AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಸ್ಟೇಷನ್​ಗಳಲ್ಲಿ ಪಾರ್ಕಿಂಗ್ ಮಾಡೋದೇ ದೊಡ್ಡ ಸವಾಲು: ಯೆಲ್ಲೋ ಲೈನ್​ನಲ್ಲಿ ಭಾರಿ ಸಮಸ್ಯೆ

ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದರೊಂದಿಗೆ ಪಾರ್ಕಿಂಗ್ ಸಮಸ್ಯೆ ಮತ್ತು ಸಿಬ್ಬಂದಿಗಳ ಕೊರತೆಯೂ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೇಸರವನ್ನುಂಟುಮಾಡಿದೆ. ಪರ್ಪಲ್ ಲೈನ್​ನಲ್ಲಿ ಟಿಕೆಟ್ ಕೊಡಲು ಸಿಬ್ಬಂದಿಗಳ ಕೊರತೆಯಿದ್ದು, ದಿನ ನಿತ್ಯ ಕಾಲೇಜಿಗೆ ಮೆಟ್ರೋದಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಮೆಟ್ರೋ ಸ್ಟೇಷನ್​ಗಳಲ್ಲಿ ಪಾರ್ಕಿಂಗ್ ಮಾಡೋದೇ ದೊಡ್ಡ ಸವಾಲು: ಯೆಲ್ಲೋ ಲೈನ್​ನಲ್ಲಿ ಭಾರಿ ಸಮಸ್ಯೆ
ಮೆಟ್ರೊ ಪ್ರಯಾಣಿಕರಿಗೆ ಪಾರ್ಕಿಂಗ್ ಅವ್ಯವಸ್ಥೆ
Kiran Surya
| Updated By: ಭಾವನಾ ಹೆಗಡೆ|

Updated on: Sep 19, 2025 | 12:49 PM

Share

ಬೆಂಗಳೂರು, ಸೆಪ್ಟೆಂಬರ್ 19: ಬೆಂಗಳೂರಿನ ಆರ್.ವಿ ರೋಡ್ ಬೊಮ್ಮಸಂದ್ರ ಯೆಲ್ಲೋ ಲೈನ್​ನ ಕೆಲವೊಂದು ಮೆಟ್ರೋ ಸ್ಟೇಷನ್​ಗಳಲ್ಲಿ (Namma metro) ಪ್ರಯಾಣಿಕರಿಗೆ ವಾಹನಗಳನ್ನು ಪಾರ್ಕಿಂಗ್ ಮಾಡಲು ವ್ಯವಸ್ಥೆ ಇಲ್ಲ, ಇತ್ತ ಪರ್ಪಲ್ ಲೈನ್​ನ ಕೆಲ ಮೆಟ್ರೋ ಸ್ಟೇಷನ್​ಗಳಲ್ಲಿ ಟಿಕೆಟ್ ಕೊಡಲು ಸಿಬ್ಬಂದಿಯೇ ಇಲ್ಲ. ಇದರಿಂದ 20 ರಿಂದ 30 ನಿಮಿಷಗಳ ಕಾಲ ಕ್ಯೂನಲ್ಲಿ ನಿಂತು ಪ್ರಯಾಣಿಕರು ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಬಂದಿದೆ.

ಮೆಟ್ರೋ ಪರ್ಪಲ್ ಲೈಲ್ ಸ್ಟೇಷನ್​ನಲ್ಲಿ ಆಗಿರುವ ಸಮಸ್ಯೆಗಳೇನು?

ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗುತ್ತಿದೆ. ಚಲ್ಲಘಟ್ಟ ಟು ವೈಟ್ ಫೀಲ್ಡ್ (ಪರ್ಪಲ್ ಲೈನ್) ನ ಕೆಲ ಮೆಟ್ರೋ ಸ್ಟೇಷನ್​ಗಳಲ್ಲಿ ಮೆಟ್ರೋ ಟಿಕೆಟ್ ಪಡೆಯಲು 30 ನಿಮಿಷ ಸಮಯ ಬೇಕಾಗುತ್ತಿದೆ. ಮೆಟ್ರೋ ಟಿಕೆಟ್ ಪಡೆಯಲು ಪ್ರಯಾಣಿಕರು ಉದ್ದದ ಕ್ಯೂನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಪರ್ಪಲ್ ಲೈನ್​ನ ಕೆಲ ಸ್ಟೇಷನ್ಗಳಲ್ಲಂತೂ ಟಿಕೆಟ್ ಕೊಡಲು ಸಿಬ್ಬಂದಿಯೇ ಇಲ್ಲ.      ಇದೆಲ್ಲದರ ಜೊತೆಗೆ ಲಿಫ್ಟ್, ಎಸ್ಕಲೇಟರ್​ಗಳು  ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಮೆಟ್ರೋದಲ್ಲಿ 15 ನಿಮಿಷಕ್ಕೇ ತಲುಪುವ ಜಾಗಕ್ಕೆ ಹೋಗಲು 90 ನಿಮಿಷಗಳು ಹಿಡಿಯುತ್ತಿವೆ. ಮೆಟ್ರೋ ಟೋಕನ್ಗಾಗಿ ಅರ್ಧ ಗಂಟೆ ಕಾಯಬೇಕು. ಇದೆಲ್ಲದರಿಂದಾಗಿ ಮೆಟ್ರೋ ಪ್ರಯಾಣಿಕರು ಅದರಲ್ಲಿಯೂ ವಿದ್ಯಾರ್ಥಿಗಳು ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ. ಸಿಬ್ಬಂದಿಯ ಕೊರತೆಯಿಂದಾಗಿ ಕಾಲೇಜಿಗೆ ಹೋಗಲು ತಡವಾಗುತ್ತಿದೆ. ಕ್ಲಾಸ್​ಗಳು ತಪ್ಪಿಹೋಗುತ್ತಿವೆ. ಸಧ್ಯದ ಪರಿಸ್ಥಿತಿಯಲ್ಲಿ BMTC ಬಸ್​ನಲ್ಲೇ ಬೇಗ ಹೋಗಬಹುದು. ಬಿಎಂಆರ್‌ಸಿಎಲ್ ಇದರ ಬಗ್ಗೆ ಗಮನ ಹರಿಸಬೇಕೆಂದು ವಿದ್ಯಾರ್ಥಿಗಳು ಬೇಡಿಕೆಯಿಟ್ಟಿದ್ದಾರೆ.

ಮೆಟ್ರೋ ಸ್ಟೇಷನ್​ಗಳಲ್ಲಿ ಪಾರ್ಕಿಂಗ್​ಗಾಗಿ ಪ್ರಯಾಣಿಕರ ಪರದಾಟ!

ಯೆಲ್ಲೂ ಲೈನ್ ಮೆಟ್ರೋ ಸ್ಟೇಷನ್​ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ  ಪ್ರಯಾಣಿಕರು ಪರದಾಡುವಂತಾಗಿದೆ. ಆರ್.ವಿ ರೋಡ್​ನಿಂದ ಬೊಮ್ಮಸಂದ್ರ ಮೆಟ್ರೋ ಮಾರ್ಗದ 16 ಮೆಟ್ರೋ ಸ್ಟೇಷನ್​ಗಳ ಪೈಕಿ 11 ಸ್ಟೇಷನ್ ಗಳಲ್ಲಿ ಮಾತ್ರ ಪಾರ್ಕಿಂಗ್ ವ್ಯವಸ್ಥೆ ಇದೆ. ಉಳಿದ 5 ಮೆಟ್ರೋ ಸ್ಟೇಷನ್​ಳಲ್ಲಿ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ. ಪ್ರತಿದಿನ ನಮ್ಮ ಮೆಟ್ರೋದ ಮೂರು ಮಾರ್ಗದಲ್ಲೂ ಸುಮಾರು 10 ಲಕ್ಷ ಮೆಟ್ರೋ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ. ಅದರಲ್ಲಿ ಯೆಲ್ಲೋ ಲೈನ್​ನಲ್ಲಿ ಸುಮಾರು 70 ರಿಂದ 80 ಸಾವಿರ ಪ್ರಯಾಣಿಕರು ಪ್ರಯಾಣ ಮಾಡುತ್ತಾರೆ. ನಮ್ಮ ಮೆಟ್ರೋದ ಗ್ರೀನ್ ಮತ್ತು ನೇರಳೆ ಮಾರ್ಗದಲ್ಲಿ ಒಟ್ಟು 83 ಮೆಟ್ರೋ ಸ್ಟೇಷನ್​ಗಳಿವೆ. ಅವುಗಳಲ್ಲಿ 18 ಸ್ಟೇಷನ್​ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲ.  ಈ ಅವ್ಯವಸ್ಥೆಯಿಂದ ಬೇಸತ್ತ ಜನರು ಸ್ಟೇಷನ್​ಗಳ ಅಕ್ಕ ಪಕ್ಕದಲ್ಲಿರುವ ಮನೆಗಳ ಮುಂದೆ ವಾಹನಗಳನ್ನು ಪಾರ್ಕ್ ಮಾಡಿ ಹೋಗುತ್ತಿದ್ದಾರೆ.

ಇದನ್ನೂ ಓದಿ ನಮ್ಮ ಮೆಟ್ರೋ ಬ್ಲೂ ಲೈನ್ ಉದ್ಘಾಟನೆ ಯಾವಾಗ? ಡೆಡ್​ಲೈನ್ ನಿದಿಪಡಿಸಿದ ಬಿಎಂಆರ್​ಸಿಎಲ್

ಈ ಬಗ್ಗೆ ಪ್ರಯಾಣಿಕರು ಮೆಟ್ರೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ, ಮೆಟ್ರೋ ಅಧಿಕಾರಿಗಳು ಈಗಾಗಲೇ ಪಾರ್ಕಿಂಗ್ ನೀಡಿದ್ದೇವೆ ಆದರೆ ಟೆಂಡರ್ ಸಮಸ್ಯೆ ಆಗಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಮುಂದಾಗುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ದಿನನಿತ್ಯ ಓಡಾಡುವ ಮೆಟ್ರೋ ಪ್ರಯಾಣಿಕರು ಈ ಬಗ್ಗೆ ಬಿಎಂಆರ್​ಸಿಎಲ್ ಅಧಿಕಾರಿಗಳು ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!