ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ಗೆಲುವು ಸುಲಭವೇ? ಕೈ, ಕಮಲ ಬಲಾಬಲ ಹೀಗಿದೆ

ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಸದಾನಂದ ಗೌಡರಂತೆಯೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಬಂದು ಬೆಂಗಳೂರು ಉತ್ತರದಲ್ಲಿ ಲೋಕಸಭೆ ಚುನಾವಣೆ ಸ್ಪರ್ಧಿಸುತ್ತಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಈ ಬಾರಿ ಗೆಲುವು ಸುಲಭವಾಗಲಿದೆಯೇ? ಕಳೆದ ಬಾರಿಯ ಬಲಾಬಲ ಹಾಗೂ ಈ ಬಾರಿಯ ಪರಿಸ್ಥಿತಿ ಹೇಗಿದೆ ಎಂಬ ಅವಲೋಕನ ಇಲ್ಲಿದೆ.

ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ಗೆಲುವು ಸುಲಭವೇ? ಕೈ, ಕಮಲ ಬಲಾಬಲ ಹೀಗಿದೆ
ಶೋಭಾ ಕರಂದ್ಲಾಜೆ & ಎಂವಿ ರಾಜೀವ್ ಗೌಡ
Follow us
|

Updated on:Apr 13, 2024 | 5:13 PM

ಬೆಂಗಳೂರು, ಏಪ್ರಿಲ್ 13: ರಾಜ್ಯದ ಅತಿದೊಡ್ಡ ಲೋಕಸಭಾ ಕ್ಷೇತ್ರವಾಗಿರುವ, ಸುಮಾರು 32,14,496 ಮತದಾರರನ್ನು ಹೊಂದಿರುವ ಬೆಂಗಳೂರು ಉತ್ತರದಲ್ಲಿ (Bengaluru north) ಈ ಬಾರಿ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಮಧ್ಯೆ ಜಿದ್ದಾಜಿದ್ದಿಯ ಪೈಪೋಟಿ ನಡೆಯುವ ಎಲ್ಲ ಲಕ್ಷಗಳು ಕಾಣಿಸಿವೆ. ಕ್ಷೇತ್ರದ ಮತದಾರರ ಸಂಖ್ಯೆ, ಪ್ರದೇಶವಾರು ಆಯಾ ಪಕ್ಷಗಳ ಪ್ರಾಬಲ್ಯ, ಉಭಯ ಪಕ್ಷಗಳು ಕಣಕ್ಕಿಳಿಸಿರುವ ಅಭ್ಯರ್ಥಿಗಳ ಪ್ರಭಾವ ಇತ್ಯಾದಿಗಳನ್ನು ಗಮನಿಸಿದರೆ ತೀವ್ರ ಪೈಪೋಟಿ ಏರ್ಪಡುವ ಎಲ್ಲ ಸಾಧ್ಯತೆಗಳೂ ಇವೆ. ಬಿಜೆಪಿಯಿಂದ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಣದಲ್ಲಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್​​ನಿಂದ ಐಐಎಂಬಿಯ ಸಾರ್ವಜನಿಕ ನೀತಿ ಕೇಂದ್ರದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಸಂಶೋಧನಾ ವಿಭಾಗದ ಅಧ್ಯಕ್ಷ ಎಂವಿ ರಾಜೀವ್ ಗೌಡ ಕಣದಲ್ಲಿದ್ದಾರೆ.

ಬೆಂಗಳೂರು ಉತ್ತರದ ಹಾಲಿ ಸಂಸದ ಸದಾನಂದ ಗೌಡ ಸಹ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿದ್ದವರು. ಅಲ್ಲಿಂದ ಬೆಂಗಳೂರು ಉತ್ತರಕ್ಕೆ ವಲಸೆ ಬಂದು ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಶೋಭಾ ಕರಂದ್ಲಾಜೆ ಸಹ ಅದೇ ಹಾದಿಯಲ್ಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನ ಕೃಷ್ಣ ಬೈರೇಗೌಡರನ್ನು 1,47,518 ಮತಗಳ ಅಂತರದಿಂದ ಸೋಲಿಸಿದ್ದ ಹಾಲಿ ಸಂಸದ ಡಿವಿ ಸದಾನಂದಗೌಡ ಸ್ಥಾನದಲ್ಲಿ ಶೋಭಾ ಸ್ಪರ್ಧಿಸುತ್ತಿದ್ದಾರೆ.

ಒಕ್ಕಲಿಗ ಅಭ್ಯರ್ಥಿಗಳ ಪೈಪೋಟಿ

ಇಬ್ಬರು ಒಕ್ಕಲಿಗ ಅಭ್ಯರ್ಥಿಗಳ ಪೈಪೋಟಿ ಕುತೂಹಲ ಮೂಡಿಸಿದ್ದು, ಮತದಾರರು ಅಭ್ಯರ್ಥಿಯ ಜಾತಿ ಮಾತ್ರ ನೋಡದೆ ಇನ್ನಿತರ ಹಲವು ಅಂಶಗಳ ಬಗ್ಗೆಯೂ ಚರ್ಚಿಸುತ್ತಿದ್ದಾರೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹೆಬ್ಬಾಳ, ಬ್ಯಾಟರಾಯನಪುರ ಮತ್ತು ಯಶವಂತಪುರದಲ್ಲಿ ನೀರಿನ ಸಮಸ್ಯೆಯೇ ಸದ್ಯ ಪ್ರಮುಖ ಚರ್ಚೆಯ ವಿಷಯವಾಗಿದೆ.

ಬೆಂಗಳೂರು ಉತ್ತರದ ಇತಿಹಾಸ

ಬೆಂಗಳೂರು ಉತ್ತರದಲ್ಲಿ ಮೊದಲ ಚುನಾವಣೆ 1951 ರಲ್ಲಿ ನಡೆಯಿತು ಮತ್ತು ಆಗ ಕೇಶವ ಮೂರ್ತಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಕ್ಷೇತ್ರದಿಂದ ಕಾಂಗ್ರೆಸ್ 12 ಬಾರಿ, ಬಿಜೆಪಿ ನಾಲ್ಕು ಬಾರಿ ಮತ್ತು 1996 ರಲ್ಲಿ ಜೆಡಿಎಸ್ ಒಂದು ಬಾರಿ ಗೆದ್ದಿದೆ.

ಕೆಲವು ಪ್ರದೇಶಗಳಲ್ಲಿ ಬಿಜೆಪಿಗಿದೆ ಕಠಿಣ ಸವಾಲು

2023 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೆಬ್ಬಾಳ (ಬೈರತಿ ಸುರೇಶ್), ಪುಲಕೇಶಿನಗರ (ಎಸಿ ಶ್ರೀನಿವಾಸ) ಮತ್ತು ಬ್ಯಾಟರಾಯನಪುರ (ಕೃಷ್ಣ ಬೈರೇಗೌಡ) ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರು ಆಯ್ಕೆಯಾದ ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿಗೆ ಕಠಿಣ ಸವಾಲು ಎದುರಾಗಲಿದೆ. ಕೆಆರ್ ಪುರಂನಲ್ಲಿ ಬೈರತಿ ಬಸವರಾಜ್ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದಿದ್ದರೂ ಸೋದರ ಸಂಬಂಧಿ ಬೈರತಿ ಸುರೇಶ್‌ ಸಚಿವರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸೆಳೆಯಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ದಾಸರಹಳ್ಳಿಯಲ್ಲಿ ಮಾಜಿ ಶಾಸಕ ಮಂಜುನಾಥ್ ಕಾಂಗ್ರೆಸ್ ಸೇರಿದ್ದಾರೆ. ಇದರಿಂದ ಜೆಡಿಎಸ್ ಮತಗಳನ್ನು ಗಳಿಸಬಹುದು ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಆದರೆ, ಎಸ್ ಮುನಿರಾಜು ಬೆಂಬಲ ಇರುವ ಕಾರಣ ಬಿಜೆಪಿ ಸಹ ವಿಶ್ವಾಸದಿಂದ ಇದೆ.

ಬೆಂಗಳೂರಿನ ಪ್ರಮುಖ ಕ್ಷೇತ್ರಗಳಾದ ಮಲ್ಲೇಶ್ವರಂ ಮತ್ತು ಮಹಾಲಕ್ಷ್ಮಿ ಲೇಔಟ್‌ ಬಿಜೆಪಿ ಶಕ್ತಿಯಾಗಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಈ ಭಾಗದ 28,49,250 ಮತದಾರರಲ್ಲಿ ಕೇವಲ 15,60,324 ಜನರು ಮತ ಚಲಾಯಿಸಿದ್ದರು. ಅಂದರೆ ಶೇಕಡಾವಾರು ಮತದಾನ ಪ್ರಮಾಣ 54.76. ಈ ಬಾರಿ ಎರಡೂ ಪಕ್ಷಗಳು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜನರ ಮನವೊಲಿಸಲು ಮುಂದಾಗಿವೆ. ಕ್ಷೇತ್ರದಲ್ಲಿ ಅಪಾರ್ಟ್‌ಮೆಂಟ್‌ಗಳ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದ್ದು, ಬಿಜೆಪಿ ಮೋದಿ ಅಂಶವನ್ನು ನೆಚ್ಚಿಕೊಂಡು ಪ್ರಚಾರ ನಡೆಸುತ್ತಿದೆ.

ಉಡುಪಿ ಚಿಕ್ಕಮಗಳೂರಿಂದ ಬಂದವರಿಗಿದೆ ಗೆದ್ದ ಇತಿಹಾಸ!

ಬಿಜೆಪಿಯ ಡಿಬಿ ಚಂದ್ರೇಗೌಡ ಉಡುಪಿ ಚಿಕ್ಕಮಗಳೂರಿನಲ್ಲಿದ್ದರೂ ಬೆಂಗಳೂರು ಉತ್ತರದಿಂದ 2009ರಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಡಿವಿ ಸದಾನಂದ ಗೌಡ ಕೂಡ ಉಡುಪಿ ಚಿಕ್ಕಮಗಳೂರಿಂದ ಬಂದು ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಗೆಲುವು ಯಾರಿಗೆ? ಸಿಎಸ್​​ಡಿಎಸ್ ಸಮೀಕ್ಷೆಯಲ್ಲಿ ಬಿಜೆಪಿಗೆ ಬಲ, ದಕ್ಷಿಣ ಭಾರತದಲ್ಲಿಯೂ ಮೋದಿ ಮೋಡಿ

ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಸಚಿವರಾಗಿ ತಾವು ಮಾಡಿದ ಕೆಲಸಗಳಿಗೆ ಯಶವಂತಪುರ ಮತ್ತು ಕೆಂಗೇರಿಯಲ್ಲಿ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸದಲ್ಲಿ ಶೋಭಾ ಕರಂದ್ಲಾಜೆ ಇದ್ದಾರೆ.

ರಾಜೀವ್ ಗೌಡ ಹೆಚ್ಚುಗಾರಿಕೆ ಏನು?

2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ರಾಜೀವ್ ಗೌಡ ಅಪಾರ್ಟ್ಮೆಂಟ್ ಸಂಘಗಳನ್ನು ಓಲೈಸಿ ಕಾಂಗ್ರೆಸ್‌ಗೆ ಭದ್ರ ಬುನಾದಿ ಹಾಕಿದ್ದರು. ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ಅವರ ಪಾತ್ರವೂ ಇದೆ ಎಂಬುದು ಗಮನಾರ್ಹ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Sat, 13 April 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!