AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ: ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ

ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ತಾನೊಬ್ಬ ದೊಡ್ಡ ಉದ್ಯಮಿ ಎಂದು ನಂಬಿಸಿ, ಯುವತಿ ಮತ್ತು ಆಕೆಯ ಸ್ನೇಹಿತರಿಂದ 1.75 ಕೋಟಿ ರೂ. ವಂಚಿಸಿದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ದೂರು ದಾಖಲಾಗಿದೆ. ಈತ ಈಗಾಗಲೇ ವಿವಾಹಿತನಾಗಿದ್ದು, ತನ್ನ ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿದ್ದ. ವಂಚನೆಗೆ ಒಳಗಾದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಮುಂದುವರಿದಿದೆ.

ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ: ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
ಆರೋಪಿ ಮತ್ತು ಸಂತ್ರಸ್ತ ಯುವತಿ
ಪ್ರಸನ್ನ ಹೆಗಡೆ
|

Updated on:Jan 18, 2026 | 2:56 PM

Share

ಬೆಂಗಳೂರು, ಜನವರಿ 18: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವ್ಯಕ್ತಿಯೋರ್ವ ಯುವತಿ ಮತ್ತು ಆಕೆಯ ಸಂಬಂಧಿಕರು, ಸ್ನೇಹಿತರಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಯುವತಿಗೆ 2024 ಮಾರ್ಚ್​​ನಲ್ಲಿ ಆರೋಪಿ ಪರಿಚಯವಾಗಿದ್ದ. ತಾನು ದೊಡ್ಡ ಉದ್ಯಮಿ, 715 ಕೋಟಿ ಆಸ್ತಿ ಇದೆ ಎಂದು ಹೇಳಿಕೊಂಡಿದ್ದ ಈತ ತಂದೆಯನ್ನ ನಿವೃತ್ತ ತಹಶೀಲ್ದಾರ್ ಎಂದು ಪರಿಚಯಿಸಿದ್ದ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಯುವತಿಗೆ ಹೇಳಿದ್ದಲ್ಲದೆ, ಕೆಂಗೇರಿ ಬಳಿ ಕರೆಸಿಕೊಂಡು ಮನೆಯವರಿಗೆ ಪರಿಚಯಿಸಿದ್ದ ಎನ್ನಲಾಗಿದೆ.

ಬಳಿಕ ತನ್ನ ಆಟ ಶುರುಮಾಡಿದ್ದ ಈತ, ಆಸ್ತಿ ಸಂಬಂಧ ಇಡಿಯಲ್ಲಿ ಕೇಸ್ ದಾಖಲಾಗಿದೆ ಮತ್ತು ಅಕೌಂಟ್ ಪ್ರಾಬ್ಲಂ ಆಗಿದೆ ಎಂದಿದ್ದ. ಅದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳು ಮತ್ತು ಕೋರ್ಟ್ ಪ್ರತಿಗಳನ್ನ ತೋರಿಸಿದ್ದ. ಹಣದ ಅವಶ್ಯಕತೆ ಇದೆ ಎಂದು ಮೊದಲು 15 ಸಾವಿರ ಹಣ ಪಡೆದು, ನಂತರ ಒಟ್ಟಿಗೆ ಬ್ಯುಸಿನೆಸ್ ಮಾಡೋಣ ಅಂತಾ ಯುವತಿ ಹೆಸರಲ್ಲಿ ಲೋನ್ ಮಾಡಿಸಿದ್ದ. ಜೊತೆಗೆ ಯುವತಿ ಸ್ನೇಹಿತರ ಬಳಿಯೂ ಸಾಲ ಪಡೆದಿದ್ದ. ಹಂತ ಹಂತವಾಗಿ ಒಟ್ಟು 1.75 ಕೋಟಿ ಹಣ ಪಡೆದಿದ್ದ ಎಂದು ದೂರಲಾಗಿದೆ.

ಇದನ್ನೂ ಓದಿ: ಬಿಎಸ್ಸಿ ಓದಿ ಶೋಕಿಗಾಗಿ ಕಳವು; ಸಿನಿಮಾ ಸ್ಟೈಲ್​​ನಲ್ಲಿ ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಇನ್ನು ಒಮ್ಮೆ 22 ಲಕ್ಷ ಹಣ ವಾಪಸ್ ಕೊಟ್ಟಿದ್ದ ಈತ ಉಳಿದ ಹಣ ನೀಡಲು ಹಿಂದೇಟು ಹಾಕಿದ್ದಾನೆ. ಈ ಬಗ್ಗೆ ಕೇಳಿದ್ದಕ್ಕೆ ಯುವತಿ ಹಾಗೂ ಆಕೆಯ ಸ್ನೇಹಿತರಿಗೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಈತನ ಹಿನ್ನೆಲ ಕೆದಕಿದಾಗ ಸ್ಫೋಟಕ ಮಾಹಿತಿ ಬಯಲಾಗಿದೆ. ಅದಾಗಲೇ ಮದುವೆಯಾಗಿ ಮಗು ಇದ್ದರೂ ಮತ್ತೊಬ್ಬ ಯುವತಿಗೆ ಮದುವೆ ಆಮಿಷ ಒಡ್ಡಿದ್ದಲ್ಲದೆ, ಹಣ ಪೀಕಿರೋದು ಬಟಾಬಯಲಾಗಿದೆ. ಅಲ್ಲದೆ ಮನೆಯವರ ಪರಿಚಯದ ವೇಳೆ ತಾನು ತಾಳಿ ಕಟ್ಟಿರುವ ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿದ್ದ ಎಂಬ ವಿಷಯವೂ ಗೊತ್ತಾಗಿದೆ. ಮೋಸ ಹೋದ ವಿಚಾರ ತಿಳಿಯುತ್ತಿದ್ದಂತೆ ಯುವತಿ ವೈಟ್​​ಫೀಲ್ಡ್​​ ಠಾಣೆಗೆ ದೂರು ನೀಡಿದ್ದು, ವಿಜಯ್ ರಾಜ್ ಗೌಡ, ಬೊರೇಗೌಡ, ಸೌಮ್ಯ ಎಂಬವರ ವಿರುದ್ಧ ಕೇಸ್​​ ದಾಖಲಾಗಿದೆ. ಬಳಿಕ ಪ್ರಕರಣವನ್ನು ಪೊಲೀಸರು ಕೆಂಗೇರಿ ಠಾಣೆಗೆ ವರ್ಗಾಯಿಸಿದ್ದು, ತನಿಖೆ ಮುಂದುವರಿದಿದೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:52 pm, Sun, 18 January 26

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ