ಒಳಉಡುಪಿನಲ್ಲಿ ಚಿನ್ನ ಇಟ್ಟುಕೊಂಡು ಸಾಗಿಸುತ್ತಿದ್ದ ಮಹಿಳೆಯರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ದುಬೈನಿಂದ ಇಂಡಿಗೋ ವಿಮಾನದ ಮೂಲಕ ಇಬ್ಬರು ಮಹಿಳೆಯರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಮಹಿಳೆಯರನ್ನು ಕಸ್ಟಮ್ಸ್​​ ಅಧಿಕಾರಿಗಳು ತಪಾಸಣೆ ನಡೆಸಿದಾಗ ಅವರ ಒಳಉಡುಪಿನಲ್ಲಿ 42 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆಯಾಗಿದೆ. ಅಧಿಕಾರಿಗಳು ಚಿನ್ನ ಮತ್ತು ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಒಳಉಡುಪಿನಲ್ಲಿ ಚಿನ್ನ ಇಟ್ಟುಕೊಂಡು ಸಾಗಿಸುತ್ತಿದ್ದ ಮಹಿಳೆಯರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಜಪ್ತಿಯಾದ ಚಿನ್ನ
Follow us
ನವೀನ್ ಕುಮಾರ್ ಟಿ
| Updated By: ವಿವೇಕ ಬಿರಾದಾರ

Updated on:Apr 30, 2024 | 10:52 AM

ದೇವನಹಳ್ಳಿ, ಏಪ್ರಿಲ್​ 30: ಒಳ ಉಡುಪಿನಲ್ಲಿ ಚಿನ್ನ (Gold) ಅಡಗಿಸಿಟ್ಟುಕೊಂಡು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಮೂಲಕ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತದ್ದ 49.52 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಬ್ಬರು ಮಹಿಳೆಯರು ಸೋಮವಾರ (ಏ.29) ರಾತ್ರಿ ದುಬೈನಿಂದ ಇಂಡಿಗೋ 6E1486 ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಮಹಿಳೆಯರ ಒಳ ಉಡುಪಿನಲ್ಲಿ 49.52 ಲಕ್ಷ ರೂ. ಮೌಲ್ಯದ 717 ಗ್ರಾಂ ಚಿನ್ನ ಪತ್ತೆಯಾಗಿದೆ. ಸದ್ಯ ಅಧಿಕಾರಿಗಳು ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಅಧಿಕಾರಿಗಳು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೋರಿಗೆ ಬಿದ್ದ ಕಾರು, ಚಾಲಕ ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಸ್ಕಾರ್ಪಿಯೊ ಬಿದ್ದ ಪರಿಣಾಮ ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ನೆಲಮಂಗಲದ ಹಳೆ ನಿಜಗಲ್ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಚಾಲಕ ಸಚಿನ್ (19) ಮೃತ ದುರ್ದೈವಿ. ಇನ್ನು ಗಾಯಳು ಬಲವಂತ್ ಸಿಂಗ್ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರು ದಾಬಸ್ ಪೇಟೆಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗುದದಲ್ಲಿ ಬಚ್ಚಿಟ್ಟು 729 ಗ್ರಾಂ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ಕುಡಿದ ಮತ್ತಿನಲ್ಲಿ ಕಾರು ಚಾಲನೆ, ಅಪಘಾತ

ಕುಡಿದು ಕಾರು ಚಾಲನೆ ಮಾಡಿದ ಚಾಲಕ ಟಾಟಾ ಎಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಗೊರಗುಂಟೆ ಪಾಳ್ಯ ಬಳಿ ನಡೆದಿದೆ. ಅಪಘಾತದ ಬಳಿಕ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಮದ್ಯದ ಬಾಟಲ್, ಗಾಂಜಾ ಸಿಕ್ಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಂಡಿಗೆ ಬಿದ್ದ ಬೈಕ್​, ಸವಾರ ಸಾವು

ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬೈಕ್ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ದೊಡ್ಡಮಾರಪ್ಪನಹಳ್ಳಿ ಬಳಿ ನಡೆದಿದೆ. ಅಂಗರಹಳ್ಳಿ ನಿವಾಸಿ ರಘು (49) ಮೃತದುರ್ದೈವಿ. ಕಾಂತರಾಜು ಎಂಬಾತನಿಗೆ ಗಾಯವಾಗಿದೆ. ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:43 am, Tue, 30 April 24

ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!