Bengaluru Rain: ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಸುರಿಯಲಿದೆ ಭಾರಿ ಮಳೆ

|

Updated on: Apr 04, 2023 | 7:24 AM

ಕಳೆದ ಮೂನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಏಪ್ರಿಲ್ 3 ರಂದು ಸೋಮವಾರ ಸಾಕಷ್ಟು ಕಡೆ ಧಾರಾಕಾರ ಮಳೆಯಾಗಿದೆ.

Bengaluru Rain: ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಸುರಿಯಲಿದೆ ಭಾರಿ ಮಳೆ
ಮಳೆ
Image Credit source: Mint
Follow us on

ಕಳೆದ ಮೂನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಏಪ್ರಿಲ್ 3 ರಂದು ಸೋಮವಾರ ಸಾಕಷ್ಟು ಕಡೆ ಧಾರಾಕಾರ ಮಳೆಯಾಗಿದೆ, ಇನ್ನೂ ಮೂರು ದಿನಗಳ ಕಾಲ ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ. ಕಲಬುರಗಿಯಲ್ಲಿ 39.4 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಹಲವೆಡೆ ಮಳೆ ಸುರಿದಿದೆ, ರಾಜಾಜಿನಗರ, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ವಿದ್ಯಾರಣ್ಯಪುರ, ಯಶವಂತಪುರ, ಕುರುಬರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್ ಸುತ್ತಮುತ್ತ ಮಳೆ ಸುರಿದಿದೆ.

ಮತ್ತಷ್ಟು ಓದಿ: Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ಕೆಆರ್ ಮಾರ್ಕೆಟ್‌, ಕಾರ್ಪೊರೇಷನ್‌ ಸೇರಿ ಹಲವೆಡೆ ತಂಪೆರೆದ ವರುಣ

ಯಶವಂತಪುರ, ಕೆ ಆರ್ ಮಾರ್ಕೆಟ್ , ಕಾರ್ಪೊರೇಷನ್ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಪರಿಣಾಮ ಧಿಢೀರ್ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿತ್ತು. ಮಳೆ ಬಿಟ್ಟು ಬಿಟ್ಟು ಬಂದಿದ್ದರಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿತ್ತು.

ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ