Bangalore Rain: ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ

Karnataka Weather Report: ಇಂದು ಬೆಳಿಗ್ಗೆಯೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ಹೊತ್ತಿಗೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ನಾಳೆಯೂ ಇದೇ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.

Bangalore Rain: ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ
ಮಳೆ (ಸಂಗ್ರಹ ಚಿತ್ರ)

Updated on: May 04, 2021 | 5:16 PM

ಬೆಂಗಳೂರು: ನಗರದಲ್ಲಿ ಇಂದು ಮಧ್ಯಾಹ್ನ ಗಾಳಿ ಸಹಿತ ಮಳೆ ಪ್ರಾರಂಭವಾಗಿದ್ದು, ಇನ್ನು ಸ್ವಲ್ಪ ಕಾಲ ಮಳೆ ಹೀಗೆ ಬೀಳುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ವಾತವರಣ ಸೃಷ್ಟಿಯಾಗಿತ್ತು. ಆದರೆ ಮಳೆಯಾಗಿರಲಿಲ್ಲ. ಇಂದು ಹವಮಾನ ವರದಿಯಂತೆ ಗುಡುಗು-ಮಿಂಚು ಸಹಿತ ಮಳೆಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ತಂಪಾದ ವಾತವರಣ ಸೃಷ್ಟಿಯಾಗಿದೆ.

ಇಂದು ಬೆಳಿಗ್ಗೆಯೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ಹೊತ್ತಿಗೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ನಾಳೆಯೂ ಇದೇ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.

ನಗರದಲ್ಲಿ ಇಂದು ಬೆಳಿಗ್ಗೆ ಸುಮಾರು 32 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿತ್ತು. ಆದರೆ ಮಧ್ಯಾಹ್ನವಾಗುತ್ತಿದ್ದಂತೆ ಮೋಡ ಕವಿಯಲು ಶುರುವಾಗಿದ್ದು, ಅದೀಗ 23 ಡಿಗ್ರಿ ಸೆಲ್ಸಿಯಸ್​ ರಷ್ಟಾಗಿದೆ. ಮಳೆ ರಾತ್ರಿವರೆಗೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ತೀರ ಪ್ರದೇಶದ ಪ್ರಭಾವದಿಂದ ಕೇರಳ, ಮಾಹೆ ಮತ್ತು ಕರ್ನಾಟಕದಲ್ಲಿ ಗಾಳಿ ಸಹಿತ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳ ಕಾಲ ಭಾರತದ ದಕ್ಷಿಣ ಪರ್ಯಾಯ ದ್ವೀಪಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಟ್ವೀಟ್ ಮಾಡಿದೆ.

ಮೇ 4 ರಿಂದ 6 ವರೆಗೆ ಕೇರಳ ಮತ್ತು ಮಾಹೆ ಪ್ರದೇಶದಲ್ಲಿ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮೇ 5 ಮತ್ತು 6ಕ್ಕೆ ಕರಾವಳಿ ಮತ್ತು ದಕ್ಷಿಣ ಒಳ ಕರ್ನಾಟಕ ಪ್ರದೇಶದಲ್ಲಿ ಕೂಡ ಮಳೆ ಮುಂದುವರಿಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಟ್ವೀಟ್ ಮೂಲಕ ತಿಳಿಸಿದೆ.

Karnataka Weather ಮೇ 6ರ ವರೆಗೆ ಕೇರಳ ಮತ್ತು ಕರ್ನಾಟಕದಲ್ಲಿ ಭಾರಿ ಮಳೆ

Bengaluru Rain: ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದಲೇ ಮಳೆ ಪ್ರಾರಂಭ; ರಾಜ್ಯದ ಹಲವೆಡೆ ವರುಣ ಸಿಂಚನದ ಸಾಧ್ಯತೆ

Published On - 4:34 pm, Tue, 4 May 21