AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಸ್​ ರಸ್ತೆ ಯೋಜನೆ ಪರಿಶೀಲನೆಗೆ ಸಚಿವ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲು ಮತ್ತು ಭವಿಷ್ಯದ ಕ್ರಮಗಳನ್ನು ಶಿಫಾರಸು ಮಾಡಲು ಕರ್ನಾಟಕ ಸರ್ಕಾರ ಏಳು ಸದಸ್ಯರ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ. ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದ ಭೂವ್ಯಾಜ್ಯಗಳು ಮತ್ತು ಯೋಜನೆಯ ಅಗತ್ಯತೆಯನ್ನು ಉಪಸಮಿತಿ ಪರಿಶೀಲಿಸಲಿದೆ. ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ.

ನೈಸ್​ ರಸ್ತೆ ಯೋಜನೆ ಪರಿಶೀಲನೆಗೆ ಸಚಿವ ಸಂಪುಟ ಉಪ ಸಮಿತಿ ರಚನೆ
ವಿಧಾನಸೌಧ, ನೈಸ್​ ರೋಡ್​
Follow us
ವಿವೇಕ ಬಿರಾದಾರ
|

Updated on: Apr 19, 2025 | 7:08 PM

ಬೆಂಗಳೂರು, ಏಪ್ರಿಲ್​ 19: ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್ ಯೋಜನೆ (BMICP) ಯ ಅನುಷ್ಠಾನ ಕುರಿತು ಇದುವರೆಗೂ ಆಗಿರುವ ಪ್ರಗತಿಯ ಹಿನ್ನೆಲೆಯಲ್ಲಿ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ರಾಜ್ಯ ಸರ್ಕಾರ (Karnataka Government) ಏಳು ಜನರ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಚಿವ ಸಂಪುಟ ಉಪಸಮಿತಿಯ ಅಧ್ಯಕ್ಷರಾಗಿದ್ದಾರೆ. ಕಾನೂನು ಸಚಿವ ಹೆಚ್​.ಕೆ ಪಾಟೀಲ್​, ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ, ಬಹೃತ್​ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್​, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​.ಸಿ ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಇದ್ದಾರೆ.

ಈ ಸಚಿವ ಸಂಪುಟ ಉಪಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ
Image
ಸಾರಿಗೆ ಬಸ್‌ಗಳಲ್ಲಿ ಜಾಹೀರಾತು: ಸಿಎಂ ಕಚೇರಿಯಿಂದ ಬಂತು ಖಡಕ್ ಸೂಚನೆ
Image
ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಕೋಲಾಹಲ: ಇಲ್ಲಿದೆ ಇನ್​ಸೈಡ್ ಡಿಟೇಲ್ಸ್
Image
ಕರ್ನಾಟಕದ ಶೇ. 4 ಮುಸ್ಲಿಂ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಒಪ್ಪಿಗೆ?
Image
ಮೋದಿ ನಿಮ್ಮ ಸರ್ಕಾರ ಬೀಳಿಸುತ್ತಾರೆ, ಹುಷಾರಾಗಿರಿ: ಮಲ್ಲಿಕಾರ್ಜುನ್​ ಖರ್ಗೆ

ಏನಿದು ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್ ಯೋಜನೆ?

ಬೆಂಗಳೂರು-ಮೈಸೂರು ನಡುವೆ 111 ಕಿಮೀ ಎಕ್ಸಪ್ರೆಸ್​ ವೇ ನಿರ್ಮಾಣಕ್ಕೆ ನೈಸ್​ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಮೂರು ದಶಕಗಳ ಗುತ್ತಿಗೆ ಅವಧಿ ಮುಗಿಯುವ ಹಂತದಲ್ಲಿದೆ. ನೈಸ್​ ಯೋಜನೆಗೆ ಸಂಬಂಧಿಸಿದಂತೆ 374 ಭೂವ್ಯಾಜ್ಯ ಪ್ರಕರಣಗಳು ವಿವಿಧ ಕೋರ್ಟ್​ಗಳಲ್ಲಿವೆ. ಕೆಲವು ಪ್ರಕರಣಗಳಲ್ಲಿ ಭೂಸ್ವಾಧೀನವನ್ನು ಕೋರ್ಟ್​ ರದ್ದುಪಡಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ಮಾಡುತ್ತೇವೆ: ಸಿದ್ದರಾಮಯ್ಯ

ಈ ಬಿಎಂಐಟಿ ಯೋಜನೆ ಅಗತ್ಯವಿದೆಯೇ? ಕಂಪನಿಯಿಂದ ಹೆಚ್ಚುವರಿ ಭೂಮಿ ವಾಪಸ್​ ಪಡೆಯಬೇಕೇ? ಎಂಬ ಎಲ್ಲ ಅಂಶಗಳ ಕುರಿತು ಪರಿಶೀಲಿಸಲು ಉಪಸಮಿತಿ ರಚಿಸಲು ಕಳೆದ ಸಚಿವ ಸಂ ಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ