AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NPS ರದ್ದುಗೊಳಿಸುವಂತೆ ಸರ್ಕಾರಿ ನೌಕರರ ಪ್ರತಿಭಟನೆ, ಸರ್ಕಾರಿ ಕಚೇರಿಗಳು ಸ್ತಬ್ಧ

ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ರಾಜ್ಯದ ಬಹುತೇಕ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿವೆ. ಎನ್​ಪಿಎಸ್​ ರದ್ದುಗೊಳಿಸುವಂತೆ ಸರ್ಕಾರಿ ನೌಕರರು ಪಟ್ಟು ಹಿಡಿದಿರುವುದು ಏಕೆ? ಇಲ್ಲಿದೆ ಕಾರಣ

NPS ರದ್ದುಗೊಳಿಸುವಂತೆ ಸರ್ಕಾರಿ ನೌಕರರ ಪ್ರತಿಭಟನೆ, ಸರ್ಕಾರಿ ಕಚೇರಿಗಳು ಸ್ತಬ್ಧ
ವಿಧಾನಸೌಧ
Kiran Surya
| Edited By: |

Updated on: Feb 07, 2025 | 12:37 PM

Share

ಬೆಂಗಳೂರು, ಫೆಬ್ರವರಿ 07: ರಾಷ್ಟ್ರೀಯ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (OPS) ಜಾರಿಗೆ ತರುವಂತೆ ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಎನ್​ಪಿಎಸ್​ ನೌಕರರು ಇಂದು (ಫೆ.07) ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಬಹುತೇಕ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿವೆ.

2006 ರಿಂದ ಇತ್ತೀಚಿನವರೆಗೂ 2 ಲಕ್ಷದ 83 ಸಾವಿರ ಮಂದಿ ಸರ್ಕಾರಿ ಕೆಲಸಕ್ಕೆ ಸೇರಿದ್ದಾರೆ. ಇವರಿಗೆ ಎನ್​ಪಿಎಸ್​ಪಿಂಚಣಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

NPS​ ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದ ಸಿಎಂ

ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದತಿ ಬಗ್ಗೆ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. NPS ನೌಕರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದ ಅವರು, ಎನ್​ಪಿಎಸ್​ ರದ್ದುಪಡಿಸಿದ ಇತರೆ ರಾಜ್ಯಗಳಲ್ಲಿ ಅನುಸರಿಸಲಾದ ಕ್ರಮಗಳ ಕುರಿತು ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಿದೆ ಎಂದು ಹೇಳಿದ್ದರು.

ರಾಜಸ್ಥಾನ, ಛತ್ತೀಸ್​ಗಡ, ಜಾರ್ಖಂಡ್​ ಸೇರಿದಂತೆ ಕೆಲವು ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ಜಾರಿಗೊಳಿಸುವುದಾಗಿ ಹೇಳಿದ್ದವು. ಪಂಜಾಬ್ ಸರ್ಕಾರ ಕೂಡ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಇತ್ತೀಚೆಗೆ ಹೇಳಿತ್ತು. ಕರ್ನಾಟಕದಲ್ಲಿಯೂ ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ಜಾರಿಗೊಳಿಸಬೇಕು ಎಂಬ ಆಗ್ರಹ ಸರ್ಕಾರಿ ನೌಕರ ವೃಂದದಿಂದ ಕೇಳಿಬಂದಿತ್ತು.

ಇದನ್ನೂ ಓದಿ:  ಎನ್​ಪಿಎಸ್​ ರದ್ದತಿ ಬಗ್ಗೆ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಎನ್​ಪಿಎಸ್​ ಎಂದರೇನು?

ಎನ್​ಪಿಎಸ್ ಎಂಬುದು ರಾಷ್ಟ್ರೀಯ ಅಥವಾ ಹೊಸ ಪಿಂಚಣಿ ಯೋಜನೆಯಾಗಿದ್ದು, ಪಿಂಚಣಿ ಮತ್ತು ಹೂಡಿಕೆಗಳ ಸಂಯೋಜನೆಯಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ಉದ್ಯೋಗಿ ಕೂಡ ಮೂಲ ವೇತನದ ಶೇಕಡಾ 10ರಷ್ಟನ್ನು ನಿವೃತ್ತಿ ನಿಧಿಗೆ ಕೊಡುಗೆಯಾಗಿ ನೀಡಬೇಕು. ಉದ್ಯೋಗದಾತರು ಮೂಲ ವೇತನದ ಶೇಕಡಾ 14ರಷ್ಟನ್ನು ಕೊಡುಗೆಯಾಗಿ ನೀಡಬೇಕಾಗುತ್ತದೆ. ಈ ಯೋಜನೆಯ ದೊಡ್ಡ ಪ್ರಯೋಜನವೆಂದರೆ, ಖಾಸಗಿ ಕ್ಷೇತ್ರದ ಉದ್ಯೋಗಿಗೂ ಸೇರಿಕೊಳ್ಳಲು ಅವಕಾಶವಿದೆ. ನಿವೃತ್ತಿಯ ನಂತರ ನಾಗರಿಕರಿಗೆ ಹಣಕಾಸು ಭದ್ರತೆಯನ್ನು ಒದಗಿಸುವುದಕ್ಕಾಗಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ನಿರ್ವಹಿಸುತ್ತಿದೆ. ಪಿಎಫ್​ಆರ್​ಡಿಎ ಸ್ಥಾಪಿಸಿರುವ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್ (NPST) ಎನ್​​ಪಿಎಸ್​ನ ಅಧಿಕೃತ ಮಾಲೀಕತ್ವ ಹೊಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್