Bengaluru Rain: ಬೆಂಗಳೂರು, ಮಲೆನಾಡು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ; ತಗ್ಗು ಪ್ರದೇಶಗಳಲ್ಲಿ ಹೈ ಅಲರ್ಟ್​

| Updated By: ಸುಷ್ಮಾ ಚಕ್ರೆ

Updated on: Nov 02, 2022 | 9:58 AM

Karnataka Weather Today: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿದೆ. ಬೆಂಗಳೂರು, ಮಲೆನಾಡು, ಉತ್ತರ ಒಳನಾಡು, ಕರಾವಳಿಯಲ್ಲಿ ಇಂದಿನಿಂದ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Bengaluru Rain: ಬೆಂಗಳೂರು, ಮಲೆನಾಡು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ; ತಗ್ಗು ಪ್ರದೇಶಗಳಲ್ಲಿ ಹೈ ಅಲರ್ಟ್​
ಬೆಂಗಳೂರಿನಲ್ಲಿ ಮಳೆ
Follow us on

ಬೆಂಗಳೂರು: ಮಂಗಳವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಬೆಂಗಳೂರು (Bangalore Rains) ಮತ್ತೆ ತತ್ತರಿಸಿಹೋಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Weather) ಸೇರಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ಇಂದು ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಉಂಟಾಗಿದೆ. ಇಂದು ಸಂಜೆಯ ಬಳಿಕ ಮತ್ತೆ ಮಳೆ ಶುರುವಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು – ಮಿಂಚಿನ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ತಾಪಮಾನದಲ್ಲಿಯೂ ವ್ಯತ್ಯಾಸಗಳಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ತಗ್ಗುಪ್ರದೇಶ, ರಾಜಕಾಲುವೆ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ. ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಹಿಂಗಾರು ಮಳೆ ಆರಂಭ; ನಾಳೆಯಿಂದ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ

ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ನಿನ್ನೆ ಸಾಯಂಕಾಲದಿಂದ ಬೆಂಗಳೂರಿನಲ್ಲಿ ಮಳೆ ಆರಂಭವಾಗಿದ್ದು ಇಂದಿನಿಂದ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 3ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 3 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ತಮಿಳುನಾಡಿನಲ್ಲಿ ಮುಂದಿನ 2 ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಣಿಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಇಂದು ಆರೆಂಜ್ ಅಲರ್ಟ್‌ ನೀಡಲಾಗಿದೆ. ಇಂದು ಪುದುಚೇರಿ ಮತ್ತು ಕೇರಳದ ಮಾಹೆಗೆ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ. ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ತೆಲಂಗಾಣ, ಕೊಂಕಣ, ಗೋವಾದಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ, ಆಂಧ್ರಪ್ರದೇಶದ ರಾಯಲಸೀಮಾ, ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಇನ್ನೆರಡು ದಿನಗಳ ಕಾಲ ಅಂದರೆ ನವೆಂಬರ್ 3ರವರೆಗೆ ಭಾರೀ ಮಳೆಯಾಗಲಿದೆ. ನವೆಂಬರ್ 3ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯೊಂದಿಗೆ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 am, Wed, 2 November 22