AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಸ್ತೆಗುಂಡಿ ಸಮಸ್ಯೆ: ಅಧಿಕಾರಿಗಳಿಗೆ ಸಿಎಂ ಖಡಕ್​ ಸೂಚನೆ, ಸಭೆಯ ಮುಖ್ಯಾಂಶಗಳು ಇಲ್ಲಿದೆ

ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಸಭೆ ನಡೆಯಿತು. ಈ ವೇಳೆ ಒಂದು ತಿಂಗಳೂಳಗೆ ರಸ್ತೆ ದುರಸ್ತಿ ಮಾಡಬೇಕು, ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್​ ಎಚ್ಚರಿಕೆ ನೀಡಿದ್ದಾರೆ. ಸಭೆಯ ಮುಖ್ಯಾಂಶಗಳು ಇಲ್ಲಿದೆ.

ಬೆಂಗಳೂರಿನಲ್ಲಿ ರಸ್ತೆಗುಂಡಿ ಸಮಸ್ಯೆ: ಅಧಿಕಾರಿಗಳಿಗೆ ಸಿಎಂ ಖಡಕ್​ ಸೂಚನೆ, ಸಭೆಯ ಮುಖ್ಯಾಂಶಗಳು ಇಲ್ಲಿದೆ
ಬೆಂಗಳೂರು ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಭೆಯ ನಡೆಸಿದರು
ಭಾವನಾ ಹೆಗಡೆ
|

Updated on: Sep 21, 2025 | 10:16 AM

Share

ಬೆಂಗಳೂರು, ಸೆಪ್ಟೆಂಬರ್ 21: ಸದ್ಯ ರಾಜ್ಯದಲ್ಲಿ ಬೆಂಗಳೂರು ರಸ್ತೆ (Pothole) ಗುಂಡಿ ವಿಚಾರ ಸಾಕಷ್ಟು ಸುದ್ದು ಮಾಡುತ್ತಿದೆ. ಇದೇ ವಿಚಾರವಾಗಿ ಇತ್ತೀಚೆಗೆ ಐಟಿ ದಿಗ್ಗಜರು ಅಸಮಾಧಾನ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಜನರು ಕೂಡ ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯನವರೇ (Siddaramaiah) ಅಖಾಡಕ್ಕೆ ಇಳಿದಿದ್ದಾರೆ. ಶನಿವಾರ ಸಭೆ ಮಾಡಿದ ಸಿಎಂ ಅಧಿಕಾರಿಗಳು, ಇಂಜಿನಿಯರ್​ಗಳನ್ನು ಜಾಡಿಸಿದರು. ಜೊತೆಗೆ ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಿದ್ದಾರೆ.

ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಕೊಟ್ಟ ಸೂಚನೆಗಳೇನು?

‘ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ? ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ? ಪ್ರತಿ ವಾರ್ಡ್​ನ ಎಂಜಿನಿಯರ್​ಗಳು,  ಮುಖ್ಯ ಎಂಜಿನಿಯರ್​ಗಳು ಏನು ಮಾಡುತ್ತಿದ್ದಾರೆ? ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರಯೋಗ್ಯ ಮಾಡಲೇಬೇಕು. ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಮತ್ತು ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮವಹಿಸಿ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ? ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ?  ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಇದರ ಮೇಲೆ ನಿಗಾ ಇರಿಸಬೇಕು. ಬಿಡಿಎ, ಬಿಎಂಆರ್ ಸಿಎಲ್, ಜಲಮಂಡಳಿ ಅಧಿಕಾರಿಗಳ ನಡುವೆ ಸಮನ್ವಯವೇ ಇರುವುದಿಲ್ಲ. ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು ಎಂದು ಹೇಳಿದ್ದಾರೆ.

ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮುಖ್ಯ ಆಯುಕ್ತರು ಪ್ರತಿ ವಾರ ಐದೂ ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು.  ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ. ಆದ್ಯತೆ ಮೇರೆಗೆ ಕ್ರಮ ವಹಿಸಿ. ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು’ ಎಂದು ಮುಖ್ಯಮಂತ್ರಿಗಳು ಖಡಕ್ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಭಾಗಿಯಾಗಿದ್ದರು.

ಇದನ್ನೂ ಓದಿ ಬೆಂಗಳೂರು ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ಮತ್ತಷ್ಟು ಅವ್ಯವಸ್ಥೆ

ಸಭೆಯ ಮುಖ್ಯಾಂಶಗಳು

  •  ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ 1648.43 ಕಿ. ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ.
  • ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆ ಗಳಲ್ಲಿ ಒಟ್ಟು 14795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6749 ಗುಂಡಿಗಳನ್ನು ಮುಚ್ಚಲಾಗಿದ್ದು 8046 ಗುಂಡಿಗಳು ಮುಚ್ಚಲು ಬಾಕಿ ಇವೆ.
  • ಅಕ್ಟೋಬರ್ ಅಂತ್ಯದ  ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
  •  ಈಗಾಗಲೇ 108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.‌ 143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ.
  • ಈಗಾಗಲೇ 401.63 ಕಿ. ಮೀ ರಸ್ತೆಗಳು ಡಾಂಬರೀಕರಣ ಗೊಂಡಿದ್ದು, 440.92 ಕಿ.ಮೀ ಡಾಂಬರೀಕರಣ ಕಾಮಗಾರಿ ಪ್ರಗತಿಯಲ್ಲಿದೆ.
  • ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ  ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.
  • ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆ ಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26 ರ ಆಯವ್ಯಯದಲ್ಲಿ 18 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ .
  • ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ರೂ. 25 ಕೋಟಿಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ.
  • ನೂತನ ತಂತ್ರಜ್ಞಾನ ಜೆಟ್ಪ್ಯಾಚರ್ ಯಂತ್ರ ಬಳಸಿಕೊಳ್ಳಲು ರೂ. 2.50 ಕೋಟಿಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.
  •  ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ .
  • ಇಬ್ಬಲೂರು ಜಂಕ್ಷನ್, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ  ಜಂಕ್ಷನ್ ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು ರೂ 400 ಕೋಟಿಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರ ವಾಗಿ ಅಭಿವೃದ್ದಿ ಪಡಿಸಲು ಉದ್ದೇಶಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ