Bengaluru Mysuru Expressway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐದೇ ತಿಂಗಳಲ್ಲಿ 570 ಅಪಘಾತ, 55 ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಮೇ ವರೆಗೆ ಒಟ್ಟು 570 ಅಪಘಾತಗಳು ವರದಿಯಾಗಿವೆ. ಇವುಗಳಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದರೆ, 52 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Bengaluru Mysuru Expressway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐದೇ ತಿಂಗಳಲ್ಲಿ 570 ಅಪಘಾತ, 55 ಸಾವು
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ
Follow us
Ganapathi Sharma
|

Updated on: Jun 10, 2023 | 1:22 PM

ಬೆಂಗಳೂರು: ಕೇವಲ ಐದು ತಿಂಗಳಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) 570 ಅಪಘಾತಗಳು (Accidents) ಸಂಭವಿಸಿದ್ದು, 55 ಮಂದಿ ಮೃತಪಟ್ಟಿದ್ದಾರೆ. ಇದು ಎಕ್ಸ್‌ಪ್ರೆಸ್‌ವೇ ಬಗ್ಗೆ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ. ಅತಿವೇಗದ ಚಾಲನೆ, ಚಾಲಕರ ನಿರ್ಲಕ್ಷ್ಯ, ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಎಕ್ಸ್​​​ಪ್ರೆಸ್ ವೇಯಲ್ಲಿ ಹೆಚ್ಚಿನ ಅಪಘಾತಗಳಿಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಮೇ ವರೆಗೆ ಒಟ್ಟು 570 ಅಪಘಾತಗಳು ವರದಿಯಾಗಿವೆ. ಇವುಗಳಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದರೆ, 52 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 184 ಮಂದಿ ಮೂಳೆ ಮುರಿತದಂಥ ಸಮಸ್ಯೆಗಳಿಗೆ ಒಳಗಾಗಿದ್ದರೆ, 279 ಜನರು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸರಕಾರವು ಎಕ್ಸ್‌ಪ್ರೆಸ್‌ವೇನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ವಾಹನಗಳ ವೇಗಕ್ಕೆ ತಡೆಯೊಡ್ಡಲು ಕ್ರಮ ಕೈಗೊಳ್ಳಬೇಕು ಮತ್ತು ಅಪಘಾತ ವಲಯಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಬೇಕು ಎಂದು ಸಂಚಾರ ತಜ್ಞರು ಸಲಹೆ ನೀಡಿದ್ದಾರೆ. ಹೆಚ್ಚಿನ ವಾಹನಗಳು ಎಕ್ಸ್‌ಪ್ರೆಸ್‌ವೇಯಲ್ಲಿ ಸಾಮಾನ್ಯ 160 ಕಿಮೀ ವೇಗದಲ್ಲಿ ಸಂಚರಿಸುತ್ತಿವೆ. ಇದು ಹೆದ್ದಾರಿಯಲ್ಲಿ ಬಹು ಪ್ರವೇಶ ಮತ್ತು ನಿರ್ಗಮನ ಪ್ರದೇಶಗಳಿರುವುದರಿಂದ ಅಪಾಯಕಾರಿಯಾಗಿದೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Bengaluru Mysuru Expressway: ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಪರ್ಯಾಯ ಮಾರ್ಗಗಳಿವು

ರಾಜ್ಯ ರಾಜಧಾನಿ ಬೆಂಗಳೂರಿನ ನಂತರ ಮೈಸೂರು ಕರ್ನಾಟಕದಲ್ಲಿ ಎರಡನೇ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಪರಿಗಣಿಸಲಾಗಿದೆ. ಎರಡೂ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು 119 ಕಿಮೀ ಉದ್ದದ ಎಕ್ಸ್‌ಪ್ರೆಸ್ ವೇ ಅನ್ನು 8,480 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್​​ಪ್ರೆಸ್​ ವೇಯನ್ನು ಮಂಡ್ಯದಲ್ಲಿ ಲೋಕಾರ್ಪಣೆ ಮಾಡಿದ್ದರು. ಆರಂಭದಿಂದಲೂ ದಶಪಥ ಹೆದ್ದಾರಿಯು ಒಂದಿಲ್ಲೊಂದು ಕಾರಣಕ್ಕಾಗಿ ಸುದ್ದಿಯಾಗುತ್ತಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ