ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಏಕಮುಖ ಪ್ರಯಾಣ ದುಬಾರಿ; ಟ್ವಿಟರ್‌ನಲ್ಲಿ ಮಿಶ್ರ ಪ್ರತಿಕ್ರಿಯೆ

ಟೆಕ್ಕಿ ಮತ್ತು ಸ್ವತಂತ್ರ ರಾಜಕೀಯ ಸಲಹೆಗಾರ ಎಂದು ಟ್ವಿಟರ್​ ಪ್ರೊಫೈಲ್​ನಲ್ಲಿ ಬರೆದುಕೊಂಡಿರುವ ರೋಹಿತ್ ಎಂಬವರು ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​ ವೇ ಟೋಲ್ ಸಂಗ್ರಹವನ್ನು ಹಗಲು ದರೋಡೆ ಎಂದು ಟೀಕಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಏಕಮುಖ ಪ್ರಯಾಣ ದುಬಾರಿ; ಟ್ವಿಟರ್‌ನಲ್ಲಿ ಮಿಶ್ರ ಪ್ರತಿಕ್ರಿಯೆ
ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ವೇ ಟೋಲ್ ಶುಲ್ಕ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ
Follow us
Prajwal D'Souza
| Updated By: Rakesh Nayak Manchi

Updated on: Jul 04, 2023 | 3:38 PM

ಬೆಂಗಳೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ನಿಗದಿಪಡಿಸಿದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ (Bengaluru-Mysuru Expressway) ಪ್ರಯಾಣಿಸುವ ಏಕಮುಖ ಪ್ರಯಾಣದ ಟೋಲ್ ಶುಲ್ಕದ ಬಗ್ಗೆ ಸ್ಥಳೀಯ ನಿವಾಸಿಗಳು ಮಾತ್ರವಲ್ಲದೆ ವಿವಿಧ ಸಂಘಟನೆಗಳು ಕೂಡ ಆಕ್ರೋಶ ಹೊರಹಾಕಿವೆ. ಟೆಕ್ಕಿ ಮತ್ತು ಸ್ವತಂತ್ರ ರಾಜಕೀಯ ಸಲಹೆಗಾರ ಎಂದು ಟ್ವಿಟರ್​ ಪ್ರೊಫೈಲ್​ನಲ್ಲಿ ಬರೆದುಕೊಂಡಿರುವ ರೋಹಿತ್ ಎಂಬವರು, ಟೋಲ್ ಸಂಗ್ರಹವನ್ನು ಹಗಲು ದರೋಡೆ ಎಂದು ಆರೋಪಿಸಿದ್ದು, ಇವರ ಟ್ವೀಟ್​ಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಎರಡು ದಿನಗಳ ಹಿಂದೆ ಟ್ವೀಟ್ ಮಾಡಿದ್ದ ರೋಹಿತ್, “ನಾನು ನಿನ್ನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಟೋಲ್ ಶುಲ್ಕವಾಗಿ 320 ಪಾವತಿಸಿದ್ದೇನೆ. ಫಾಸ್ಟ್‌ಟ್ಯಾಗ್ ಸ್ಟೇಟ್​ಮೆಂಟ್​ನಿಂದ ನಾನು ಇದನ್ನು ದೃಢಪಡಿಸಿದೆ. ಇದು ಹಗಲು ಲೂಟಿ. 140 ಕಿಮೀ ಹೆದ್ದಾರಿಗೆ 320 ರೂಪಾಯಿ (ಕಾರು) ಟೋಲ್ ಶುಲ್ಕ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Bengaluru-Dharwad Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರಿಗಾಗಿ ವಿಶೇಷ ಬಸ್‌ ವ್ಯವಸ್ಥೆ

ರೋಹಿತ್ ಟ್ವೀಟ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಾಜಿ ಪತ್ರಕರ್ತ ವೆಂಕಿ, “ಎಕ್ಸ್ ಪ್ರೆಸ್ ವೇ ಉದ್ದ ಕೇವಲ 110 ಕಿ.ಮೀ! 320 ರೂ. ಅಂದರೆ ಪ್ರತಿ ಕಿ.ಮೀ.ಗೆ 3 ರೂ. ಬೀಳುತ್ತದೆ. ನೀವು ಟೋಲ್ ರಹಿತ ರಸ್ತೆಗಳನ್ನು ಸಹ ತೆಗೆದುಕೊಳ್ಳಬಹುದು” ಎಂದಿದ್ದಾರೆ.

ರಾಮಕೃಷ್ಣ ಅಯ್ಯರ್ ಎಂಬವರು ಪ್ರತಿಕ್ರಿಯಿಸಿ, “ಅದಕ್ಕೇ ಇದನ್ನು ಎಕ್ಸ್​​ಪ್ರೆಸ್​​ ವೇ ಎಂದು ಕರೆಯಲಾಗುತ್ತದೆ” ಎಂದರು. ಟೋಲ್ ಶುಲ್ಕು ಪಾವತಿಸಲು ಬಯಸುವುದಿಲ್ಲವೆಂದರೆ ಪರ್ಯಾಯ ರಸ್ತೆಗಳನ್ನು ಬಳಸಿ. ಸಾಕಷ್ಟು ರಸ್ತೆಗಳಿವೆ. ನೀವು ಉತ್ತಮ ಗುಣಮಟ್ಟದ ರಸ್ತೆಗಳನ್ನು ಬಯಸುತ್ತೀರಿ. ಆದರೆ ಪಾವತಿಸಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಜುಲೈ 1 ರಂದು, ಮಂಡ್ಯದ ಶ್ರೀರಂಗಪಟ್ಟಣದ ಬಳಿಯ ಗಣಂಗೂರು ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹಿಸಲು ಪ್ರಾರಂಭಿಸಿತು. ಕಾರುಗಳು, ಜೀಪ್‌ಗಳು ಮತ್ತು ಇತರ ಲಘು ಮೋಟಾರು ವಾಹನಗಳು (LMV) ಎಕ್ಸ್​​ಪ್ರೆಸ್​ವೇನಲ್ಲಿ ಏಕಮುಖ ಪ್ರಯಾಣಕ್ಕೆ 320 ರೂ. ಟೋಲ್ ಪಾವತಿಸಬೇಕು. ಅದೇ ದಿನ ಹಿಂದಿರುಗುವ ಪ್ರಯಾಣಕ್ಕೆ ರೂ.485 ರೂ. ವೆಚ್ಚ ತಗುಲುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ