AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನಲ್ಲಿ ಜಿಟಿ-ಜಿಟಿ ಮಳೆ: ವಾತಾವರಣ ಫುಲ್ ಕೂಲ್ ಕೂಲ್, ಇನ್ನಷ್ಟು ಮಳೆ ಸಾಧ್ಯತೆ

ದಕ್ಷಿಣ ಕನ್ನಡದಲ್ಲಿ ಭಾಗದಲ್ಲಿ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಇಷ್ಟು ದಿನ ಕೇವಲ ಮೋಡ ಕವಿದ ವಾತಾವರಣ ಮಾತ್ರವಿತ್ತು. ಆದರೆ ಇಂದು ಶಾಂತಿನಗರ ಸೇರಿದಂತೆ ನಗರದ ಹಲವೆಡೆ ಜಿಟಿ-ಜಿಟಿ ಮಳೆ ಶುರುವಾಗಿದೆ. ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ.

Bengaluru Rain: ಬೆಂಗಳೂರಿನಲ್ಲಿ ಜಿಟಿ-ಜಿಟಿ ಮಳೆ: ವಾತಾವರಣ ಫುಲ್ ಕೂಲ್ ಕೂಲ್, ಇನ್ನಷ್ಟು ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಜಿಟಿ-ಜಿಟಿ ಮಳೆ: ವಾತಾವರಣ ಫುಲ್ ಕೂಲ್ ಕೂಲ್, ಇನ್ನಷ್ಟು ಮಳೆ ಸಾಧ್ಯತೆ
Vinayak Hanamant Gurav
Vinayak Hanamant Gurav| Edited By: |

Updated on:Jul 15, 2024 | 4:19 PM

Share

ಬೆಂಗಳೂರು, ಜುಲೈ 15: ಪೂರ್ವ ಅರಬ್ಬೀ ಸಮುದ್ರ ಹಾಗೂ ಬಂಗಾಲ ಉಪಸಾಗರದಲ್ಲಿ ವಾಯುಭಾರ ಕುಸಿತ ಎಫೆಕ್ಟ್ ಹಿನ್ನಲೆ ಕರ್ನಾಟಕ ರಾಜ್ಯಾದ್ಯಂತ ಮಳೆ (Rain) ಆಗುತ್ತಿದೆ. ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (bengaluru) ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಇದೀಗ ಶಾಂತಿನಗರ, ರಿಚ್​ಮಂಡ್​ಟೌನ್​ ಸೇರಿದಂತೆ ಹಲವೆಡೆ ಜಿಡಿರು ಮಳೆ ಶುರುವಾಗಿದೆ. ಮಧ್ಯಾಹ್ನವೇ ಪ್ರಾರಂಭವಾದ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಪರದಾಡಿದ್ದಾರೆ.

ವಿವಿಧ ಬೇಡಿಕೆಯನ್ನು ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ಮಾಡುತ್ತಿದ್ದ ಬಿಸಿ ಊಟ ಕಾರ್ಯಕರ್ತೆಯರಿಗೂ ಮಳೆ ಎಫೆಕ್ಟ್ ತಟ್ಟಿದೆ. ಮಳೆಯಲ್ಲೇ ಕೊಡೆ ಹಿಡಿದು ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರೆಸಿದರು. ಸದ್ಯ ನಗರದಲ್ಲಿ ಸುರಿಯುತ್ತಿರುವ ಜಿಟಿ-ಜಿಟಿ ಮಳೆಗೆ ವಾತಾವರಣ ಫುಲ್ ಕೂಲ್ ಕೂಲ್ ಆಗಿದ್ದು, ಇನ್ನಷ್ಟು ಮಳೆ ಸಾಧ್ಯತೆ ಇದೆ.

ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಿಷ್ಟು 

ನಗರದಲ್ಲಿ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್​ ಪ್ರತಿಕ್ರಿಯಿಸಿದ್ದು, ಇವತ್ತು ರಾಜ್ಯಾದ್ಯಂತ ಎಲ್ಲೆಡೆ ವ್ಯಾಪಕ ಮಳೆಯಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ 15 ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜಗಲಬೇಟದಲ್ಲಿ 25 ಸೆಂ.ಮೀ. ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಲೊಂಡಾದಲ್ಲಿ 9 ಸೆಂ.ಮೀ, ದಕ್ಷಿಣ ಒಳನಾಡಿನ 8 ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ. ಭಾಗಮಂಡಲ ಪ್ರದೇಶದಲ್ಲಿ 12 ಸೆಂ.ಮೀ. ಮಳೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Rains: ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್

ರಾಜ್ಯದ ಕರಾವಳಿ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ. ಹೀಗಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನಾಳೆಯವರೆಗೂ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ವಿಜಯನಗರ; ತುಂಗಾಭದ್ರ ಜಲಾಶಯದ ಹಿನ್ನೀರಿನಲ್ಲಿ ಪ್ರವಾಸಿಗರ ಹುಚ್ಚಾಟ, ವಿಡಿಯೋ ನೋಡಿ

ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಭಾರಿ ಮಳೆ ಹಿನ್ನಲೆ ನಾಳೆ ವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದರೆ, ಜುಲೈ 17, 18ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ಗುಜರಾತ್​​​​​, ಮಹಾರಾಷ್ಟ್ರ, ಕರ್ನಾಟಕ, ಕೇರಳ ತೀರದಲ್ಲಿ ಮಳೆ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:17 pm, Mon, 15 July 24

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ