Bengaluru Rain: ಗುಡ್​ನ್ಯೂಸ್, ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ

Bangalore Rains, Weather Report: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತು ಬೆಂಗಳೂರಿನ ಕೆಲವೆಡೆ ಹಗುರ ಮಳೆ ಸಾಧ್ಯತೆ ಇದ್ದು, ಜೊತೆಗೆ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

Bengaluru Rain: ಗುಡ್​ನ್ಯೂಸ್, ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ
ಗುಡ್​ನ್ಯೂಸ್, ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ
Follow us
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on:May 06, 2024 | 6:13 PM

ಬೆಂಗಳೂರು, ಮೇ 06: ಕಳೆದ ಕೆಲ ದಿನಗಳ ಹಿಂದೆ ವರ್ಷದ ಮೊದಲ ಮಳೆ ಸಿಲಿಕಾನ್ ಸಿಟಿಯಲ್ಲಿ  ಆರ್ಭಟಿಸುವ ಮೂಲಕ ತಂಪೆರೆದಿದ್ದ. ಹೀಗಾಗಿ ಜನರಿಗೆ ಮಳೆರಾಯ (Bengaluru Rain) ಹರ್ಷ ತಂದಿದ್ದ. ಇದೀಗ ಮತ್ತೊಂದು ಗುಡ್​ನ್ಯೂಸ್​ ಬಂದಿದೆ. ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological Department) ನೀಡಿದೆ. ಇವತ್ತು ಬೆಂಗಳೂರಿನ ಕೆಲವೆಡೆ ಹಗುರ ಮಳೆ ಸಾಧ್ಯತೆ ಇದ್ದು, ಜೊತೆಗೆ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಮಳೆ ಮುನ್ಸೂಚನೆ ಇದೆ.

IMD ಪ್ರಕಾರ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 24.0 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 38.0 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಲಘು ಮಳೆಯಾಗುವ ಸಾಧ್ಯತೆ ಇದೆ. ಮೇ 7 ರಂದು ಕೂಡ ಬೆಂಗಳೂರಲ್ಲಿ ಮಳೆ ಹೆಚ್ಚಳವಾಗುವ ಸಂಭವವಿದೆ.

ಇದನ್ನೂ ಓದಿ: Rain Alert: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು ಹೊರೆತುಪಡಿಸಿ 8 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಮೇತ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಹೊಸಕೋಟೆ, ಮೈಸೂರು, ಹುಣಸೂರು, ಕೊಡಗು, ಕೆ.ಆರ್​ ನಗರ, ಹಾಸನ, ಮಂಡ್ಯ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Rain Updates: ಕರ್ನಾಟಕದ ಹಲವೆಡೆ ಭಾರೀ ಮಳೆ: ಸಿಡಿಲಿಗೆ ಹೊತ್ತಿ ಉರಿದ ಪ್ರವಾಸಿತಾಣದ ಗಿರಿಜನ ಮನೆ

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಾಮುತ್ತಾ ಈಗಾಗಲೇ ತುಂತುರು ಮಳೆ ಶುರುವಾಗಿದೆ. ತುಂತುರು ‌ಮಳೆಯಿಂದ ಕೆಂಪೇಗೌಡ ಏರ್ಪೋರ್ಟ್ ವಾತಾವರಣ ತಂಪಾಗಿದೆ. ಸುಡು ಬಿಸಿಲಿಂದ ಕೆಂಗೆಟ್ಟಿದ್ದ ಏರ್ಪೋಟ್ ಪ್ರಯಾಣಿಕರಿಗೆ ಮಳೆರಾಯ ತಂಪೆರೆದಿದ್ದಾನೆ. ಮಳೆ ಬರುತ್ತಿದ್ದಂತೆ ಮೊಬೈಲ್​ನಲ್ಲಿ ಮಳೆಹನಿಗಳ ಸೆರೆ ಹಿಡಿಯುವಲ್ಲಿ ಪ್ರಯಾಣಿಕರು ಬಿಜಿಯಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ಸುತ್ತಮುತ್ತ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಚಂದಾಪುರ ಜಿಗಣಿ ಸುತ್ತಮುತ್ತ ಮಳೆ ಆಗಿದ್ದು, ಬಿಸಿಲ ಬೇಗೆಗೆ ಕೆಂಡವಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ಕೆಲವು ಕಡೆ ಬಿರುಗಾಳಿ ಸಹಿತ ವಣಕನಹಳ್ಳಿ, ಸೋಲೂರು ಗೊಮ್ಮಾಳಾಪುರ, ಭಾಗದಲ್ಲಿ ಆಲಿಕಲ್ಲು ಮಳೆ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:38 pm, Mon, 6 May 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ