ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್​​

| Updated By: ವಿವೇಕ ಬಿರಾದಾರ

Updated on: Oct 18, 2024 | 12:58 PM

ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರಿನ ಹಲವು ಶಾಲೆ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದು ನಗರದಲ್ಲಿ ಭಯ ಸೃಷ್ಟಿ ಮಾಡಿತ್ತು. ಬಾಂಬ್​ ಬೆದರಿಕೆ ಇ-ಮೇಲ್​ ಪ್ರಕರಣದ ತನಿಖೆ ನಡೆಸಿದ ದಕ್ಷಿಣ ವಿಭಾಗದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್​​
ಪೊಲೀಸ್​ ಆಯಕ್ತ ಬಿ ದಯಾನಂದ್​
Follow us on

ಬೆಂಗಳೂರು, ಅಕ್ಟೋಬರ್​ 18: ನಗರದ ವಿವಿಧ ಶಾಲೆ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ (Bomb Threat E-Mail) ಮಾಡಿದ್ದ 48 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ ದಯಾನಂದ್ (B Dayananda)​ ತಿಳಿಸಿದರು. ಆರೋಪಿ ಹನುಮಂತ ನಗರ ಮತ್ತು ವಿವಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೇಜುಗಳಿಗೆ ಇ ಮೇಲ್ ಮುಖಾಂತರ ಬಾಂಬ್ ಬೆದರಿಕೆ ಹಾಕಿದ್ದನು. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಪ್ರಕರಣದ ತನಿಖೆ ನಡೆಸಿ, ಆರೋಪಿಯನ್ನು ಡಾರ್ಜಲಿಂಗ್ ಜಿಲ್ಲೆಯ ಸಾಲ್​ಬರಿ ನಗರದಲ್ಲಿ ವಶಕ್ಕೆ ಪಡೆದಿದರು ಎಂದು ತಿಳಿಸಿದರು.

ಆರೋಪಿ ಬಳಿಯಿಂದ ಲ್ಯಾಟ್​ಟಾಪ್ ಮತ್ತು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಸದ್ಯ ಆರೋಪಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಆರೋಪಿ ಪಶ್ಚಿಮ ಬಂಗಾಳದಲ್ಲಿ ಸಹ 10 ಕಡೆ ಇ-ಮೇಲ್ ಬೆದರಿಕೆ ಹಾಕಿದ್ದನು ಎಂದರು.

ಇದನ್ನೂ ಓದಿ: ಬೆಂಗಳೂರು ಮಹಾಲಕ್ಷ್ಮೀ ಕೊಲೆಯಾಗಿದ್ದು ಮದುವೆ ವಿಚಾರಕ್ಕೆ?: ಕಮಿಷನರ್​ ದಯಾನಂದ್​ ಹೇಳಿದ್ದಿಷ್ಟು

21 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು 21.17 ಕೋಟಿ ರೂ. ಮೌಲ್ಯದ ಡ್ರಗ್ಸ್​​​​​ ಜಪ್ತಿ ಮಾಡಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ​​ ಸಂಬಂಧಿಸಿದಂತೆ 12 ಕೇಸ್ ದಾಖಲಿಸಿ, ಮೂವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೆಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಐದು ಪ್ರಕರಣಗಳಿಗೆ ಸೇರಿದ 70 ಲಕ್ಷ ಮೌಲ್ಯದ 1 ಕೆ.ಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಇತರೆ ಮೂವರು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿಸಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿರುವ  ಪ್ರಕರಣದ ತನಿಖೆ ಬಹುತೇಕ ಅಂತ್ಯ ಆಗಿದೆ.  ಈಗಾಗಲೇ ಚಾರ್ಜ್​ಶೀಟ್​​ ಸಿದ್ಧವಾಗಿದ್ದು, ಸ್ಕ್ರೂಟನಿ ನಡೆಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:55 pm, Fri, 18 October 24