Bengaluru Rain: ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದಲೇ ಮಳೆ ಪ್ರಾರಂಭ; ರಾಜ್ಯದ ಹಲವೆಡೆ ವರುಣ ಸಿಂಚನದ ಸಾಧ್ಯತೆ

Bangalore Rain Updates: ನಗರದಲ್ಲಿ ಇಂದು ಬೆಳಗ್ಗೆಯಿಂದಲೂ ಬಿಸಿಲು,  ಸೆಖೆಯಿತ್ತು.  ಸುಮಾರು 30 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿತ್ತು.  ಮಧ್ಯಾಹ್ನವಾಗುತ್ತಿದ್ದಂತೆ ಮೋಡ ಕವಿಯಲು ಶುರುವಾಗಿತ್ತು.

Bengaluru Rain: ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದಲೇ ಮಳೆ ಪ್ರಾರಂಭ; ರಾಜ್ಯದ ಹಲವೆಡೆ ವರುಣ ಸಿಂಚನದ ಸಾಧ್ಯತೆ
ಬೆಂಗಳೂರು ಮಳೆ (ಸಂಗ್ರಹ ಚಿತ್ರ)
Follow us
Lakshmi Hegde
|

Updated on:Apr 22, 2021 | 2:49 PM

ಬೆಂಗಳೂರು: ನಗರದಲ್ಲಿ ಇಂದು ಮಧ್ಯಾಹ್ನವೇ ಗುಡುಡು-ಗಾಳಿ ಸಹಿತ ಮಳೆ ಪ್ರಾರಂಭವಾಗಿದ್ದು, ಹದವಾಗಿ ಬೀಳುತ್ತಿದೆ. ಕಳೆದ ಎರಡು ದಿನಗಳಿಂದಲೂ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು ಸಂಜೆ ಹೊತ್ತಿಗೆ ಗುಡುಗು-ಮಿಂಚು ಸಹಿತವಾಗಿ ಬರುತ್ತಿತ್ತು. ಇಂದು ಹವಾಮಾನ ಇಲಾಖೆ ವರದಿ ಮಾಡಿದಂತೆ ಮಧ್ಯಾಹ್ನ 2ರ ನಂತರವೇ ಶುರುವಾಗಿದೆ. ಬೆಂಗಳೂರಿನ ಉತ್ತರ ಭಾಗದಲ್ಲಿ ಜೋರಾಗಿ ಮಳೆಯಾಗಿದೆ ಎಂದು ವರದಿಯಾಗಿದೆ.

ನಗರದಲ್ಲಿ ಇಂದು ಬೆಳಗ್ಗೆಯಿಂದಲೂ ಬಿಸಿಲು,  ಸೆಖೆಯಿತ್ತು.  ಸುಮಾರು 30 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿತ್ತು.  ಮಧ್ಯಾಹ್ನವಾಗುತ್ತಿದ್ದಂತೆ ಮೋಡ ಕವಿಯಲು ಶುರುವಾಗಿತ್ತು.  ಅದೀಗ 19 ಡಿಗ್ರಿಗೆ ಇಳಿದಿದೆ. ಮಳೆ ರಾತ್ರಿಯೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬಿಸಮುದ್ರದಲ್ಲಿ ಗಾಳಿ ತೀವ್ರತೆ ಹೆಚ್ಚಿದ್ದರಿಂದ ಹೀಗೆ ಅಕಾಲದಲ್ಲಿ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಕೂಡ ವರುಣ ಆರ್ಭಟ ಜೋರಾಗಿತ್ತು. ನಿನ್ನೆ ಮೆಜೆಸ್ಟಿಕ್​, ಯಲಹಂಕ, ಶಿವಾನಂದ ವೃತ್ತ ಸೇರಿ ಅನೇಕ ಪ್ರದೇಶಗಳಲ್ಲಿ ಮಳೆಯಾಗಿದೆ.  ನಾಳೆ ಕೂಡ ನಗರದಲ್ಲಿ ಇದೇ ವಾತಾವರಣ ಮುಂದುವರಿಯಲಿದ್ದು, ಸಂಜೆ 4ಗಂಟೆ ಹೊತ್ತಿಗೆ ಮಳೆ ಆರಂಭವಾಗಬಹುದು ಎನ್ನಲಾಗಿದೆ. ನಿನ್ನೆ ಉಡುಪಿಯ ಕೆಲವು ಭಾಗಗಳಲ್ಲೂ ಮಳೆಯಾಗಿತ್ತು. ಇನ್ನು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ, ಕೇರಳ ತಮಿಳುನಾಡುಗಳಲ್ಲೂ ಮಳೆಯಾಗುತ್ತಿದೆ. ಬರೀ ಬೆಂಗಳೂರು ಅಷ್ಟೇ ಅಲ್ಲದೆ, ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ  ಮುಂದಿನ ಮೂರು-ನಾಲ್ಕು ತಾಸುಗಳಲ್ಲಿ ಮಳೆ ಆಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಟ್ವಿಟರ್​ನಲ್ಲಿ ವಿಡಿಯೋಗಳು ಕಳೆದ ಮೂರುದಿನಗಳಿಂದ ಸುರಿಯುತ್ತಿರುವ ಮಳೆಯ ವಿಡಿಯೋ, ಫೋಟೋಗಳನ್ನು  ಬೆಂಗಳೂರಿಗರು ಟ್ವಿಟರ್​ನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.  ಹೀಗೊಂದು ಮಳೆ ಬೇಕಿತ್ತು, ಬೆಂಗಳೂರು ತಂಪಾಯಿತು ಎಂಬಿತ್ಯಾದಿ ಅಭಿಪ್ರಾಯಗಳನ್ನು ಹೊರಹಾಕುತ್ತಿದ್ದಾರೆ.

Rain in Bangalore pic.twitter.com/UZacStzjSO

— ವೇಣುಗೋಪಾಲ ರೆಡ್ಡಿ-Venugopala Reddy (@Venureddy67) April 22, 2021

Bengaluru Rain light to moderate rain lashes many parts of Bangalore city

Published On - 2:43 pm, Thu, 22 April 21

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM