AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ನಮ್ಮ ಮೆಟ್ರೋ ಭಾನುವಾರ ಬೆಳಗ್ಗೆ 7ರ ಬದಲಿಗೆ 6 ಗಂಟೆಯಿಂದಲೇ ಆರಂಭ

Bengaluru Namma Metro: ಬೆಂಗಳೂರು ಜನರಿಗೆ ವೇಗದ ಮತ್ತು ಸುಖಕರ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಸಹಾಯಕಾರಿಯಾಗಿದೆ. ಹೀಗಾಗಿ ಬೆಂಗಳೂರಿನ ಜನ ತಮ್ಮ ಸ್ವಂತ ವಾಹನ ಬಿಟ್ಟು ಮೆಟ್ರೋದಲ್ಲಿ ಹೆಚ್ಚು ಪ್ರಯಾಣ ಮಾಡಲು ಬಯಸುತ್ತಿದ್ದಾರೆ. ಬಿಎಂಆರ್​ಸಿಎಲ್​ ಮೆಟ್ರೋ ಪ್ರಯಾಣಿಕರಿಗೆ ಸಹಿ ಸುದ್ದಿ ನೀಡಿದೆ.

Namma Metro: ನಮ್ಮ ಮೆಟ್ರೋ ಭಾನುವಾರ ಬೆಳಗ್ಗೆ 7ರ ಬದಲಿಗೆ 6 ಗಂಟೆಯಿಂದಲೇ ಆರಂಭ
ನಮ್ಮ ಮೆಟ್ರೋ
ವಿವೇಕ ಬಿರಾದಾರ
|

Updated on:Jun 14, 2024 | 9:46 AM

Share

ಬೆಂಗಳೂರು, ಜೂನ್​ 14: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಿಹಿ ಸುದ್ದಿ ನೀಡಿದೆ. ಭಾನುವಾರ (ಜೂ.16) ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು (ಭಾನುವಾರ) ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ ಎಂದು ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ವೈಟ್​​ಫೀಲ್ಡ್​ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಪ್ರಯಾಣಿಕರು ಮತ್ತು ಪರೀಕ್ಷಾರ್ಥಿಗಳು ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಬಿಎಂಆರ್​ಸಿಎಲ್​​ ಕೋರಿದೆ.

ಜುಲೈ ಅಂತ್ಯಕ್ಕೆ ನಾಗಸಂದ್ರ-ಮಾದಾವರ ನಡುವಿನ ಮೆಟ್ರೋ ಸಂಚಾರ ಶುರು?

ನಮ್ಮ ಮೆಟ್ರೋ ಹಸಿರು ಕಾರಿಡಾರ್​ನ ನಾಗಸಂದ್ರ ಹಾಗೂ ಮಾದಾವರದ ನಡುವಿನ 3.7 ಕಿಮೀ ಮಾರ್ಗ ಅಕ್ಷರಶಃ ಪಂಚವಾರ್ಷಿಕ ಯೋಜನೆಯಾಗಿತ್ತು. ಕಳೆದ ಐದು ವರ್ಷಗಳಿಂದ ಆಮೆಗತಿಯಲ್ಲಿ ಸಾಗಿದ್ದ ಕಾಮಗಾರಿ ಅಂತಿಮ ಹಂತ ತಲುಪಿದ್ದು ಜುಲೈ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಮೆಟ್ರೋ (Metro) ಸಂಚಾರ ಆರಂಭವಾಗಲಿದೆ. 298 ಕೋಟಿ ರೂ. ವೆಚ್ಚದ ಈ ಮಾರ್ಗ ಯೋಜನೆ ಪ್ರಕಾರ ಸಾಗಿದ್ದರೆ 2019ರ ಅಗಸ್ಟನಲ್ಲಿಯೇ ಜನಸಂಚಾರಕ್ಕೆ ಲಭ್ಯವಾಗಬೇಕಿತ್ತು.

ಇದನ್ನೂ ಓದಿ: ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ

2017ರಲ್ಲಿ ಕಾಮಗಾರಿ ಆರಂಭವಾಗಿತ್ತು. ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ 2019ರ ಮಧ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೋವಿಡ್ ಸಮಸ್ಯೆ ಸೇರಿ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.

ಈ ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರಕಲ್ಲು ಹಾಗೂ ಮಾದಾವರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (ಬಿಐಇಸಿ) ಮೆಟ್ರೋ ನಿಲ್ದಾಣಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Fri, 14 June 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ