AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವರಿಗೆ ನೀಡಿದ್ದ ಭದ್ರತೆ ವಾಪಸ್​: ಡಿಕೆಶಿ ಸೇರಿ ಐವರಿಗೆ ಮಾತ್ರ ಮುಂದುವರಿಕೆ

ಬೆಂಗಳೂರು: ರಾಜ್ಯದ 27 ಮಾಜಿ ಸಚಿವರಿಗೆ ನೀಡಿದ್ದ ಗನ್ ಮ್ಯಾನ್ ಹಾಗೂ ಸೆಕ್ಯುರಿಟಿ ವಾಪಸ್ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ. ಎ ಮತ್ತು ಬಿ ಶ್ರೇಣಿ ಎಂದು ಡಿವೈಡ್ ಮಾಡಿ ಭದ್ರತೆ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಡಿ.ಸಿ.ತಮ್ಮಣ್ಣ, ರಮೇಶ್ ಜಾರಕಿಹೊಳಿ, ಜಿ.ಟಿ.ದೇವೇಗೌಡ ಸೇರಿ 27 ಮಂದಿಗೆ ಗನ್ ಮ್ಯಾನ್ ನೀಡಲಾಗಿತ್ತು. ಭದ್ರತೆ ವಾಪಸ್ ಪಡೆಯುವಂತೆ ಜನವರಿ 22ರಂದೇ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ. […]

ಮಾಜಿ ಸಚಿವರಿಗೆ ನೀಡಿದ್ದ ಭದ್ರತೆ ವಾಪಸ್​: ಡಿಕೆಶಿ ಸೇರಿ ಐವರಿಗೆ ಮಾತ್ರ ಮುಂದುವರಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 30, 2020 | 1:32 PM

Share

ಬೆಂಗಳೂರು: ರಾಜ್ಯದ 27 ಮಾಜಿ ಸಚಿವರಿಗೆ ನೀಡಿದ್ದ ಗನ್ ಮ್ಯಾನ್ ಹಾಗೂ ಸೆಕ್ಯುರಿಟಿ ವಾಪಸ್ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ. ಎ ಮತ್ತು ಬಿ ಶ್ರೇಣಿ ಎಂದು ಡಿವೈಡ್ ಮಾಡಿ ಭದ್ರತೆ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ.

ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಡಿ.ಸಿ.ತಮ್ಮಣ್ಣ, ರಮೇಶ್ ಜಾರಕಿಹೊಳಿ, ಜಿ.ಟಿ.ದೇವೇಗೌಡ ಸೇರಿ 27 ಮಂದಿಗೆ ಗನ್ ಮ್ಯಾನ್ ನೀಡಲಾಗಿತ್ತು. ಭದ್ರತೆ ವಾಪಸ್ ಪಡೆಯುವಂತೆ ಜನವರಿ 22ರಂದೇ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ.

ಐವರಿಗೆ ಭದ್ರತೆ ಮುಂದುವರಿಕೆ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ವೇಳೆ ಸಚಿವರಿಗೆ ಗನ್ ಮ್ಯಾನ್ ಹಾಗೂ ಮನೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನಂತರ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಭದ್ರತೆ ವಾಪಸ್ ಪಡೆಯಲು ಸೂಚಿಸಿದ್ದಾರೆ. A ಶ್ರೇಣಿಯಲ್ಲಿರುವ ಮಾಜಿ ಸಚಿವರಾದ ಡಾ. ಜಿ.ಪರಮೇಶ್ವರ್, ಎಂ.ಬಿ ಪಾಟೀಲ್ ಮತ್ತು ಹೆಚ್.ಡಿ.ರೇವಣ್ಣಗೆ Z ಶ್ರೇಣಿ ಭದ್ರತೆ ಮುಂದುವರಿಸಲಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಕೆ.ಜೆ.ಜಾರ್ಜ್  ಅವರಿಬ್ಬರಿಗೆ Y ಶ್ರೇಣಿ ಭದ್ರತೆ ಒದಗಿಸಲಾಗಿದೆ.

Published On - 1:08 pm, Thu, 30 January 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು