ಬೆಂಗಳೂರು, ಜುಲೈ 15: ಪೂರ್ವ ಅರಬ್ಬೀ ಸಮುದ್ರ ಹಾಗೂ ಬಂಗಾಲ ಉಪಸಾಗರದಲ್ಲಿ ವಾಯುಭಾರ ಕುಸಿತ ಎಫೆಕ್ಟ್ ಹಿನ್ನಲೆ ಕರ್ನಾಟಕ ರಾಜ್ಯಾದ್ಯಂತ ಮಳೆ (Rain) ಆಗುತ್ತಿದೆ. ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (bengaluru) ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಇದೀಗ ಶಾಂತಿನಗರ, ರಿಚ್ಮಂಡ್ಟೌನ್ ಸೇರಿದಂತೆ ಹಲವೆಡೆ ಜಿಡಿರು ಮಳೆ ಶುರುವಾಗಿದೆ. ಮಧ್ಯಾಹ್ನವೇ ಪ್ರಾರಂಭವಾದ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಪರದಾಡಿದ್ದಾರೆ.
ವಿವಿಧ ಬೇಡಿಕೆಯನ್ನು ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡುತ್ತಿದ್ದ ಬಿಸಿ ಊಟ ಕಾರ್ಯಕರ್ತೆಯರಿಗೂ ಮಳೆ ಎಫೆಕ್ಟ್ ತಟ್ಟಿದೆ. ಮಳೆಯಲ್ಲೇ ಕೊಡೆ ಹಿಡಿದು ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರೆಸಿದರು. ಸದ್ಯ ನಗರದಲ್ಲಿ ಸುರಿಯುತ್ತಿರುವ ಜಿಟಿ-ಜಿಟಿ ಮಳೆಗೆ ವಾತಾವರಣ ಫುಲ್ ಕೂಲ್ ಕೂಲ್ ಆಗಿದ್ದು, ಇನ್ನಷ್ಟು ಮಳೆ ಸಾಧ್ಯತೆ ಇದೆ.
ನಗರದಲ್ಲಿ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಪ್ರತಿಕ್ರಿಯಿಸಿದ್ದು, ಇವತ್ತು ರಾಜ್ಯಾದ್ಯಂತ ಎಲ್ಲೆಡೆ ವ್ಯಾಪಕ ಮಳೆಯಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ 15 ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜಗಲಬೇಟದಲ್ಲಿ 25 ಸೆಂ.ಮೀ. ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಲೊಂಡಾದಲ್ಲಿ 9 ಸೆಂ.ಮೀ, ದಕ್ಷಿಣ ಒಳನಾಡಿನ 8 ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ. ಭಾಗಮಂಡಲ ಪ್ರದೇಶದಲ್ಲಿ 12 ಸೆಂ.ಮೀ. ಮಳೆಯಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Karnataka Rains: ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್
ರಾಜ್ಯದ ಕರಾವಳಿ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ. ಹೀಗಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನಾಳೆಯವರೆಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ವಿಜಯನಗರ; ತುಂಗಾಭದ್ರ ಜಲಾಶಯದ ಹಿನ್ನೀರಿನಲ್ಲಿ ಪ್ರವಾಸಿಗರ ಹುಚ್ಚಾಟ, ವಿಡಿಯೋ ನೋಡಿ
ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಭಾರಿ ಮಳೆ ಹಿನ್ನಲೆ ನಾಳೆ ವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದರೆ, ಜುಲೈ 17, 18ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಕೇರಳ ತೀರದಲ್ಲಿ ಮಳೆ ಆಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:17 pm, Mon, 15 July 24