AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಇರೋದಿಲ್ಲ; ನಿಮ್ಮ ಏರಿಯಾದಲ್ಲೂ ಪವರ್ ಕಟ್ ಇದೆಯಾ?

BESCOM: ಬೆಂಗಳೂರಿನ ಜಯನಗರ, ಪದ್ಮನಾಭನಗರ, ಕತ್ರಿಗುಪ್ಪೆ, ಬನಶಂಕರಿ, ಮಾರತ್ತಹಳ್ಳಿ ಮುಂತಾದ ಕಡೆಗಳಲ್ಲಿ ಇಂದು ಸಂಜೆಯವರೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ.

Bengaluru News: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಇರೋದಿಲ್ಲ; ನಿಮ್ಮ ಏರಿಯಾದಲ್ಲೂ ಪವರ್ ಕಟ್ ಇದೆಯಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 19, 2021 | 11:15 AM

Share

ಬೆಂಗಳೂರು: ಒಂದೆರಡು ಗಂಟೆ ಕರೆಂಟ್ ಇಲ್ಲದಿದ್ದರೂ ಬೆಂಗಳೂರಿನಲ್ಲಿ ಅಲ್ಲೋಲಕಲ್ಲೋಲವಾಗಿಬಿಡುತ್ತದೆ. ಈಗಂತೂ ಕಾರ್ಖಾನೆಗಳು ಮತ್ತೆ ಆರಂಭವಾಗಿದ್ದು, ಲಾಕ್​ಡೌನ್​ಗೂ ಮೊದಲಿನಂತೆ ಕೆಲಸಗಳು ನಡೆಯುತ್ತಿವೆ. ಸಾಫ್ಟ್​ವೇರ್ ಮುಂತಾದ ಬೇರೆ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಆಯ್ಕೆಯನ್ನು ನೀಡಲಾಗಿದೆ. ಇದರಿಂದ ವಿದ್ಯುತ್ ಇಲ್ಲದಿದ್ದರೆ ಬೆಂಗಳೂರಿನ ಜನರಿಗೆ ಬಹಳ ಕಷ್ಟವಾಗುತ್ತದೆ. ಆದರೆ, ಈ ಏರಿಯಾಗಳಲ್ಲಿ ಇಂದು ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾದರೆ, ಪವರ್ ಕಟ್ (Power Cut) ಇರುವ ಏರಿಯಾಗಳು ಯಾವುವು? ಪೂರ್ಣ ಪಟ್ಟಿ ಇಲ್ಲಿದೆ…

ಬೆಂಗಳೂರಿನ ಜಯನಗರ ಉಪವಿಭಾಗದ ಅಡಿಯಲ್ಲಿ ಬರುವ ಹಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ. ಜಯನಗರ, ಪದ್ಮನಾಭನಗರ, ಕತ್ರಿಗುಪ್ಪೆ, ಬನಶಂಕರಿ, ಮಾರತ್ತಹಳ್ಳಿ ಮುಂತಾದ ಕಡೆಗಳಲ್ಲಿ ಇಂದು ಸಂಜೆಯವರೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ.

S2: ಸಬ್​-ಡಿವಿಶನ್​, ಬಿಎಂಟಿಸಿ, ಸುಧಾಮನಗರ, ಸಿದ್ದಯ್ಯ ರಸ್ತೆ ಭಾಗಗಳಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 6.30 ರವರೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ.

​S6: ಎಲಿಟಾ, ಅಷ್ಟಲಕ್ಷ್ಮಿ ಲೇಔಟ್, ಪುಟ್ಟೇನಹಳ್ಳಿ, ಕೆ.ಆರ್.​ ಲೇಔಟ್ ಏರಿಯಾಗಳಲ್ಲಿ ಇಂದು ಬೆಳಗ್ಗೆ 10ರಿಂದ 6.30ರವರೆಗೆ ಕರೆಂಟ್ ಇರೋದಿಲ್ಲ.

S9: ಪದ್ಮನಾಭನಗರ, ಎಸ್​9 ಕಚೇರಿ, ರಿಂಗ್​ ರೋಡ್, 27ನೇ ಮುಖ್ಯರಸ್ತೆ, ಯಾರಬ್​ನಗರ ಮುಖ್ಯ ರಸ್ತೆ, ಮಸ್ಜೀದ್ ರಸ್ತೆ, ಬಿಎಸ್ಎನ್​ಎಲ್​ ಕಚೇರಿ, ಸರ್ಕಾರಿ ಆಸ್ಪತ್ರೆ, ಎನ್​ಪಿಟಿಐ ಸರ್ಕಲ್, ಇಂಡಿಯನ್​ ಆಯಿಲ್ ಪೆಟ್ರೋಲ್ ಪಂಪ್ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

S15: ಬನಶಂಕರಿ, ಕತ್ರಿಗುಪ್ಪೆ ಮುಖ್ಯ ರಸ್ತೆ ಮತ್ತು ಕತ್ರಿಗುಪ್ಪೆ ಗ್ರಾಮ, 100 ಅಡಿ ರಿಂಗ್​ ರೋಡ್ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳಲಿದೆ.

S18: ಅರೇಹಳ್ಳಿ MUSS, ಬೃಂದಾವನ ಲೇಔಟ್ ಪ್ರದೇಶಗಳಲ್ಲಿ ಬೆಳಗ್ಗೆ 9.10ರಿಂದ ಮಧ್ಯಾಹ್ನ 3 ಗಂಟೆವರೆಗೆ ಕರೆಂಟ್ ಇರುವುದಿಲ್ಲ.

S18: ಸುಬ್ರಹ್ಮಣ್ಯಪುರ MUSS, ತುರಹಳ್ಳಿ ಪ್ರದೇಶಗಳಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಜಯನಗರ ಉಪವಿಭಾಗದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಕಳೆದೊಂದು ವಾರದಿಂದ ಆಗಾಗ ವಿದ್ಯುತ್ ವ್ಯತ್ಯಯವಾಗುತ್ತಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿಗರೇ ಗಮನಿಸಿ; ಈ ಏರಿಯಾಗಳಲ್ಲಿ ಜುಲೈ 17ರವರೆಗೆ ಕರೆಂಟ್ ಇರೋದಿಲ್ಲ

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಮುಂದುವರೆದ ಮಳೆಯ ಆರ್ಭಟ; ಹಲವೆಡೆ ಆರೆಂಜ್ ಅಲರ್ಟ್​

(BESCOM announces No power Supply in these areas of Bangalore today Full List is here)

Published On - 11:12 am, Mon, 19 July 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ