ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು

ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗದ ಬೀಳಕಹಳ್ಳಿ ಮೆಟ್ರೋ ನಿಲ್ದಾಣಕ್ಕೆ ‘ಐಐಎಂಬಿ’ ಎಂದು ಹೆಸರಿಟ್ಟಿರುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಹೆಸರನ್ನು ಅಳಿಸಿ ಐಐಎಂಬಿ ಎಂದು ನಾಮಕರಣ ಮಾಡಿರುವ ಬಿಎಂಆರ್‌ಸಿಎಲ್ ನಡೆಯ ವಿರುದ್ಧ ನಿವಾಸಿಗಳು ಆಕ್ರೋಶ ಹೊರಹಾಕಿದ್ದು, ಹೆಸರು ಬದಲಾವಣೆಗಾಗಿ ಆಗ್ರಹಿಸಿದ್ದಾರೆ.

ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು
ನಮ್ಮ ಮೆಟ್ರೋ ಪಿಂಕ್ ಲೈನ್ ಐಐಎಂಬಿ ಸ್ಟೇಷನ್
Image Credit source: tv9
Edited By:

Updated on: Apr 30, 2026 | 6:44 AM

ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ (Pink Line Metro) ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲು ಸಿದ್ಧವಾಗುತ್ತಿದೆ. ಆದರೆ, ಈ ಮಾರ್ಗದ ನಿಲ್ದಾಣವೊಂದಕ್ಕೆ ನಾಮಕರಣ ಮಾಡುವ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೀಳಕಹಳ್ಳಿ ಏರಿಯಾದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಬಿಎಂಆರ್‌ಸಿಎಲ್ (BMRCL) ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಎಂದು ಹೆಸರಿಟ್ಟಿರುವುದು ಸ್ಥಳೀಯ ನಿವಾಸಿಗಳ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಸ್ಥಳೀಯತೆಯ ಅಸ್ಮಿತೆಗಾಗಿ ಹೋರಾಟ

ಬೀಳಕಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಮೆಟ್ರೋ ನಿಲ್ದಾಣವಿದ್ದರೂ, ಐಐಎಂಬಿ (IIMB) ಸಂಸ್ಥೆಯ ಹೆಸರನ್ನು ನಿಲ್ದಾಣಕ್ಕೆ ಇಟ್ಟಿರುವುದು ಸ್ಥಳೀಯರ ವಿರೋಧಕ್ಕೆ ಕಾರಣ. ನಮ್ಮ ಏರಿಯಾದ ಮೂಲ ಹೆಸರು ಬಿಳೇಕಹಳ್ಳಿ ಎಂದಿರುವಾಗ, ಐಐಎಂಬಿ ಹೆಸರೇಕೆ? ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದಾರೆ. ಸ್ಥಳೀಯತೆಗೆ ಮೊದಲ ಆದ್ಯತೆ ನೀಡಬೇಕು ಮತ್ತು ನಿಲ್ದಾಣದ ಹೆಸರನ್ನು ತಕ್ಷಣವೇ ‘ಬೀಳಕಹಳ್ಳಿ ಮೆಟ್ರೋ ನಿಲ್ದಾಣ’ ಎಂದು ಬದಲಾಯಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೆಸರು ಬದಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ನಿವಾಸಿಗಳಾದ ನಾಗರಾಜ್ ಮತ್ತು ನಾಗಭೂಷಣ್ ಎಚ್ಚರಿಕೆ ನೀಡಿದ್ದಾರೆ.

ಮೇ ತಿಂಗಳಲ್ಲಿ ಆರು ನಿಲ್ದಾಣಗಳು ಓಪನ್?

ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ 21.25 ಕಿ.ಮೀ ವ್ಯಾಪ್ತಿಯ ಈ ಪಿಂಕ್ ಲೈನ್ ಮಾರ್ಗದಲ್ಲಿ ಒಟ್ಟು 18 ನಿಲ್ದಾಣಗಳಿವೆ. ಇದರಲ್ಲಿ 6 ಎಲಿವೇಟೆಡ್ ಮತ್ತು 12 ಅಂಡರ್​​ಗ್ರೌಂಡ್ ನಿಲ್ದಾಣಗಳಿವೆ. ಬರುವ ಮೇ ತಿಂಗಳಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 6 ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಸಿದ್ಧತೆ ಮಾಡಿಕೊಂಡಿದೆ. ಉಳಿದ 13.76 ಕಿ.ಮೀ ಭೂಗತ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ಈ ವರ್ಷದ ಅಂತ್ಯಕ್ಕೆ ಪೂರ್ಣ ಮಾರ್ಗ ಉದ್ಘಾಟನೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us