AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಪೊಲೀಸರ ತಪಾಸಣೆ

ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಈ ಬಾರಿ ನೇರವಾಗಿ ಬೆಂಗಳೂರು ಪೊಲೀಸರ ಇ-ಮೇಲ್ ಅಕೌಂಟ್​​ಗೆ ಬಾಂಬ್ ಬೆದರಿಕೆ ಬಂದಿದೆ. ಬಾಂಬ್ ಬೆದರಿಕೆ ಇ-ಮೇಲ್ ಹಿನ್ನೆಲೆ ಪೊಲೀಸರು ತಪಾಸಣೆ ನಡೆಸಿದ್ದು, ಈ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ.

ಬೆಂಗಳೂರಿನ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಪೊಲೀಸರ ತಪಾಸಣೆ
ಬೆಂಗಳೂರಿನ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್
ಜಗದೀಶ ಬಿ.
| Edited By: |

Updated on:May 12, 2024 | 8:54 PM

Share

ಬೆಂಗಳೂರು, ಮೇ 12: ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ (Fake bomb threat) ಇ-ಮೇಲ್​ ಬಂದಿದೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ ನಾರಾಯಣ ಹೆಲ್ತ್ , ಸಾಗರ್ ಆಸ್ಪತ್ರೆ, ಸಮರ್ಥ, ಜೆಎಂಜೆ ಹಾಗೂ ವಿಮಲಾಲಯ್ಯ ಆಸ್ಪತ್ರೆಗಳಿಗೂ ಬಾಂಬ್ ಬೆದರಿಕೆ ಬಗ್ಗೆ ಇ ಮೇಲ್​ನಲ್ಲಿ ಉಲ್ಲೇಖಿಸಲಾಗಿದೆ.

ಈ ಬಾರಿ ನೇರವಾಗಿ ಬೆಂಗಳೂರು ಪೊಲೀಸರ ಇ-ಮೇಲ್ ಅಕೌಂಟ್​​ಗೆ ಬಾಂಬ್ ಬೆದರಿಕೆ ಬಂದಿದೆ. ಬಾಂಬ್ ಬೆದರಿಕೆ ಇ-ಮೇಲ್ ಹಿನ್ನೆಲೆ ಪೊಲೀಸರು ತಪಾಸಣೆ ನಡೆಸಿದ್ದು, ಈ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ತಪಾಸಣೆ ನಂತರ ಹುಸಿ ಬಾಂಬ್ ಬೆದರಿಕೆ ಬಗ್ಗೆ ಪೊಲೀಸರು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ, ಎಫ್​​ಐಆರ್​ ದಾಖಲು

ಇತ್ತೀಚೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ ಬಂದಿತ್ತು. ಬಾಂಬ್​ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದರು.

ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಏರ್​ಇಂಡಿಯಾ ವಿಮಾನದಿಂದ ಕೆಳಗೆ ಹಾರುತ್ತೇನೆ ಎಂದು ಬೆದರಿಕೆಯೊಡ್ಡಿದ್ದ ವ್ಯಕ್ತಿಯ ಬಂಧನ

ಟರ್ಮಿನಲ್ ಮ್ಯಾನೇಜರ್ ಗೀತಾ ರಾಣಿ ಅವರು ತಮ್ಮ ದೂರಿನಲ್ಲಿ, ವಿಮಾನ ನಿಲ್ದಾಣದ ಪ್ರತಿಕ್ರಿಯೆ ಇಮೇಲ್ ಐಡಿಗೆ ಮೇಲ್ ಕಳುಹಿಸಲಾಗಿದೆ ಎಂದು ಹೇಳಿದ್ದರು. ಬಾಂಬ್‌ಗಳನ್ನು ಇಟ್ಟಿದ್ದು, ಅವು ಕೆಲವೇ ಗಂಟೆಗಳಲ್ಲಿ ಸ್ಫೋಟಗೊಳ್ಳುತ್ತವೆ. ಮೇಲ್ ಮಾಡಿದವನು ತಾನು ಭಯೋತ್ಪಾದಕ ಗುಂಪಿನಿಂದ ಬಂದವನು ಎಂದು ಹೇಳಿಕೊಂಡಿದ್ದಾನೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:27 pm, Sun, 12 May 24

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಏರ್‌ಪೋರ್ಟ್‌ನಲ್ಲೇ ಹೈಟೆಕ್ ಭಿಕ್ಷಾಟನೆ!
ಏರ್‌ಪೋರ್ಟ್‌ನಲ್ಲೇ ಹೈಟೆಕ್ ಭಿಕ್ಷಾಟನೆ!
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ