Video: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್, ಬಿಗಿ ಭದ್ರತಾ ವ್ಯವಸ್ಥೆ

Updated on: Aug 02, 2026 | 10:55 AM

ಸಿವಿಲ್ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಗಿ ಭದ್ರತೆಯೊಂದಿಗೆ ನಡೆಯುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಜಾಮರ್‌ಗಳು, ಸಿಸಿಟಿವಿ ಕ್ಯಾಮರಾಗಳು ಮತ್ತು ಪೊಲೀಸ್ ಭದ್ರತೆ ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಳೆ ಮತ್ತು ಗುಡ್ಡ ಕುಸಿತದಿಂದಾಗಿ ಕೆಲವು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರ ತಲುಪಲು ತೊಂದರೆಯಾಗಿದೆ. ಸುಮಾರು 4.5 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಬೆಂಗಳೂರು: ಸಿವಿಲ್ ಪೊಲೀಸ್ ಪೇದೆ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಇಂದು ಬೆಂಗಳೂರು ಸೇರಿದಂತೆ ಹಲವು ಕೇಂದ್ರಗಳಲ್ಲಿ ನಡೆಯುತ್ತಿದೆ. 3,991 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ನಡೆಯುತ್ತಿರುವ ಈ ಪರೀಕ್ಷೆಗೆ ಸುಮಾರು 4.5 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ರಾಜಾಜಿನಗರದ ಸಂಯುಕ್ತ ಪದವಿಪೂರ್ವ ಕಾಲೇಜು ಸೇರಿದಂತೆ ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಬೆಳಗ್ಗೆಯಿಂದಲೇ ಆಗಮಿಸಿದ್ದಾರೆ.

ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ವರದಿಯಾಗಿದ್ದರಿಂದ, ಈ ಬಾರಿ ಪರೀಕ್ಷಾ ಪ್ರಾಧಿಕಾರವು ಅತೀವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್‌ಗಳನ್ನು ಅಳವಡಿಸಲಾಗಿದ್ದು, ಮೊಬೈಲ್‌ಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳನ್ನು ಆಧಾರ್ ಕಾರ್ಡ್ ಮತ್ತು ಅರ್ಜಿ ನಮೂನೆಗಳನ್ನು ಪರಿಶೀಲಿಸಿ ಒಳಗಡೆ ಬಿಡಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 02, 2026 10:55 AM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More