AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲೇ ರಂಜಾನ್ ಆಚರಿಸಿ, ಸುರಕ್ಷಿತವಾಗಿರಿ: ಕಮಲ್ ಪಂತ್ ಮನವಿ

ಲಾಕ್‌ಡೌನ್ ಮಾರ್ಗಸೂಚಿ ಪ್ರಕಾರ ಸಭೆಗೆ ಅವಕಾಶ ಇಲ್ಲ. ಸಾಮೂಹಿಕ ಪ್ರಾರ್ಥನೆಗೂ ಅವಕಾಶ ನೀಡಿಲ್ಲ. ಮಸೀದಿಗಳಲ್ಲಿ ಪ್ರಾರ್ಥನೆ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಯೂ ಇರಲ್ಲ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಬೇಕು.

ಮನೆಯಲ್ಲೇ ರಂಜಾನ್ ಆಚರಿಸಿ, ಸುರಕ್ಷಿತವಾಗಿರಿ: ಕಮಲ್ ಪಂತ್ ಮನವಿ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
Skanda
|

Updated on: May 14, 2021 | 10:12 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಈ ಬಾರಿಯೂ ಹಬ್ಬ, ಹರಿದಿನ, ಸಂಭ್ರಮಾಚರಣೆಗಳಿಗೆ ಕಡಿವಾಣ ಬಿದ್ದಿದೆ. ಇಂದು (ಮೇ 14) ರಾಜ್ಯಾದ್ಯಂತ ರಂಜಾನ್ ಆಚರಿಸಲಾಗುತ್ತಿದ್ದು, ಕೊರೊನಾ ನಿಯಮಾವಳಿಗಳ ಪ್ರಕಾರ ಸಾಮೂಹಿಕ ಪ್ರಾರ್ಥನೆ, ಸಭೆ, ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ. ಈ ಪ್ರಯುಕ್ತ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವಿಟರ್​ನಲ್ಲಿ ಮನವಿ ಮಾಡಿದ್ದು, ಮನೆಯಲ್ಲೇ ಸುರಕ್ಷಿತವಾಗಿ ರಂಜಾನ್ ಆಚರಿಸಿ ಎಂದು ಕೇಳಿಕೊಂಡಿದ್ದಾರೆ.

ಲಾಕ್‌ಡೌನ್ ಮಾರ್ಗಸೂಚಿ ಪ್ರಕಾರ ಸಭೆಗೆ ಅವಕಾಶ ಇಲ್ಲ. ಸಾಮೂಹಿಕ ಪ್ರಾರ್ಥನೆಗೂ ಅವಕಾಶ ನೀಡಿಲ್ಲ. ಮಸೀದಿಗಳಲ್ಲಿ ಪ್ರಾರ್ಥನೆ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಯೂ ಇರಲ್ಲ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಮುಸ್ಲಿಂ ಧಾರ್ಮಿಕ ಕಮಿಟಿ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.

ಹಳೇ ವಿಡಿಯೋ ವೈರಲ್​ ಸಾಮಾಜಿಕ ತಾಣಗಳಲ್ಲಿ ಕೆಲವರು ಹಿಂದಿನ ವರ್ಷದ ರೂಲ್ಸ್​ಗೆ ಸಂಬಂಧಿಸಿದ ಟಿವಿ9 ನ್ಯೂಸ್ ವಿಡಿಯೋ ವೈರಲ್ ಮಾಡುತ್ತಿದ್ದು, ಅದು ಈ ವರ್ಷದ್ದು ಎಂದು ಬಿಂಬಿಸಲು ಯತ್ನಿಸಿದ್ದಾರೆ. ಕಳೆದ ವರ್ಷ ಪ್ರಾರ್ಥನೆಗೆ ಅವಕಾಶ ಕೊಟ್ಟಿದ್ದರ ಕುರಿತಾಗಿ ಇರುವ ಸುದ್ದಿಯನ್ನು ಈಗ ವೈರಲ್ ಮಾಡಲಾಗುತ್ತಿದೆ. ಆದರೆ ಇದು 2020ರ ಸಂದರ್ಭದ ನ್ಯೂಸ್ ವಿಡಿಯೋ ಆಗಿದೆ. ಈ ಬಾರಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲ ಎಂದು ಕಮಿಷನರ್ ಕಮಲ್ ಪಂತ್ ಸಹ ಸ್ಪಷ್ಟಪಡಿಸಿದ್ದಾರೆ.

ನಿನ್ನೆ ಮಾಡಿರುವ ಟ್ವೀಟ್:

ಇದನ್ನೂ ಓದಿ: Eid Ul Fitr 2021: ಮನೆಯ್ಲಲೇ ರಂಜಾನ್ ಪ್ರಾರ್ಥನೆ; ಇಂದು ಕರವಳಿಯಾದ್ಯಂತ ಸರಳ ಹಬ್ಬ ಆಚರಣೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ