AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ ನ್ಯೂಸ್​: ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು

ಸಾಲು ಸಾಲು ರಜೆ ಇದ್ದ ಹಿನ್ನೆಲೆಯಲ್ಲಿ ಊರುಗಳಿಗೆ, ಪ್ರವಾಸಕ್ಕೆ ತೆರಳಿರುವ ಜನರು ಸೋಮವಾರ ಬೆಳಗ್ಗೆ ಮರಳಿ ಬೆಂಗಳೂರಿಗೆ ಬರಲಿದ್ದಾರೆ. ಇದರಿಂದಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಬಿಎಂಆರ್​​ಸಿಎಲ್​ ಹಳದಿ ಮಾರ್ಗದ ರೈಲು ಸಂಚಾರ ಬೆಳಗ್ಗೆ ಬೇಗ ಆರಂಭಿಸಲು ನಿರ್ಧರಿಸಿದೆ. ಈ ವಿಶೇಷ ವ್ಯವಸ್ಥೆ ಸೋಮವಾರಕ್ಕೆ ಮಾತ್ರ ಸೀಮಿತವಾಗಿದೆ.

ಗುಡ್​ ನ್ಯೂಸ್​: ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು
ನಮ್ಮ ಮೆಟ್ರೋ ಹಳದಿ ಮಾರ್ಗ
Kiran Surya
| Updated By: ವಿವೇಕ ಬಿರಾದಾರ|

Updated on:Aug 18, 2025 | 9:14 AM

Share

ಬೆಂಗಳೂರು, ಆಗಸ್ಟ್ 17: ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಹಳದಿ ಮಾರ್ಗದ ರೈಲು ಸಂಚಾರವನ್ನು ಸೋಮವಾರ (ಆ.18) ಒಂದು ದಿನ ಬೇಗ ಆರಂಭಿಸಲು ನಿರ್ಧರಿಸಿದೆ.

ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳುಬೆಳಿಗ್ಗೆ 5:00 ಗಂಟೆಗೆ ಆರಂಭವಾಗಲಿವೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಯಾ ಎಲೆಕ್ಟ್ರಾನಿಕ್ಸ್, ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿದೆ. ಈ ವಿಶೇಷ ವ್ಯವಸ್ಥೆ ಕೇವಲ ಸೋಮವಾರಕ್ಕೆ ಮಾತ್ರ ಅನ್ವಯವಾಗುತ್ತದೆ. ಮರುದಿನ ಮಂಗಳವಾರ (ಆ.19) ದಿಂದ ಹಳದಿ ಮಾರ್ಗದ ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 6:30 ರಿಂದ ಪ್ರಾರಂಭವಾಗಲಿವೆ.

ಇನ್ನು. ನೇರಳೆ ಮಾರ್ಗ ಮತ್ತು ಹಸಿರು ಮಾರ್ಗದ ಮೆಟ್ರೋ ಸೇವೆಗಳು ಸೋಮವಾರದಂದು ಸಾಮಾನ್ಯವಾಗಿ ಬೆಳಿಗ್ಗೆ 4:15 ರಿಂದಲೇ ಕಾರ್ಯನಿರ್ವಹಿಸುತ್ತವೆ.

ಟ್ವಿಟರ್ ಪೋಸ್ಟ್​

ಹಳದಿ ಮಾರ್ಗ ಎಲ್ಲಿಂದ ಎಲ್ಲಿಯವರೆಗೆ ಸಂಚಾರ

ಆರ್​ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಸಂಪರ್ಕ ಕಲಿಸಲಾಗಿದ್ದು, ಒಟ್ಟು 19.15 ಕಿಲೋ ಮೀಟರ್ ಉದ್ದದ ಮಾರ್ಗವಾಗಿದೆ. ಬೆಂಗಳೂರಿನ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿಯಿಂದ ಬೆಂಗಳೂರಿನ ಕೇಂದ್ರ ಭಾಗದ ನಡುವೆ ಸಂಪರ್ಕ ಕೊಂಡಿಯಾಗಿದೆ.

ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ. ಹಳದಿ ಮಾರ್ಗದ ರೈಲು 3 ಮೆಟ್ರೋ ಲೈನ್‌ಗೆ ಕೂಡುತ್ತದೆ. ಹಳದಿ ಮಾರ್ಗವು ಹಸಿರು ಮಾರ್ಗ, ಗುಲಾಬಿ, ನೀಲಿ ಮಾರ್ಗಕ್ಕೆಕ್ಕೆ ಕೂಡುತ್ತದೆ. ಜಯದೇವ ಆಸ್ಪತ್ರೆ ನಿಲ್ದಾಣವು ಅತಿ ಎತ್ತರ ಹಾಗೂ ದೊಡ್ಡ ಮೆಟ್ರೋ ನಿಲ್ದಾಣ ಎಂಬ ಖ್ಯಾತಿ ಪಡೆದಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗದ ವಿಶೇಷತೆಗಳೇನು? ಇಲ್ಲಿದೆ ವಿವರ, ಫೋಟೋಸ್​ ನೋಡಿ

ನಮ್ಮ ಮೆಟ್ರೋ ಹಳದಿ ಮಾರ್ಗದ ನಿಲ್ದಾಣಗಳು: ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರ್ ರಸ್ತೆ, ಇನ್ಫೋಸಿಸ್‌ ಫೌಂಡೇಶನ್ ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್‌ ಸಿಟಿ, ಬೆರತೇನ ಅಗ್ರಹಾರ, ಹೊಸ ರೋಡ್, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿ ಗುಡ್ಡ ದೇವಸ್ಥಾನ, ಆರ್‌.ವಿ (ರಾಷ್ಟ್ರೀಯ ವಿದ್ಯಾಲಯ) ರಸ್ತೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Sun, 17 August 25