ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 28 ದಿನಗಳಲ್ಲಿ 74,915 ಸಂಚಾರಿ ನಿಯಮ ಉಲ್ಲಂಘನೆ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿದ್ದ ಅಪಘಾತಗಳನ್ನು ತಡೆಯಲು ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆಯ ಎರಡೂ ಬಿದಿಯಲ್ಲಿ 22 ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾಗಳು ಸಂಚಾರಿ ನಿಯಮ ಉಲ್ಲಂಘನೆ ದೃಶ್ಯಗಳನ್ನು ಸೆರೆಹಿಡಿದಿವೆ. 28 ದಿನಗಳಲ್ಲಿ ಬರೊಬ್ಬರಿ 74,915 ಸಂಚಾರಿ ನಿಯಮ ಉಲ್ಲಂಘನೆಯಾಗಿವೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 28 ದಿನಗಳಲ್ಲಿ 74,915 ಸಂಚಾರಿ ನಿಯಮ ಉಲ್ಲಂಘನೆ
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ
Follow us
|

Updated on: Jun 01, 2024 | 8:27 AM

ಬೆಂಗಳೂರು, ಜೂ.01: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (Bengaluru-Mysore National Highway) ಸಂಚಾರಕ್ಕೆ ಮುಕ್ತವಾದ ದಿನದಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ. ಪ್ರಾರಂಭದಲ್ಲಿ ದಿನಗಳಲ್ಲಿ ಈ ಹೆದ್ದಾರಿಯಲ್ಲಿ ಹೆಚ್ಚು ರಸ್ತೆ ಅಪಘಾತ ಸಂಭವಿಸುತ್ತಿದ್ದವು. ಹೆದ್ದಾರಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ (Traffic Rules Break) ಪ್ರಕರಣಗಳು ದಾಖಲಾಗುತ್ತಿದ್ದು, ಇದನ್ನು ತಡೆಗಟ್ಟಲು ವಿನೂತನ ತಂತ್ರಜ್ಞಾನ ಒಳಗೊಂಡಿರುವ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದನ್ನೂ ಮೀರಿ ಕಳೆದ 28 ದಿನಗಳಲ್ಲಿ ಎಷ್ಟು ನಿಯಮ ಉಲ್ಲಂಘಟನೆ ಪ್ರಕರಣಗಳು ದಾಖಲಾಗಿವೆ? ಇಲ್ಲಿದೆ ವಿವರ..

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿ ಗಂಟೆಗೆ 100ಕ್ಕೂ ಹೆಚ್ಚು ಸಂಚಾರ ನಿಯಮ ಉಲ್ಲಂಘನೆಗಳು ದಾಖಲಾಗುತ್ತಿವೆ. ಕಳೆದ 28 ದಿನಗಳಲ್ಲಿ ಒಟ್ಟು 74,915 ಸಂಚಾರ ಉಲ್ಲಂಘನೆ ಪ್ರಕರಣಗಳು ವರದಿಯಾಗಿವೆ. 118 ಕಿ.ಮೀ ಉದ್ದದ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ 22 ಕ್ಯಾಮೆರಾಗಳು ಸಂಚಾರಿ ನಿಯಮ ಉಲ್ಲಂಘನೆ ದೃಶ್ಯಗಳನ್ನು ಸೆರೆ ಹಿಡಿದಿವೆ.

ಸಂಚಾರಿ ನಿಯಮ ಉಲ್ಲಂಘಟನೆ ವಿವರ:

ಸೀಟ್ ಬೆಲ್ಟ್ ಧರಿಸದ ಚಾಲಕರು ಮತ್ತು ಸಹ ಪ್ರಯಾಣಿಕರು ಅತಿ ಹೆಚ್ಚು ಉಲ್ಲಂಘನೆಯಾಗಿದ್ದು, 57,057 ಪ್ರಕರಣಗಳು ದಾಖಲಾಗಿವೆ. ನಂತರ 10,945 ಅತಿವೇಗದ ಪ್ರಕರಣಗಳು, 6,046 ಲೇನ್ ಉಲ್ಲಂಘನೆ ಪ್ರಕರಣಗಳು ಮತ್ತು 494 ಪ್ರಕರಣಗಳು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ ಪ್ರಕರಣಗಳಾಗಿವೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಹೆಚ್ಚಾಗುತ್ತಿದ್ದರಿಂದ, ಸಂಚಾರ ಉಲ್ಲಂಘನೆಗಳನ್ನು ತಡೆಯಲು, ಪೊಲೀಸರು AI ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ANPR) ಕ್ಯಾಮೆರಾಗಳನ್ನು ಪ್ರತಿ ದಿಕ್ಕಿನಲ್ಲಿ ಆರು ಸ್ಥಳಗಳಲ್ಲಿ ಅಳವಡಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಪ್ರತಿ ದಿಕ್ಕಿನಲ್ಲಿಯೂ ಐದು ಇತರ ಸ್ಥಳಗಳಲ್ಲಿ ವೀಡಿಯೊ ಕ್ಯಾಮೆರಾಗಳನ್ನು ಅವಳವಡಿಸಿದೆ. ಮತ್ತು 100 ಕಿಮೀ ವೇಗದ ಮಿತಿಯನ್ನು ನಿಗದಿಪಡಿಸಿದೆ. ಒಂದು ವೇಳೆ ಸಂಚಾರಿ ನಿಯಮ ಉಲ್ಲಂಘಿಸಿದರೆ ಈ ಹೆಚ್ಚಿನ ರೆಸಲ್ಯೂಶನ್ ಕ್ಯಾಮೆರಾಗಳು ದೃಶ್ಯವನ್ನು ಸೆರೆಹಿಡಿಯುತ್ತವೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕಾಮಗಾರಿ ಅಪೂರ್ಣ

ಕ್ಯಾಮೆರಾಗಳಿದ್ದರೂ ಹೆದ್ದಾರಿಯಲ್ಲಿ ಸಂಚರಿಸುವವರು ನಿಯಮ ಉಲ್ಲಂಘಿಸಿ ವೇಗದ ಮಿತಿಯನ್ನು ಮೀರಿ ವಾಹನ ಚಾಲನೆ ಮಾಡುತ್ತಿದ್ದು, ಅಪಘಾತಗಳಿಗೆ ಕಾರಣವಾಗುತ್ತಿದೆ.

ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಮಾತನಾಡಿ, ಕೇವಲ 28 ದಿನಗಳಲ್ಲಿ 74,000 ಕ್ಕೂ ಹೆಚ್ಚು ಅಪರಾಧಗಳು ದಾಖಲಾಗಿವೆ. ಇದು ರಸ್ತೆ ಸುರಕ್ಷತೆಯ ಬಗ್ಗೆ ಜನರ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಹೇಳಿದರು.

ಚಾಲಕರು ಸೀಟ್ ಬೆಲ್ಟ್ ಧರಿಸದಿರುವುದು, ಅತಿವೇಗ ಮತ್ತು ಲೇನ್ ಉಲ್ಲಂಘನೆ ಪ್ರಕರಣಗಳು ಅತಿ ಹೆಚ್ಚಾಗಿವೆ. ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಸೇರಿದಂತೆ ಭಾರೀ ಸರಕು ವಾಹನಗಳು ಸಂಚಾರ ಉಲ್ಲಂಘಟನೆ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿವೆ. ನಿಯಮ ಉಲ್ಲಂಘಿಸಿದ ಎಲ್ಲ ವಾಹನ ಸವಾರರಿಗೂ ನೋಟಿಸ್ ಜಾರಿ ಮಾಡಲಾಗುವುದು ಎಂದು ಹೇಳಿದರು.

ಯಾರೆಲ್ಲ ಸಂಚಾರ ನಿಯಮ ಉಲ್ಲಂಘಿಸಿದ್ದಾರೆ ಅವರ ಫೋನ್‌ಗಳಿಗೆ ಅಧಿಸೂಚನೆಗಳನ್ನು ಕಳುಹಿಸಲಾಗುವುದು. ಇದು ಉಲ್ಲಂಘನೆಗಳ ಬಗ್ಗೆ ಅವರಿಗೆ ಅರಿವು ಮೂಡಿಸುತ್ತದೆ. ಉಲ್ಲಂಘಿಸುವವರ ವಾಹನಗಳು ಟೋಲ್‌ಗಳಲ್ಲಿ ನಿರ್ಗಮಿಸಿದಾಗ ಅವರ ಫಾಸ್ಟ್‌ಟ್ಯಾಗ್ ಖಾತೆಯ ಮೂಲಕ ದಂಡವನ್ನು ತಕ್ಷಣವೇ ಕಡಿತಗೊಳಿಸಬೇಕು. “ಈ ಕಾರ್ಯವಿಧಾನವು ಹೆದ್ದಾರಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆಯನ್ನು ಕಡಿಮೆ ಮಾಡಬಹುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು