ಹಲಸೂರ್ ಗೇಟ್ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ: ಕಾರಣವೇನು ಗೊತ್ತಾ?

ಬೆಂಗಳೂರಿನ ಹಲಸೂರ್ ಗೇಟ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್​ 18 ಮತ್ತು 19 ರಂದು ಶ್ರೀ ಕೋದಂಡರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ನಡೆಯಲಿದೆ. ಹೀಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಸಂಜೆ 5 ಗಂಟೆವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಸ್ಟಾರ್ ಹೋಟೆಲ್‌, ಕ್ಲಬ್‌ಗಳಲ್ಲಿ ಹೊರತುಪಡಿಸಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ಹಲಸೂರ್ ಗೇಟ್ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ: ಕಾರಣವೇನು ಗೊತ್ತಾ?
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Apr 17, 2024 | 4:14 PM

ಬೆಂಗಳೂರು, ಏಪ್ರಿಲ್ 17: ನಾಳೆ ಮತ್ತು ನಾಡಿದ್ದು (ಏ. 18,19) ಶ್ರೀ ಕೋದಂಡರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಿನ್ನೆಲೆ ಹಲಸೂರ್ (Halasuru) ಗೇಟ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಸಂಜೆ 5 ಗಂಟೆವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸ್ಟಾರ್ ಹೋಟೆಲ್‌, ಕ್ಲಬ್‌ಗಳಲ್ಲಿ ಹೊರತುಪಡಿಸಿ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮದ್ಯ (alcohol) ಮಾರಾಟಕ್ಕೆ ನಿಷೇಧ ಹೇರಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್​ ಬುಧವಾರ ಆದೇಶ ಹೊರಡಿಸಿದ್ದಾರೆ. ಕಾನೂನು ಮತ್ತ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಈ ನಿರ್ಧಾರಕೈಗೊಳ್ಳಲಾಗಿದೆ.

ಏಪ್ರಿಲ್ 23 ರಂದು ಬೆಂಗಳೂರಿನ ಕರಗ ಉತ್ಸವ 

ಬೆಂಗಳೂರಿನಲ್ಲಿ ಅತ್ಯಂತ ಹಳೆಯ ಹಾಗೂ ವ್ಯಾಪಕವಾಗಿ ಆಚರಿಸ್ಪಡುವ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಕರಗ ಮಹೋತ್ಸವಕ್ಕೆ ಮಹಾಭಾರತದಲ್ಲಿ ಪುರಾವೆಯನ್ನು ಹೊಂದಿದೆ. ಶಕ್ತಿ ಮಾತೆಯ ರೂಪವಾದ ದ್ರೌಪದಿಯ ಆರಾಧನೆಗೆ ಧರ್ಮರಾಯ ದೇವಸ್ಥಾನ ಸಮಿತಿ ಸಜ್ಜಾಗಿದ್ದು, ಲೋಕಸಭಾ ಚುನಾವಣೆಯ ನಡುವೆಯೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಏಪ್ರಿಲ್ 23 ರಿಂದ ಒಂಬತ್ತು ದಿನಗಳ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹುಣ್ಣಿಮೆಯ ದಿನದಂದು ಮುಖ್ಯ ಕಾರ್ಯಕ್ರಮವಾದ ದ್ರೌಪದಿ ದೇವಿ ಹೂವಿನ ಕರಗ ನಡೆಯಲಿದೆ.

ಇದನ್ನೂ ಓದಿ: CCB Raid: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

ಕರಗ ಮಹೋತ್ಸವವನ್ನು ಪ್ರತಿ ವರ್ಷ ಚೈತ್ರ ಮಾಸದಲ್ಲಿ ಮಾರ್ಚ್ ಅಥವಾ ಏಪ್ರಿಲ್ ನಡುವಿನ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಕರಗ ಉತ್ಸವಕ್ಕೆ ಬಿಬಿಎಂಪಿ ಹಾಗೂ ಸರ್ಕಾರ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿದೆ. ಕರಗ ವ್ಯವಸ್ಥಾಪನಾ ಸಮಿತಿಯಿಂದ ಈ ಬಾರಿ ಅರಾಜಕೀಯವಾಗಿ ಎಂದಿನಂತೆ ಸಕಲ ಸಾಂಪ್ರದಾಯಿಕ ವೈಭವದೊಂದಿಗೆ ಕರಗ ನಡೆಯಲಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಚುನಾವಣಾ ಆಯೋಗವು ಕರಗ ಮೇಲೆ ನಿಗಾ ಇರಿಸಿದೆ. ಜಾತ್ರೆಗೆ ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆ ಇದ್ದು, ಪ್ರತಿ ವರ್ಷದಂತೆ ಈ ವರ್ಷವೂ ಹಲವು ರಾಜಕೀಯ ಮುಖಂಡರು ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೇಸಿಗೆ ಬೇಗೆ: ರಾಜ್ಯದಲ್ಲಿ 11 ದಿನಗಳಲ್ಲಿ 17 ಲಕ್ಷ ಲೀ ಕೋಲ್ಡ್​ ಬಿಯರ್ ಮಾರಾಟ !

ಒಂದು ವೇಳೆ ರಾಜಕೀಯ ನಾಯಕರು ಭೇಟಿ ಮಾಡಿದರೆ ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮಾತನಾಡುವುದಾಗಲಿ ಅಥವಾ ಅವರನ್ನು ಸನ್ಮಾನಿಸುವುದಾಗಲಿ ಮಾಡದಂತೆ ದೇವಸ್ಥಾನದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಯಾವುದೇ ನಿಯಮ ಉಲ್ಲಂಘನೆಯಾದಲ್ಲಿ ಚುನಾವಣಾ ಆಯೋಗವು ಕರಗ ಸಮಿತಿ ವಿರುದ್ಧ ಕ್ರಮ ಕೈಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ