ಬೆಂಗಳೂರಿನಲ್ಲಿ ಚಳಿ ಜತೆಗೆ ಮಳೆ ಬಿಸಿಲ ಕಣ್ಣಾ ಮುಚ್ಚಾಲೆ ಶುರುವಾಗಿದೆ. ಗುರುವಾರ ಬೆಳಗಿನ ಜಾವದಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ನಗರದ ಹಲವೆಡೆ ತುಂತುರು ಮಳೆಯಾಗಿದೆ. ಕಾರ್ಪೋರೇಷನ್, ರಿಚ್ಮಂಡ್ ಟೌನ್, ವಿಧಾನಸೌಧ, ಟೌನ್ ಹಾಲ್ ಸೇರಿ ಹಲವೆಡೆ ತುಂತುರು ಮಳೆ ಬಂದಿದೆ. ಬೆಳಗ್ಗೆ ಕಚೇರಿಗೆ ತೆರಳುವವರು ಪರದಾಡುವಂತಾಯಿತು.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಚ್ಎಎಲ್ನಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಜೋರು ಮಳೆ, ಯೆಲ್ಲೋ ಅಲರ್ಟ್
ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.
ಕಳೆದ ತಿಂಗಳು ಬೆಂಗಳೂರಲ್ಲಿ ಬರೋಬ್ಬರಿ 60 ಮಿಮೀ ಮಳೆಯಾಗಿತ್ತು. ಈ ತಿಂಗಳ ಕೊನೆಗೆ ದಾಖಲಿಕ ಮಳೆ ಆಗುವ ಸಾಧ್ಯತೆ ಇದೆ. ಒಂದು ವಾರದಿಂದ ಮಳೆ ಆಗಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಈಗ ಚಂಡಮಾರುತ ಪರಿಚಲನೆಯಿಂದಾಗಿ ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವುದು ಖಚಿತವಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:13 am, Thu, 14 November 24