ಲೋಕಸಭೆ ಚುನಾವಣಾ ತರಬೇತಿಯಲ್ಲಿ ಅವ್ಯವಸ್ಥೆ: ರೊಚ್ಚಿಗೆದ್ದ ಸರ್ಕಾರಿ ನೌಕರರು

ಲೋಕಸಭಾ ಚುನಾವಣಾ ತರಬೇತಿಗೆಂದು 2,500 ಜನರನ್ನು ಸೇರಿಸಿದ್ದು, ಆದರೆ ಕಾರ್ಯಾಗಾರದಲ್ಲಿ ನೀರು, ಊಟ ಕೊಟ್ಟಿಲ್ಲ. ಶೌಚಾಲಯದ ವ್ಯವಸ್ಥೆ ಕೂಡ ಮಾಡಿಲ್ಲ ಅಂತಾ ಸರ್ಕಾರಿ ನೌಕರರು ಆರೋಪ ಮಾಡಿದ್ದಾರೆ. ಆರ್.ಆರ್.ನಗರದ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಚುನಾವಣಾ ತರಬೇತಿ ಕಾರ್ಯಾಗಾರ ವೇಳೆ ಘಟನೆ ಸಂಭವಿಸಿದೆ. ಈ ವೇಳೆ ಚುನಾವಣಾಧಿಕಾರಿ ಮತ್ತು ಸರ್ಕಾರಿ ನೌಕರರ ನಡುವೆ ಮಾತಿನ ಚಕಮಕಿ ಉಂಟಾಗಿದೆ.

Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 17, 2024 | 5:06 PM

ಬೆಂಗಳೂರು, ಏಪ್ರಿಲ್​ 17: ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha election) ಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿಯೊಂದು ಪಕ್ಷಗಳು ಸದ್ಯ ಭರ್ಜರಿ ಮತಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ಮಧ್ಯೆ ಬೆಂಗಳೂರಿನಲ್ಲಿ ಚುನಾವಣೆಯ ತರಬೇತಿ ವೇಳೆ ಅವ್ಯವಸ್ಥೆ ಆರೋಪ ಕೇಳಿಬಂದಿದ್ದು, ಬಿಬಿಎಂಪಿ (BBMP) ಅಧಿಕಾರಿಗಳ ವಿರುದ್ಧ ಸರ್ಕಾರಿ ನೌಕರರು ರೊಚ್ಚಿಗೆದಿದ್ದಾರೆ. ಆರ್.ಆರ್.ನಗರದ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಚುನಾವಣಾ ತರಬೇತಿ ಕಾರ್ಯಾಗಾರ ವೇಳೆ ಘಟನೆ ಸಂಭವಿಸಿದೆ.

2,500 ಜನರನ್ನು ಸೇರಿಸಿ ಸೂಕ್ತ ವ್ಯವಸ್ಥೆ ಮಾಡಿಲ್ಲ ಅಂತಾ ಗಲಾಟೆ ಮಾಡಲಾಗಿದ್ದು, ಊಟವಿಲ್ಲದೇ ಕಾದು ಕುಳಿತ ಸರ್ಕಾರಿ ನೌಕರರಿಂದ ತೀವ್ರ ಆಕ್ರೋಶ ಹೊರಹಾಕಲಾಗಿದೆ. ಚುನಾವಣಾ ತರಬೇತಿ ಕಾರ್ಯಾಗಾರದಲ್ಲಿ ನೀರು, ಊಟ ಕೊಟ್ಟಿಲ್ಲ. ಶೌಚಾಲಯದ ವ್ಯವಸ್ಥೆ ಕೂಡ ಮಾಡಿಲ್ಲ ಅಂತಾ ನೌಕರರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಹಲಸೂರ್ ಗೇಟ್ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ: ಕಾರಣವೇನು ಗೊತ್ತಾ?

ಚುನಾವಣಾ ತರಬೇತಿಗಾಗಿ ಕೋಟ್ಯಂತರ ರೂ. ಬಿಲ್ ಮಾಡುತ್ತಾರೆ. ಆದರೆ ನಮ್ಮನ್ನು ತುಂಬಾ ಕೀಳಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಸರ್ಕಾರಿ ನೌಕರರು ಹೇಳಿದ್ದಾರೆ. ಆದರೆ ಯಾವುದೇ ಸಮಸ್ಯೆ ಆಗಿಲ್ಲ ಅಂತಾ R.R.ನಗರ ವಲಯ ಚುನಾವಣಾಧಿಕಾರಿ ಅಜಯ್​ರಿಂದ ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ: Glanders Disease: ಬೆಂಗಳೂರಿನ ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗ ಪತ್ತೆ; ಡಿಜಿ ಹಳ್ಳಿ ನಿಷೇಧಿತ ವಲಯವೆಂದು ಘೋಷಣೆ

ಈ ಕುರಿತಾಗಿ ವಿಡಿಯೋ ಒಂದು ಹರಿದಾಡುತ್ತಿದ್ದು, ಸರ್ಕಾರಿ ನೌಕರರು ಮತ್ತು R.R.ನಗರ ವಲಯ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಸರ್ಕಾರಿ ನೌಕರರು ಮಾತ್ರ ತೀವ್ರ ಆಕ್ರೋಶಗೊಂಡಿದ್ದು, ವ್ಯವಸ್ಥೆ ಬಗ್ಗೆ ಆರೋಪಿಸುತ್ತಿದ್ದಾರೆ.

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1 ಲಕ್ಷ ರೂ ವಶಕ್ಕೆ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯ ಕಾಗವಾಡ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬೀಡ್ ಗ್ರಾಮದಿಂದ ಗೋವಾ ಕಡೆಗೆ ಹೊರಟ್ಟಿದ್ದ ಕಾರಿನಲ್ಲಿ ಹಣ ಪತ್ತೆ ಆಗಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವರದಿ: ಶಾಂತ ಮೂರ್ತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:59 pm, Wed, 17 April 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ