AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮುಂಬೈ ಸೂಪರ್‌ ಫಾಸ್ಟ್ ರೈಲು ಘೋಷಣೆ: ಕರ್ನಾಟಕ ಜನತೆಗೆ ಗುಡ್​​ ನ್ಯೂಸ್​​ ಕೊಟ್ಟ ತೇಜಸ್ವಿ ಸೂರ್ಯ

Bangaluru to Mumbai Super fast Train: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಈ ವಿಚಾರವನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದು, ಆ ಮೂಲಕ 30 ವರ್ಷಗಳ ಬೇಡಿಕೆ ಈಡೇರಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು-ಮುಂಬೈ ಸೂಪರ್‌ ಫಾಸ್ಟ್ ರೈಲು ಘೋಷಣೆ: ಕರ್ನಾಟಕ ಜನತೆಗೆ ಗುಡ್​​ ನ್ಯೂಸ್​​ ಕೊಟ್ಟ ತೇಜಸ್ವಿ ಸೂರ್ಯ
ಅಶ್ವಿನಿ ವೈಷ್ಣವ್, ತೇಜಸ್ವಿ ಸೂರ್ಯ
ಗಂಗಾಧರ​ ಬ. ಸಾಬೋಜಿ
|

Updated on:Sep 27, 2025 | 1:27 PM

Share

ಬೆಂಗಳೂರು, ಸೆಪ್ಟೆಂಬರ್​ 27: ಈಗಾಗಲೇ ಮುಂಬೈ ಟು ಅಹಮದಾಬಾದ್‌ ಮಧ್ಯೆ ಬುಲೆಟ್ ರೈಲು ಯೋಜನೆಯ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಹೀಗಿರುವಾಗ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್​ ನ್ಯೂಸ್​​ ನೀಡಿದ್ದಾರೆ. ಅದೇನೆಂದರೆ ಬೆಂಗಳೂರು ಟು ಮುಂಬೈಗೆ ಸೂಪರ್‌ ಫಾಸ್ಟ್ ರೈಲು (Bangaluru to Mumbai Super fast Train) ಘೋಷಣೆ ಮಾಡಿದ್ದಾರೆ. ಆ ಮೂಲಕ 30 ವರ್ಷಗಳ ಬೇಡಿಕೆ ಈಡೇರಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಸಂತಸ ವ್ಯಕ್ತಪಡಿಸಿದ್ದಾರೆ.

ಶೀಘ್ರದಲ್ಲೇ ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಆರಂಭವೆಂದ ಅಶ್ವಿನಿ ವೈಷ್ಣವ್

ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್​​, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖ ಯೋಜನೆ ಆಗಿದೆ ಎಂದು ಹೇಳಿದರು.

ತೇಜಸ್ವಿ ಸೂರ್ಯ ಟ್ವೀಟ್​

ಈ ವೇಳೆ ಸಂಸದ ತೇಜಸ್ವಿ ಸೂರ್ಯ ಕಾರ್ಯವನ್ನು ಶ್ಲಾಘಿಸಿದ ಅಶ್ವಿನಿ ವೈಷ್ಣವ್, ಬೆಂಗಳೂರು ಟು ಮುಂಬೈ ನಡುವಿನ ಸೂಪರ್‌ಫಾಸ್ಟ್ ರೈಲಿಗಾಗಿ ತೇಜಸ್ವಿ ಅವರು ನಿರಂತರ ಪ್ರಯತ್ನಿಸಿದ್ದು ನನಗೆ ತುಂಬಾ ಸಂತೋಷವಾಗಿದೆ. ನೀವು ಯಾವಾಗಲೂ ಬೆಂಗಳೂರಿನ ಜನರಿಗಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಹಾಡಿಹೊಗಳಿದ್ದಾರೆ.

30 ವರ್ಷಗಳ ಬೇಡಿಕೆ ಈಡೇರಿದೆ ಎಂದ ತೇಜಸ್ವಿ ಸೂರ್ಯ

ಇನ್ನು ಸಂಸದ ತೇಜಸ್ವಿ ಸೂರ್ಯ ಕೂಡ ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಎರಡೂ ನಗರಗಳ ಜನರ 30 ವರ್ಷಗಳ ಬೇಡಿಕೆ ಈಡೇರಿದೆ ಎಂದಿದ್ದಾರೆ.

ಇದನ್ನೂ ಓದಿ: ಅತ್ಯಂತ ದುಬಾರಿ ನಮ್ಮ ಮೆಟ್ರೋ: ದೆಹಲಿ ಮೆಟ್ರೋ ದರ ಏರಿಕೆ ಜತೆ ಹೋಲಿಸಿ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ

ಸದ್ಯ ಬೆಂಗಳೂರು ಮತ್ತು ಮುಂಬೈ ಮಧ್ಯೆ ಉದ್ಯಾನ್ ಎಕ್ಸ್‌ಪ್ರೆಸ್ ಒಂದೇ ಸಂಚಾರ ನಡೆಸಿದ್ದು, ಇದು 24 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ. ಕಳೆದ ವರ್ಷ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡೂ ನಗರಗಳಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಹೀಗಾಗಿ 30 ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಸದ್ಯ ಈ  ಹೊಸ ಸೂಪರ್‌ಫಾಸ್ಟ್ ರೈಲಿ ಸೇವೆಯು ಲಕ್ಷಾಂತರ ಪ್ರಯಾಣಿಕರಿಗೆ ಕೈಗೆಟುಕವ ದರದೊಂದಿಗೆ ಅನುಕೂಲಕರವಾಗಲಿದೆ ಎಂದು ಅವರು ಹೇಳಿದ್ದಾರೆ.

ಬಹುದಿನದ ಕನಸನ್ನು ನನಸಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಕರ್ನಾಟಕ ಮತ್ತು ಕನ್ನಡಿಗರ ಪರವಾಗಿ ಸಂಸದ ತೇಜಸ್ವಿ ಸೂರ್ಯ ಕೃತಜ್ಞತೆ ಸಲ್ಲಿಸಿದರು. ಜೊತೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ಧನ್ಯವಾದ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:20 pm, Sat, 27 September 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ