AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಗಡಿ ಬಳಿಯ ಕಲ್ಲು ಕ್ವಾರಿ ದುರಂತದಲ್ಲಿ 7 ಜನ ಸಾವು: ಪ್ರಧಾನಿ ಮೋದಿ ಸಂತಾಪ

ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾವೇರಿ ಕ್ರಷರ್​​ನಲ್ಲಿ ನಡೆದಿದೆ. ಇನ್ನು ಅಪಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದ್ದಾರೆ.

ಮಾಗಡಿ ಬಳಿಯ ಕಲ್ಲು ಕ್ವಾರಿ ದುರಂತದಲ್ಲಿ 7 ಜನ ಸಾವು: ಪ್ರಧಾನಿ ಮೋದಿ ಸಂತಾಪ
Narendra Modi
ರಮೇಶ್ ಬಿ. ಜವಳಗೇರಾ
|

Updated on: Jul 02, 2026 | 7:00 PM

Share

ಮುಖ್ಯಾಂಶಗಳು

  • ಮಾಗಡಿ ಬಳಿಯ ಕಲ್ಲು ಕ್ವಾರಿ ದುರಂತದಲ್ಲಿ 7 ಜನ ಸಾವು
  • ಅಪಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ಮೋದಿ ಸಂತಾಪ
  • ಟ್ವೀಟ್ ಮೂಲಕ ಸಂತಾಪ ಸೂಚಿಸಿದ ನರೇಂದ್ರ ಮೋದಿ

ಬೆಂಗಳೂರು, (ಜುಲೈ 02): ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಅಪಘಡದಲ್ಲಿ (Bengaluru quarry tragedy) ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿ, “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಕರ್ನಾಟಕದ ಬೆಂಗಳೂರು ನಗರ ಜಿಲ್ಲೆಯ ಕಲ್ಲು ಗಣಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವುದು ನೋವು ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ: 7 ಮಂದಿ ಬಲಿ, ಐವರು ಕೂಲಿ ಕಾರ್ಮಿಕರಿಗೆ ಗಾಯ

ಕಾವೇರಿ ಕಂಪನಿಗೆ ಸೇರಿದ ಕ್ರಷರ್​

ಕಾವೇರಿ ಕಂಪನಿಗೆ ಸೇರಿದ ಕ್ರಷರ್​ನಲ್ಲಿ ದುರಂತ ಸಂಭವಿಸಿದ್ದು, ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ಎಂದಿನಂತೆ ಕೆಲಸ ಮಾಡ್ತಿದ್ದ ಕಾರ್ಮಿಕರ ಪಾಲಿಗೆ ಬಂಡೆ ಯಮನಾಗಿ ಬಂದಿದೆ. ಇಟಾಚಿಯಲ್ಲಿ ಕೆಲಸ ಮಾಡುವಾಗ ಬಂಡೆ ಕೆಳಗೆ ಬಿದ್ದಿದ್ದು, ಕಾರ್ಮಿಕರ ಮೇಲೆಯೇ ಬಿದ್ದು ಭಾರೀ ದುರಂತ ಸಂಭವಿಸಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಮುಂಜಾನೆ ಜಿಲೆಟಿನ್ ಸ್ಫೋಟ!

ಸ್ಥಳೀಯ ಮೂಲಗಳ ಪ್ರಕಾರ, ಹುಲವೇನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಕದ್ದುಮುಚ್ಚಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿತ್ತು. ಇಂದು ಬೆಳಗಿನ ಜಾವ ಕಾರ್ಮಿಕರು ಎಂದಿನಂತೆ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದಾಗ, ದೊಡ್ಡ ಬಂಡೆಗಳನ್ನು ಪುಡಿ ಮಾಡಲು ಅತಿಯಾದ ತೀವ್ರತೆಯ ಸ್ಫೋಟಕಗಳನ್ನು ಬಳಸಲಾಗಿದೆ. ಈ ವೇಳೆ ಸುರಕ್ಷತಾ ಕ್ರಮಗಳನ್ನು ಗಾಳಿಗೆ ತೂರಿ ಬಂಡೆ ಸ್ಫೋಟಿಸುವಾಗ ಇಡೀ ಪ್ರದೇಶವೇ ಬಹುದೊಡ್ಡ ಸೌಂಡ್‌ ಜೊತೆಗೆ ಸಿಡಿದಿದೆ. ಸ್ಫೋಟದ ತೀವ್ರತೆಗೆ ಬಂಡೆ ಕುಸಿದು ಸಿಲುಕಿ ಏಳು ಜನ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಬಿಗ್ ಬಾಸ್ ಬಿಟ್ಟು ಬಂದ ಬಳಿಕ ಮಂಜುಗೆ ಕಾಡುತ್ತಿದೆ ಪಶ್ಚಾತ್ತಾಪ
ಬಿಗ್ ಬಾಸ್ ಬಿಟ್ಟು ಬಂದ ಬಳಿಕ ಮಂಜುಗೆ ಕಾಡುತ್ತಿದೆ ಪಶ್ಚಾತ್ತಾಪ
ಒಬ್ಬರಿಗಾಗಿ ಬಸ್ ತಡೆದ ಸಿಬ್ಬಂದಿ
ಒಬ್ಬರಿಗಾಗಿ ಬಸ್ ತಡೆದ ಸಿಬ್ಬಂದಿ
ಸಿದ್ದರಾಮಯ್ಯರನ್ನು ಭೇಟಿಯಾದ ರಮೇಶ್​ ಜಾರಕಿಹೊಳಿ: ಕುತೂಹಲ ಮೂಡಿಸಿದ ನಡೆ
ಸಿದ್ದರಾಮಯ್ಯರನ್ನು ಭೇಟಿಯಾದ ರಮೇಶ್​ ಜಾರಕಿಹೊಳಿ: ಕುತೂಹಲ ಮೂಡಿಸಿದ ನಡೆ
ಡಿಸೆಂಬರ್ ಒಳಗೆ 17,000 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ
ಡಿಸೆಂಬರ್ ಒಳಗೆ 17,000 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ
ಸಕಲೇಶಪುರದಲ್ಲಿ ನೂರಾರು ವೋಟರ್ ಐಡಿ, ಆಧಾರ್ ಕಾರ್ಡ್‌ಗಳಿಗೆ ಬೆಂಕಿ!
ಸಕಲೇಶಪುರದಲ್ಲಿ ನೂರಾರು ವೋಟರ್ ಐಡಿ, ಆಧಾರ್ ಕಾರ್ಡ್‌ಗಳಿಗೆ ಬೆಂಕಿ!
ಲಕ್ಷ್ಮೇಶ್ವರದ ಕಾಟನ್ ಮಿಲ್‌ನಲ್ಲಿ ಭಾರಿ ಅಗ್ನಿ ಅವಘಡ
ಲಕ್ಷ್ಮೇಶ್ವರದ ಕಾಟನ್ ಮಿಲ್‌ನಲ್ಲಿ ಭಾರಿ ಅಗ್ನಿ ಅವಘಡ
'ಸಿದ್ದರಾಮಯ್ಯ ಸ್ಟಿಂಗ್​​ ಮಾಡಿಸಿದ್ದು ಜನತಾ ದಳ'​​: ಸಚಿವ ಚಲುವರಾಯಸ್ವಾಮಿ
'ಸಿದ್ದರಾಮಯ್ಯ ಸ್ಟಿಂಗ್​​ ಮಾಡಿಸಿದ್ದು ಜನತಾ ದಳ'​​: ಸಚಿವ ಚಲುವರಾಯಸ್ವಾಮಿ