Bengaluru Rain: ಬೆಂಗಳೂರಿನಲ್ಲಿ ಮಳೆ, ಬಿಸಿಲ ಕಣ್ಣಾ ಮುಚ್ಚಾಲೆ, ಗುರುವಾರ ಬೆಳಗ್ಗೆಯಿಂದಲೇ ಹಲವೆಡೆ ತುಂತುರು ಮಳೆ

ಬೆಂಗಳೂರಿನೆಲ್ಲೆಡೆ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಸಾದಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾರ್ಪೋರೇಷನ್, ವಿಧಾನಸೌಧ, ಟೌನ್ ಹಾಲ್ ಸೇರಿ ಹಲವೆಡೆ ತುಂತುರು ಮಳೆ ಬಂದಿದೆ. ಬೆಳಗ್ಗೆ ಕಚೇರಿಗೆ ತೆರಳುವವರು ಪರದಾಡುವಂತಾಯಿತು.

Bengaluru Rain: ಬೆಂಗಳೂರಿನಲ್ಲಿ ಮಳೆ, ಬಿಸಿಲ ಕಣ್ಣಾ ಮುಚ್ಚಾಲೆ, ಗುರುವಾರ ಬೆಳಗ್ಗೆಯಿಂದಲೇ ಹಲವೆಡೆ ತುಂತುರು ಮಳೆ
ಮಳೆ Image Credit source: Hindustan Times
Follow us
ನಯನಾ ರಾಜೀವ್
|

Updated on:Nov 14, 2024 | 10:15 AM

ಬೆಂಗಳೂರಿನಲ್ಲಿ ಚಳಿ ಜತೆಗೆ ಮಳೆ ಬಿಸಿಲ ಕಣ್ಣಾ ಮುಚ್ಚಾಲೆ ಶುರುವಾಗಿದೆ. ಗುರುವಾರ ಬೆಳಗಿನ ಜಾವದಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ನಗರದ ಹಲವೆಡೆ ತುಂತುರು ಮಳೆಯಾಗಿದೆ. ಕಾರ್ಪೋರೇಷನ್, ರಿಚ್​ಮಂಡ್ ಟೌನ್, ವಿಧಾನಸೌಧ, ಟೌನ್ ಹಾಲ್ ಸೇರಿ ಹಲವೆಡೆ ತುಂತುರು ಮಳೆ ಬಂದಿದೆ. ಬೆಳಗ್ಗೆ ಕಚೇರಿಗೆ ತೆರಳುವವರು ಪರದಾಡುವಂತಾಯಿತು.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಚ್​ಎಎಲ್​ನಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಜೋರು ಮಳೆ, ಯೆಲ್ಲೋ ಅಲರ್ಟ್

ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.

ಕಳೆದ ತಿಂಗಳು ಬೆಂಗಳೂರಲ್ಲಿ ಬರೋಬ್ಬರಿ 60 ಮಿಮೀ ಮಳೆಯಾಗಿತ್ತು. ಈ ತಿಂಗಳ ಕೊನೆಗೆ ದಾಖಲಿಕ ಮಳೆ ಆಗುವ ಸಾಧ್ಯತೆ ಇದೆ. ಒಂದು ವಾರದಿಂದ ಮಳೆ ಆಗಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಈಗ ಚಂಡಮಾರುತ ಪರಿಚಲನೆಯಿಂದಾಗಿ ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವುದು ಖಚಿತವಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:13 am, Thu, 14 November 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ