Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain Today: ಬೆಂಗಳೂರಿನಲ್ಲಿ ತಂಪೆರೆದ ವರುಣ, ನಗರದ ವಿವಿಧೆಡೆ ಆಲಿಕಲ್ಲು ಮಳೆ

ಬೆಂಗಳೂರಿನಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇದೀಗ ನಗರದ ಹಲವೆಡೆ ಆಲಿಕಲ್ಲು ಜೊತೆಗೆ ಮಳೆರಾಯ ಆರ್ಭಟಿಸಿದ್ದಾನೆ. ಬರ ಆವರಿಸಿದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿದೆ. ಆಲಿಕಲ್ಲು ಮಳೆ ಹಿನ್ನಲೆ ನಗರದಲ್ಲಿ ಕೆಲ ಅವಾಂತರಗಳು ಕೂಡ ಸಂಭವಿಸಿವೆ. ಅರ್ಧಗಂಟೆ ಬಂದ ಮಳೆಗೆ ನಗರದಲ್ಲಿ 20 ಕ್ಕೂ ಹೆಚ್ಚು ಭಾಗದಲ್ಲಿ ಮರಗಳು ಧರೆಗುರುಳಿವೆ.

Bengaluru Rain Today: ಬೆಂಗಳೂರಿನಲ್ಲಿ ತಂಪೆರೆದ ವರುಣ, ನಗರದ ವಿವಿಧೆಡೆ ಆಲಿಕಲ್ಲು ಮಳೆ
ಬೆಂಗಳೂರಿನಲ್ಲಿ ತಂಪೆರೆದ ವರುಣ, ನಗರದ ವಿವಿಧೆಡೆ ಆಲಿಕಲ್ಲು ಮಳೆ
Follow us
Jagadish PB
| Updated By: ಗಂಗಾಧರ​ ಬ. ಸಾಬೋಜಿ

Updated on:May 06, 2024 | 7:26 PM

ಬೆಂಗಳೂರು, ಮೇ 06: ನಗರದ ಹಲವೆಡೆ ಬಿರುಗಾಳಿ ಸಮೇತ ಮಳೆ (Rain) ಶುರುವಾಗಿದೆ. ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇದೀಗ ನಗರದ ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ ಸೇರಿ ಹಲವೆಡೆ ಆಲಿಕಲ್ಲು (HailStorms) ಜೊತೆಗೆ ಮಳೆರಾಯ ಆರ್ಭಟಿಸಿದ್ದಾನೆ. ಬರ ಆವರಿಸಿದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿದೆ. ಇಂದು ಮಳೆ ಜೊತೆಗೆ ಗಾಳಿಯ ಪ್ರಮಾಣ ಕೂಡ ಜಾಸ್ತಿ ಇದೆ. ಬಿಸಿಲಿನಿಂದ ಬಸವಳಿದಿದ್ದ ರಾಜಧಾನಿಗೆ ವರುಣ ಮತ್ತೊಮ್ಮೆ ಎಂಟ್ರಿ ಕೊಡುವ ಮೂಲಕ ತಂಪೆರೆದಿದ್ದಾನೆ.

ಇಂದು ಸುರಿದ ಮಳೆಗೆ ರಸ್ತೆಗಳು ಕೆರೆಯಂತಾಗಿವೆ. ಮಂತ್ರಿಮಾಲ್ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ನೀರು ಹೋಗಲು ಸ್ಥಳವಕಾಶ ಇಲ್ಲದೆ ಸುಮಾರು 2 ಅಡಿಯಷ್ಟು ತುಂಬಿಕೊಂಡಿದೆ. ಸದ್ಯ ಮಂತ್ರಿಮಾಲ್ ಬಳಿ ಟ್ರಾಫಿಕ್ ಜಾಮ್​ ಆಗಿದ್ದು, ವಾಹನ ಸವಾರರಿಗೆ ಸಂಚರಿಸಲು ಸಮಸ್ಯೆ ಉಂಟಾಗಿದೆ.

ಎಲ್ಲೆಲ್ಲಿ ಮಳೆ?

ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ ಸುತ್ತಮುತ್ತ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ರಾಜಾಜಿನಗರ, ಮೆಜೆಸ್ಟಿಕ್, ರೇಸ್ ಕೋರ್ಸ್, ಕಾರ್ಪೋರೇಷನ್, ಮಹಾಲಕ್ಷ್ಮಿಲೇಔಟ್, ಬಸವೇಶ್ವರನಗರ, ಸದಾಶಿವನಗರ, ಬ್ಯಾಟರಾಯನಪುರ ಮತ್ತು ಮತ್ತಿಕೆರೆ, ಪದ್ಮನಾಭನಗರ, ಬನಶಂಕರಿ ರಡನೇ ‌ಹಂತ, ಕಾಮಾಕ್ಯ, ಕತ್ರಗುಪ್ಪೆ, ಕದರೇನ ಹಳ್ಳಿ, ಚಿಕ್ಕಲು ಸಂದ್ರ‌ ಭಾಗದಲ್ಲಿ‌ ಜೋರು ಗಾಳಿ‌ ಸಹಿತ ವರುಣ ದೇವ ಅಬ್ಬರಿಸುತ್ತಿದ್ದಾನೆ.

20 ಕ್ಕೂ ಹೆಚ್ಚು ಭಾಗದಲ್ಲಿ ಧರೆಗುರುಳಿದ ಮರಗಳು 

ಆಲಿಕಲ್ಲು ಮಳೆ ಹಿನ್ನಲೆ ನಗರದಲ್ಲಿ ಕೆಲ ಅವಾಂತರಗಳು ಕೂಡ ಸಂಭವಿಸಿವೆ. ಅರ್ಧಗಂಟೆ ಬಂದ ಮಳೆಗೆ ನಗರದಲ್ಲಿ 20 ಕ್ಕೂ ಹೆಚ್ಚು ಭಾಗದಲ್ಲಿ ಮರಗಳು ಧರೆಗುರುಳಿವೆ. ಜಯನಗರ, ಬಸವನಗುಡಿ, ಮಲ್ಲೆಶ್ವರಂ, ಕೋರಮಂಗಲ, ಬಿಟಿಎಂ ಲೇಔಟ್, ಯಶವಂತರಪುರ ಸೇರದಿಂತೆ ಹಲವೆಡೆ ಮರಗಳು ಧರೆಗೆ ಉರುಳಿದ್ದು  ದೂರು ಬಂದ ನಗರಗಳಲ್ಲಿ ಬಿಬಿಎಂಪಿ ಸಿಬ್ಬಂದಿಗಳು ಮರಗಳನ್ನು ತೆರೆವುಗೊಳಿಸುತ್ತಿರುವುದಾಗಿ ಬಿಬಿಎಂಪಿ ಕಂಟ್ರೀಲ್ ರೂಮ್ ಇಂದ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: Bengaluru Rain: ಗುಡ್​ನ್ಯೂಸ್, ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ

ಮಳೆಯಿಂದಾಗಿ ಹೊಸೂರು ಬೆಂಗಳೂರು ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್​​ನಲ್ಲಿ ಸಿಲುಕಿ ಆಂಬುಲೆನ್ಸ್ ಪರದಾಡಿದೆ. ಬೊಮ್ಮಸಂದ್ರದಿಂದ ಅತ್ತಿಬೆಲೆಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಕಿಲೋಮೀಟರ್ ಕಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಚಂದಾಪುರ ಬೊಮ್ಮಸಂದ್ರ ಹಳೆ ಚಂದಾಪುರ ರಸ್ತೆಯಲ್ಲಿ ಸಾಕಷ್ಟು ವಾಹನಗಳು ನಿಂತಿವೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:01 pm, Mon, 6 May 24

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ