
ಬೆಂಗಳೂರು, ಡಿ.11: ಬೆಂಗಳೂರು (Weather Forecast) ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಳಿಗ್ಗೆ ಹಾಗೂ ಸಂಜೆ ಚಳಿ ಹೆಚ್ಚಿರಲಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಕನಿಷ್ಠ ತಾಪಮಾನ ಸುಮಾರು 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಮುಂದಿನ ವಾರದ ವೇಳೆಗೆ ತಾಪಮಾನ ಸುಮಾರು 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆ ಇದೆ ಎಂದು ಹೇಳಿದೆ. ಆದರೆ ಬೆಂಗಳೂರು ಇದರ ಪರಿಣಾಮವನ್ನು ಎದುರಿಸುವುದಿಲ್ಲ. ಬೆಂಗಳೂರಿನಲ್ಲಿ ಇಂದು (ಡಿ.11) ಮತ್ತು ನಾಳೆ (ಡಿ.12) ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನವು ಸುಮಾರು 28 ಡಿಗ್ರಿ ಸೆಲ್ಸಿಯಸ್ ಆಗುವ ನಿರೀಕ್ಷೆಯಿದೆ, ಆದರೆ ಕನಿಷ್ಠ ತಾಪಮಾನವು 16 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಬಹುದು ಎಂದು ಇಲಾಖೆ ಹೇಳಿದೆ.
ಇನ್ನು ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ. ಬೀದರ್ ಮತ್ತು ಬೆಳಗಾವಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಐದು ಡಿಗ್ರಿಗಳಿಗೆ ಇಳಿಯಬಹುದು. ಮುಂದಿನ ಎರಡು ದಿನಗಳಲ್ಲಿ, ಚಳಿಗಾಲ ಆರಂಭವಾಗುತ್ತಿದ್ದಂತೆ ನಗರದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು 13.1 °C ಗೆ ಇಳಿಯುವ ನಿರೀಕ್ಷೆಯಿದೆ, ಇದರ ಪರಿಣಾಮವಾಗಿ ಹಗಲು ಮತ್ತು ರಾತ್ರಿ ತಾಪಮಾನದಲ್ಲಿ ಗಮನಾರ್ಹ ವ್ಯತ್ಯಾಸ ಉಂಟಾಗುತ್ತದೆ ಎಂದು ಹೇಳಿದೆ.
ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಶೀತಗಾಳಿ ಬೀಸಿದ್ದು, ಬೀದರ್‌ನಲ್ಲಿ ಬುಧವಾರ ಈ ವರ್ಷದ ಕನಿಷ್ಠ ತಾಪಮಾನ 9.2° ಸೆಲ್ಸಿಯಸ್ ದಾಖಲಾಗಿದೆ. ಇದರಿಂದ ಶೀತಗಾಳಿಯು ಸಸ್ಯಗಳಲ್ಲಿ ಶಿಲೀಂಧ್ರ ರೋಗಗಳನ್ನು ಪ್ರಚೋದಿಸುವುದರ ಜೊತೆಗೆ ಜನರಿಗೆ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಡಿಸೆಂಬರ್ 10 ರಿಂದ 15 ರವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4 ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ. ಡಿಸೆಂಬರ್ 12 ರಿಂದ 15 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4-6° ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಇನ್ನು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು ಸೇರಿದಂತೆ ಹೆಚ್ಚಿನ ಭಾಗಗಳಲ್ಲಿ ಜನರು ರಾತ್ರಿಯಲ್ಲಿ ಕೊರೆಯುವ ಚಳಿಯಿಂದಾಗಿ ಮನೆಯಿಂದ ಹೊರಗೆಯೇ ಬಂದಿಲ್ಲ. ಈ ಪ್ರದೇಶದಲ್ಲಿ ಕನಿಷ್ಠ ತಾಪಮಾನ 14° ಸೆಲ್ಸಿಯಸ್ ವರೆಗೆ ಇತ್ತು.ಬಳ್ಳಾರಿಯಲ್ಲಿ 15° ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದರೆ, ವಿಜಯನಗರದಲ್ಲಿ 14° ಸೆಲ್ಸಿಯಸ್ ಹತ್ತಿರದಲ್ಲಿದೆ. ತಾಪಮಾನದಲ್ಲಿನ ಇಳಿಕೆಯಿಂದಾಗಿ, ಮುಂಜಾನೆ ಮಂಜು ಮುಸುಕಿದ ಹವಾಮಾನ ಪರಿಸ್ಥಿತಿಗಳು ಈಗಾಗಲೇ ಕಂಡುಬರುತ್ತಿದೆ.
ಇದನ್ನೂ ಓದಿ: ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.
ಕಳೆದ ಕೆಲವು ದಿನಗಳಿಂದ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇದ್ದು, ಇಂದು ಕೂಡ ಅದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಕೂಡ ದೀರ್ಘಕಾಲದ ಒಣ ಹವೆಯನ್ನು ಅನುಭವಿಸುವ ಜಿಲ್ಲೆಗಳಲ್ಲಿ ಸೇರಿವೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:19 am, Thu, 11 December 25