Bangaluru Rain: ಜೂನ್‌ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮೂನ್ಸುಚನೆ

ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ. ಇಂದಿನಿಂದ ಜೂನ್‌ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್‌ ಹೇಳಿದ್ದಾರೆ. ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು, ಅಲರ್ಟ್‌ ಘೋಷಿಸಲಾಗಿದೆ.

Bangaluru Rain: ಜೂನ್‌ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮೂನ್ಸುಚನೆ
ಜೂನ್‌ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮೂನ್ಸುಚನೆ
Follow us
|

Updated on:Jun 08, 2024 | 11:01 PM

ಬೆಂಗಳೂರು, ಜೂನ್​ 08: ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆ (Rain) ಯಾಗಿದೆ. ಇದರ ಪರಿಣಾಮವಾಗಿ ಜೂನ್​ 11ರವರೆಗೆ ಗುಡುಗು, ಮಿಂಚು ಸಹಿತ ರಾಜ್ಯದಲ್ಲಿ ಮಳೆಯಾಗಲಿದೆ. ಜೊತೆಗೆ ಬೆಂಗಳೂರಿನಲ್ಲಿ (Bangaluru) ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ. ಈ ಕುರಿತಾಗಿ ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್​ ಪ್ರತಿಕ್ರಿಯಿಸಿದ್ದು, ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಎಲ್ಲೆಲ್ಲಿ ಎಷ್ಟೇಷ್ಟು ಮಳೆ 

ಉತ್ತರ ಕನ್ನಡ ಜಿಲ್ಲೆಯಲ್ಲಿ 23 ಸೆಂ.ಮೀ, ಕಾರವಾರ 22 ಸೆಂ.ಮೀ, ಗೋಕರ್ಣ 20 ಸೆಂ. ಮೀ, ಕುಮಟಾ 20 ಸೆಂ.ಮೀ ಮಳೆಯಾಗಿದೆ. ಉತ್ತರ ಕರ್ನಾಟಕದಲ್ಲಿ 3.1 ರಿಂದ 7.6 ಕಿ.ಮೀ ಎತ್ತರದಲ್ಲಿ ಸುಳಿಗಾಳಿ ಇದ್ದು, ದಿನಾಂಕ 11ರವರೆಗೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: Karnataka Rain: ಜೂನ್ 13ರ ವರೆಗೂ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಉತ್ತರ ಕನ್ನಡ, ದಕ್ಷಿಣ ಕನ್ನಡ, ಕಲಬುರಗಿ, ಉಡುಪಿಯಲ್ಲಿ ಅತ್ಯಂತ ಭಾರಿ ಮಳೆ ಸಾಧ್ಯತೆ ಇದ್ದು, ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಾಪುರ, ಬಾಗಲಕೋಟೆ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಇಂದಿನಿಂದ 11ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ವಿಜಯಪುರದಲ್ಲಿ ಮುಂದುವರೆದ ಮಳೆಯ ಅಬ್ಬರ

ವಿಜಯಪುರ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮೊನ್ನೆ ದಾಖಲೆ ಪ್ರಮಾಣದಲ್ಲಿ ಒಂದೇ ದಿನ 72.8 ಮಿಲಿ ಮೀಟರ್ ಮಳೆಯಾಗಿತ್ತು. ಜೊತೆಗೆ ಹತ್ತಾರು ಆವಾಂತರಗಳು ನಡೆದಿದ್ದವು. ತೆಗ್ಗು ಪ್ರದೇಶದ ಮನೆಗಳಲ್ಲಿ ನೀರು ನುಗ್ಗಿ ಜನರು ಪಡಬಾರದ ಯಾತನೆ ಪಟ್ಟಿದ್ದರು. ನಿನ್ನೆ ಒಂದು ದಿನ ವಿಶ್ರಾಂತಿ ಪಡೆದಿದ್ದ ಮಳೆ ಇಂದು ಮಧ್ಯಾಹ್ನ ಪ್ರತ್ಯಕ್ಷವಾಗಿತ್ತು. ಸತತ ಅರ್ಧ ಗಂಟೆಗೂ ಆಧಿಕ ಕಾಲ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರಿ ಮಳೆಗೆ ಕುಸಿದ ರಸ್ತೆ; ಸವಾರರಿಗೆ ತಟ್ಟಿದ ಟ್ರಾಫಿಕ್​ ಬಿಸಿ

ನಗರದ ಬಸವನಬಾಗೇವಾಡಿ ತಾಲೂಕು, ವಿಜಯಪುರ ತಾಲೂಕು ತಾಳಿಕೋಟೆ ತಾಲೂಕು ಮುದ್ದೇಬಿಹಾಳ ತಾಲೂಕಿನಲ್ಲಿ ಉತ್ತಮ ವರ್ಷಧಾರೆಯಾಗಿದೆ. ರಸ್ತೆಗಳೆಲ್ಲಾ ಜಲಾವೃತವಾಗಿದ್ದು ವಾಹನ ಸವಾರರು ಸುರಿವ ಮಳೆಯಲ್ಲೇ ಸಂಚಾರ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದಲ್ಲಿ ಭಾರೀ ಮಳೆ ಆಗಿದೆ. ಕಳೆದ ಅರ್ಧ ಗಂಟೆಯಿಂದ ನಿರಂತರ ಮಳೆ ಸುರಿದಿದೆ. ಧಾರಾಕಾರ ಮಳೆಗೆ ರಸ್ತೆ ಜಲಾವೃತವಾಗಿದ್ದು ಜನರು ಹಾಗೂ ವಾಹನ ಸವಾರರ ಪರದಾಡಿದ್ದಾರೆ.  ಹುಬ್ಬಳ್ಳಿಯಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಪುನಾರಂಭವಾಗಿದೆ. ಹೀಗಾಗಿ ವಾಣಿಜ್ಯ ನಗರಿ ಹುಬ್ಬಳ್ಳಿ ಮಲೆನಾಡಿನಂತಾಗಿದೆ.

ವರದಿ: ಮುತ್ತು

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:45 pm, Sat, 8 June 24

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್