Bengaluru Rain: ಬೆಂಗಳೂರಿನಲ್ಲಿ ಸೆ. 25ರವರೆಗೂ ಗುಡುಗು ಸಹಿತ ಭಾರೀ ಮಳೆ; ಸಂಜೆ ಬೇಗ ಮನೆ ಸೇರಿಕೊಳ್ಳಿ!

Bangalore Weather Today | ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ ಜೋರಾಗಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿ ಹಲವೆಡೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

Bengaluru Rain: ಬೆಂಗಳೂರಿನಲ್ಲಿ ಸೆ. 25ರವರೆಗೂ ಗುಡುಗು ಸಹಿತ ಭಾರೀ ಮಳೆ; ಸಂಜೆ ಬೇಗ ಮನೆ ಸೇರಿಕೊಳ್ಳಿ!
ಬೆಂಗಳೂರಿನ ವಿಧಾನಸೌಧದೊಳಗೆ ನುಗ್ಗಿದ ಮಳೆ ನೀರು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 21, 2021 | 12:57 PM

Karnataka Ran | ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore Rain) ಒಂದು ಗಂಟೆ ಮಳೆ ಸುರಿದರೂ ಜನಜೀವನ ಅಸ್ತವ್ಯಸ್ತವಾಗಿ ಬಿಡುತ್ತದೆ. ಚರಂಡಿ ವ್ಯವಸ್ಥೆ, ರಾಜಕಾಲುವೆಗಳ ಅವ್ಯವಸ್ಥೆ, ತಗ್ಗು ಪ್ರದೇಶದಲ್ಲಿ ಮನೆಗಳನ್ನು ನಿರ್ಮಾಣ ಮಾಡಿರುವುದು ಹೀಗೆ ನಾನಾ ಕಾರಣಗಳಿಂದ ಮಳೆಗಾಲದಲ್ಲಿ ಬೆಂಗಳೂರಿಗರಿಗೆ ನರಕ ದರ್ಶನವಾಗುತ್ತಲೇ ಇರುತ್ತದೆ. ಇಂದಿನಿಂದ ಸೆ. 25ರವರೆಗೂ ಬೆಂಗಳೂರಿನಲ್ಲಿ ಮತ್ತೆ ಮಳೆ (Heavy Rain in Bengaluru) ಜೋರಾಗಲಿದ್ದು, ಇಂದಿನಿಂದ 5 ದಿನ ಗುಡುಗು- ಮಿಂಚು (Bengaluru Rains) ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಬೆಳಗ್ಗೆಯಿಂದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಬೆಂಗಳೂರಿನಲ್ಲೂ ಇಂದು ಸಂಜೆಯ ಬಳಿಕ ಮಳೆ ಶುರುವಾಗುವ ಸಾಧ್ಯತೆಯಿದ್ದು, ಸೆ. 24ರಿಂದ 2 ದಿನ ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ಸುಮಾರು 2 ವಾರಗಳಿಂದ ಬೆಂಗಳೂರಿನಲ್ಲಿ ಕಡಿಮೆಯಾಗಿದ್ದ ಮಳೆಯ ಆರ್ಭಟ ಕಳೆದ 2-3 ದಿನಗಳಿಂದ ಮತ್ತೆ ಶುರುವಾಗಿದೆ. ನಿನ್ನೆ ಕೂಡ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗಿದ್ದು, ಬನಶಂಕರಿ, ಬಸವನಗುಡಿ, ಜಯನಗರ, ಕತ್ರಿಗುಪ್ಪೆ, ವಿಧಾನಸೌಧ, ಕೆ.ಆರ್​ ರಸ್ತೆ, ಮೆಜೆಸ್ಟಿಕ್, ಶೇಷಾದ್ರಿಪುರಂ. ಮಲ್ಲೇಶ್ವರಂ, ಹೆಬ್ಬಾಳ, ರಾಜಾಜಿನಗರ, ಜೆಪಿ ನಗರ, ಕೋರಮಂಗಲ, ಆರ್​.ಆರ್ ನಗರ, ಕೆ.ಆರ್. ಮಾರ್ಕೆಟ್, ಶಿವಾಜಿನಗರ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಕೆಂಗೇರಿ ಮುಂತಾದ ಏರಿಯಾಗಳಲ್ಲಿ ಮಳೆಯಿಂದ ರಸ್ತೆಗಳು ಹೊಳೆಯಂತಾಗಿದ್ದವು. ಅತ್ತ ವಿಧಾನಸೌಧದೊಳಗೂ ನೀರು ನುಗ್ಗಿ, ಕಚೇರಿ, ವರಾಂಡಗಳಲ್ಲಿ ನೀರು ತುಂಬಿಕೊಂಡಿತ್ತು.

ಬೆಂಗಳೂರಿನಲ್ಲಿ ಇಂದಿನಿಂದ ಸೆ. 25ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸೆ. 26ರಂದು ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆಯಾಗಲಿದೆ. ಹಾಗೇ, ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC)ದ ಪ್ರಕಾರ, ಬೆಂಗಳೂರಿನಲ್ಲಿ ವಿದ್ಯಾರಣ್ಯಪುರ ಮತ್ತು ಯಲಹಂಕದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಉಳಿದಂತೆ ಕೋರಮಂಗಲ, ಹೊರಮಾವು, ದೊಡ್ಡ ಬೊಮ್ಮಸಂದ್ರ, ಕೊಡಿಗೇಹಳ್ಳಿಯಲ್ಲಿ ಕೂಡ ಮಳೆ ಹೆಚ್ಚಾಗಿದೆ. ಇಂದಿನಿಂದ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವುದರಿಂದ ಬಿಬಿಎಂಪಿಯಿಂದ ಕಂಟ್ರೋಲ್ ರೂಂ ತೆರೆಯಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಅತ್ತ ಉತ್ತರ ಭಾರತದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಗುಜರಾತ್​ನಲ್ಲಿ ಇಂದಿನಿಂದ 4 ದಿನ ಅಂದರೆ ಸೆ. 24ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಸೆ. 23ರಂದು ವಿಪರೀತ ಮಳೆಯಾಗಲಿದೆ.

ಇಂದಿನಿಂದ ಸೆಪ್ಟೆಂಬರ್ 24ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯಲಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ.

ಕರ್ನಾಟಕ ಮಾತ್ರವಲ್ಲದೆ, ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒರಿಸ್ಸಾ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಮಹಾರಾಷ್ಟ್ರ, ಗೋವಾ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಜಾರ್ಖಂಡ್, ಬಿಹಾರ, ಕೊಂಕಣ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್​ನಲ್ಲಿ ಇಂದು ಮಳೆ ಸುರಿಯಲಿದೆ.

ಇದನ್ನೂ ಓದಿ: Karnataka Weather Today : ಕರ್ನಾಟಕದಲ್ಲಿ ಇಂದು ಭಾರೀ ಮಳೆ; ಬೆಂಗಳೂರಿನಲ್ಲೂ ಇಂದು ವರುಣನ ಆರ್ಭಟ ಸಾಧ್ಯತೆ

Karnataka Weather Today | ಬೆಂಗಳೂರಲ್ಲಿ ರಾತ್ರಿಯಿಡೀ ಮಳೆ; ಮಳೆಯ ಅಬ್ಬರ ಮಂಗಳವಾರದವರೆಗೂ ಮುಂದುವರೆಯುವ ಸಂಭವ

(Bengaluru Rain Karnataka Weather Forecast Bangalore Rain with Thunderstorm till September 25 Karnataka Rain Today)

Published On - 12:54 pm, Tue, 21 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ