಹಿತೆಯ ಮನೆಗೆ ಹೋದಾಗ ಈ ಘಟನೆ ನಡೆದಿದ್ದು, ಆಕೆಯ ಸ್ನೇಹಿತೆ ಮನೆಯಲ್ಲಿ ಇರದಿದ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ. ಈ ಮಧ್ಯೆ, ಸಂತ್ರಸ್ತೆಯ ಮೇಲೆ ಆಕೆಯ ಸ್ನೇಹಿತೆಯ ಅಣ್ಣ ಅತ್ಯಾಚಾರವೆಸಗಿದ್ದು, ಆತ ತನ್ನ ಮೊಬೈಲ್‌ನಲ್ಲಿ ಆ ಘಟನೆಯನ್ನು ರೆಕಾರ್ಡ್​ ಮಾಡಿಕೊಂಡಿದ್ದ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆರೋಪಿ ತನ್ನ ಸ್ನೇಹಿತರೊಂದಿಗೆ ತಾನು ಅತ್ಯಾಚಾರ ನಡೆಸಿದ ವೀಡಿಯೊವನ್ನು ಹಂಚಿಕೊಂಡ ನಂತರ ಅವರೆಲ್ಲರೂ ಅವಳನ್ನು ಬೆದರಿಸಲು ಮತ್ತು ಲೈಂಗಿಕವಾಗಿ ಬಳಸಿಕೊಳ್ಳಲು ಶುರು ಮಾಡಿದ್ದರು.

ಸಂತ್ರಸ್ತೆಯ ತಾಯಿ ತನ್ನ ಮಗಳ ನಡವಳಿಕೆಯಲ್ಲಿ ಸ್ವಲ್ಪ ಬದಲಾವಣೆಯನ್ನು ಕಂಡಳು. ದಿನದಿಂದ ದಿನಕ್ಕೆ ಅವಳು ಖಿನ್ನತೆಗೊಳಗಾಗುತ್ತಿರುವುದನ್ನು ಕಂಡು ಮಗಳಲ್ಲಿ ಈ ಬಗ್ಗೆ ಪ್ರಶ್ನಿಸಿದಳು. ಮೊದಲಿಗೆ, ಆ ಹುಡುಗಿ ತನ್ನ ತಾಯಿಗೆ ಏನೂ ಹೇಳಲಿಲ್ಲ. ಆದರೆ, ಅಮ್ಮ ಪದೇಪದೆ ಕೇಳಿದಾಗ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೊಂಡಳು. ಹೀಗಾಗಿ, ಏಪ್ರಿಲ್ 6ರಂದು ಆರೋಪಿಯ ವಿರುದ್ಧ ಅವರು ದೂರು ದಾಖಲಿಸಿದ್ದಾರೆ.

ಈ ಪ್ರಕರಣದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಕಾರ್ಯಾಚರಣೆ ನಡೆಸಿ 6 ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ 8 ಮಂದಿ ಶಂಕಿತರ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Bengaluru Gangrape: 16 ವರ್ಷದ ಬಾಲಕಿ ಮೇಲೆ 8 ಜನರಿಂದ ನಿರಂತರ ಲೈಂಗಿಕ ದೌರ್ಜನ್ಯ; 7 ಆರೋಪಿಗಳು ಅರೆಸ್ಟ್

Bengaluru Gang Rape: ಬೆಂಗಳೂರಿನ ನರ್ಸ್​ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ರಾಷ್ಟ್ರೀಯ ಮಟ್ಟದ ಈಜುಗಾರರ ಬಂಧನ

Published On - 7:19 pm, Sun, 10 April 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು