ಬೆಂಗಳೂರು ಸಂಕಷ್ಟದಲ್ಲಿದೆ, ಹೆಚ್ಚುವರಿ ಬೆಡ್, ಆಕ್ಸಿಜನ್ ಅಗತ್ಯ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

ಹೋಟೆಲ್​ಗಳಲ್ಲಿ 15,000 ಬೆಡ್ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆಸಲಾಗಿದೆ. 945 ಬೆಡ್​ಗಳನ್ನು ಸ್ಟೆಪ್​ಡೌನ್​ ಆಸ್ಪತ್ರೆಗಳಲ್ಲಿ ರೂಪಿಸಲು ಚಿಂತನೆ ನಡೆದಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಹೇಳಿದರು.

ಬೆಂಗಳೂರು ಸಂಕಷ್ಟದಲ್ಲಿದೆ, ಹೆಚ್ಚುವರಿ ಬೆಡ್, ಆಕ್ಸಿಜನ್ ಅಗತ್ಯ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: May 06, 2021 | 5:10 PM

ಬೆಂಗಳೂರು: ನಗರದಲ್ಲಿ ಹೆಚ್ಚುವರಿ ಬೆಡ್​ಗಳು ಮತ್ತು ಆಕ್ಸಿಜನ್​ ಸರಬರಾಜು ಬೇಕಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಗೌರವ್​ ಗುಪ್ತಾ ಹೇಳಿದ್ದಾರೆ. ನಗರ ವ್ಯಾಪ್ತಿಯ ಚಿಕ್ಕಚಿಕ್ಕ ಆಸ್ಪತ್ರೆಗಳಲ್ಲೂ ಆಕ್ಸಿಜನ್ ವ್ಯವಸ್ಥೆ ಮಾಡುತ್ತೇವೆ. ಕೊವಿಡ್ ಕೇರ್ ಸೆಂಟರ್‌ನಲ್ಲಿ 2000 ಬೆಡ್‌ಗಳಿವೆ. ಅದರಲ್ಲಿ 160 ಆಕ್ಸಿಜನ್ ಬೆಡ್‌ಗಳು ಎಂದು ಗೌರವ್ ಗುಪ್ತಾ ಮಾಹಿತಿ ನೀಡಿದರು.

ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 15 ಸಾವಿರ ಹೋಟೆಲ್​ಗಳಲ್ಲಿ ಬೆಡ್ ವ್ಯವಸ್ಥೆಗೆ ಚಿಂತನೆ ಮಾಡಿದ್ದೇವೆ. ಬೇರೆಬೇರೆ ದೇಶಗಳಿಂದ ಆಕ್ಸಿಜನ್ ತರಿಸಲು ಸರ್ಕಾರ ಆಲೋಚನೆ ಮಾಡುತ್ತಿದೆ. ಸರ್ಕಾರಿ, ಮೆಡಿಕಲ್ ಕಾಲೇಜಿನಲ್ಲಿ ICU ಬೆಡ್​ಗಳ ಸಂಖ್ಯೆ ಹೆಚ್ಚಿಸುತ್ತೇವೆ. ಜನರಲ್ ಬೆಡ್‌ಗೆ ಆಕ್ಸಿಜನ್ ವ್ಯವಸ್ಥೆ ಮಾಡುತ್ತೇವೆ. ಕೊವಿಡ್ ನಿಯಂತ್ರಣಕ್ಕೆ ಕಠಿಣ ಲಾಕ್‌ಡೌನ್ ಬೇಕು ಎಂದು ಅವರು ಅಭಿಪ್ರಾಯಪಟ್ಟರು.

ವಲಯ ಮಟ್ಟದಲ್ಲಿ ಆಸ್ಪತ್ರೆಗಳ ಪಟ್ಟಿ ಮಾಡಿಕೊಂಡು ಆಕ್ಸಿಜನ್, ಐಸಿಯು ಇತ್ಯಾದಿ ಅಗತ್ಯ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳುತ್ತೇವೆ. ಬೆಂಗಳೂರಿಗೆ ಹೆಚ್ಚುವರಿಯಾಗಿ ಆಕ್ಸಿಜನ್ ಬೇಕಿದೆ. ಮೀಟಿಂಗ್​ನಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಹೋಟೆಲ್​ಗಳಲ್ಲಿ 15,000 ಬೆಡ್ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆಸಲಾಗಿದೆ. 945 ಬೆಡ್​ಗಳನ್ನು ಸ್ಟೆಪ್​ಡೌನ್​ ಆಸ್ಪತ್ರೆಗಳಲ್ಲಿ ರೂಪಿಸಲು ಚಿಂತನೆ ನಡೆದಿದೆ ಎಂದು ಹೇಳಿದರು.

ನಗರದ ನಾಗರಿಕರು ಕೊರೊನಾ ಪಾಸಿಟಿವ್ ಬಂದರೆ ಚಿಂತೆ ಮಾಡಬಾರದು. 90ರಷ್ಟು ಜನರಿಗೆ ಆಸ್ಪತ್ರೆಗಳಲ್ಲಿ ಬೆಡ್ ಅಗತ್ಯ ಬೀಳುವುದಿಲ್ಲ. ಆಸ್ಪತ್ರೆಗಳಲ್ಲಿಯೂ ವೆಂಟಿಲೇಟರ್​ಗಿಂತ ಹೆಚ್ಚಾಗಿ ಆಕ್ಸಿಜನ್ ಹಾಗೂ ಐಸಿಯು ಅಗತ್ಯವಿದೆ. ಸರ್ಕಾರಿ ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ಐಸಿಯು ಬೆಡ್​ಗಳ ಸಂಖ್ಯೆ ಹೆಚ್ಚಿಸಲಾಗುವುದು. ನಗರದಲ್ಲಿ ಅಲ್ಲಲ್ಲಿ ಆಕ್ಸಿಜನ್ ಕಾನ್ಸನ್​ಟ್ರೇಟರ್​ಗಳನ್ನು ಅಳವಡಿಸಿದ್ದೇವೆ. ಜೂನ್ ತಿಂಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಅಪಾಯವನ್ನು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್​ಸಿ) ವಿಜ್ಞಾನಿಗಳು ನೀಡಿದ್ದಾರೆ. ಈ ಅವಧಿಯಲ್ಲಿ ಸೋಂಕಿತರ ಸಂಖ್ಯೆ 33 ಲಕ್ಷಕ್ಕೆ ಏರಬಹುದು ಎಂದು ಅವರು ಹೇಳಿದರು.

ನಗರದಲ್ಲಿ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಕರ್ಫ್ಯೂ ಇದೆ ಎಂದು ಜನರು ಆಚೆ ಬರುತ್ತಿಲ್ಲ. ರಾಜ್ಯದಲ್ಲಿ ಕಠಿಣ ಲಾಕ್​ಡೌನ್ ಮಾಡಬೇಕು ಎಂಬ ಚಿಂತನೆ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿದೆ. ಪಾಸಿಟಿವ್ ಬಂದಿರುವ ರೋಗಿಗಳು ಮನೆಯಲ್ಲಿಯೇ ಇರಬೇಕು. ಕೋವಿಡ್​ ನಿರ್ವಹಣೆ ವಿಚಾರದಲ್ಲಿ ಕೆಲ ಸಮಸ್ಯೆಗಳಿರುವುದು ನಮಗೆ ಗೊತ್ತಿತ್ತು. ಹೀಗಾಗಿಯೇ ತಾಂತ್ರಿಕ ಸಮಿತಿ ಮಾಡಿದ್ದೇವೆ. ಶವ ಸಂಸ್ಕಾರಕ್ಕೆ ಹಣ ಪೀಕುವ ವಿಚಾರವೂ ನಮ್ಮ ಗಮನಕ್ಕೆ ಬಂದಿದೆ. ಹೀಗೆ ಹಣ ಕೇಳುವವರ ಹೆಸರು, ವಿವರಗಳನ್ನು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

(Bengaluru Needs More Beds Oxygen Supply Says BBMP Commissioner Gaurav Gupta)

ಇದನ್ನೂ ಓದಿ: ರಾಜ್ಯದಲ್ಲೂ ವೈದ್ಯಕೀಯ ಆಕ್ಸಿಜನ್ ಕೊರತೆ; ಬೆಂಗಳೂರು, ಚಿತ್ರದುರ್ಗದ ಆಸ್ಪತ್ರೆಗಳಲ್ಲಿ ತಲೆದೋರಿದ ಸಮಸ್ಯೆ

ಇದನ್ನೂ ಓದಿ: ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್​ ಪೂರೈಸಬೇಕೆಂಬ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೊರೆ ಹೋದ ಭಾರತ ಸರ್ಕಾರ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’