Bengaluru Rain Today: ಬೆಂಗಳೂರಿನ ಮೆಜೆಸ್ಟಿಕ್, ರಾಜಾಜಿನಗರ ಸೇರಿ ಹಲವೆಡೆ ಮಳೆಯ ಆರ್ಭಟ

Bangalore Rains Weather Forecast Today: ಬಿರು ಬಿಸಿಲಿಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಇಂದೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ಇದೀಗ ನಗರದ ಹಲವು ಏರಿಯಾಗಳಲ್ಲಿ ಮಳೆ ಶುರುವಾಗಿದ್ದು, ಇನ್ನು ಕೆಲವೆಡೆ ಭಾರೀ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಿಡಿಲು ಜೋರಾಗಿದೆ.

Bengaluru Rain Today: ಬೆಂಗಳೂರಿನ ಮೆಜೆಸ್ಟಿಕ್, ರಾಜಾಜಿನಗರ ಸೇರಿ ಹಲವೆಡೆ ಮಳೆಯ ಆರ್ಭಟ
ಬೆಂಗಳೂರಿನ ಮೆಜೆಸ್ಟಿಕ್, ರಾಜಾಜಿನಗರ ಸೇರಿ ಹಲವೆಡೆ ಮಳೆಯ ಆರ್ಭಟ
Edited By:

Updated on: May 03, 2024 | 3:08 PM

ಬೆಂಗಳೂರು, ಮೇ 03: ಬಿಸಿ ತಾಪಮಾನದಿಂದ ಕಂಗಾಲಾಗಿದ್ದ ಸಿಲಿಕಾನ್​ ಸಿಟಿ ಜನರಿಗೆ ನಿನ್ನೆ ಮಳೆರಾಯನ ಸಿಂಚನವಾಗಿದೆ. ಆ ಮೂಲಕ ಸಿಟಿ ಜನರು ಮೊದಲ ಮಳೆಯನ್ನು ಸಂಭ್ರಮಿಸಿದ್ದಾರೆ. ನಗರದ ಹಲವೆಡೆ ನಿನ್ನೆ ಜೋರು ಮಳೆ (Rain) ಆಗಿತ್ತು. ಇಂದು ಕೂಡ ನಗರದೆಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಇದೀಗ ಗುಡುಗು, ಮಿಂಚಿ ಸಹಿತ ಮಳೆ ಸುರಿಯುತ್ತಿದೆ. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್ ಸೇರಿದಂತೆ ಕೆ.ಆರ್‌ಪುರಂ ವೈಟ್ ಫಿಲ್ಡ್, ಬೆಂಗಳೂರು ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆ ಮಳೆ ಸುರಿಯುತ್ತಿದೆ.

ಬಿರು ಬಿಸಿಲಿಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಇಂದೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ಇದೀಗ ನಗರದ ಹಲವು ಏರಿಯಾಗಳಲ್ಲಿ ಮಳೆ ಶುರುವಾಗಿದ್ದು, ಇನ್ನು ಕೆಲವೆಡೆ ಭಾರೀ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಿಡಿಲು ಜೋರಾಗಿದೆ. ಕಪ್ಪು ಮೋಡ ನೋಡುತ್ತಿದ್ದರೆ ಯಾವುದೇ ಸಂದರ್ಭದಲ್ಲೂ ಭಾರೀ ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಇದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕು.

ಇದನ್ನೂ ಓದಿ: Bangalore Rains Today: ಬೆಂಗಳೂರಿನಲ್ಲಿ ಇಂದು ಮಳೆಯಾಗುತ್ತಾ? ಹವಾಮಾನ ಮುನ್ಸೂಚನೆ ಇಲ್ಲಿದೆ

ನಿನ್ನೆ ಹಾಗೂ ಇಂದು ನಗರದಲ್ಲಿ ಗರಿಷ್ಠ 38 ಉಷ್ಣಾಂಶ ದಾಖಲಾಗಿದೆ. ಬೆಳಿಗ್ಗೆಯಿಂದ ಬಿಸಿ ಹಾಗೂ ಆರ್ದ್ರ ವಾತಾವರಣವಿತ್ತು. ಇದೀಗ ಬಿಸಿಲಿನ ಬೇಗೆಯಿಂದ ಬೇಸತ್ತ ಸಿಟಿ ಮಂದಿಗೆ ವರುಣ ತಂಪೆರೆದಿದ್ದಾನೆ. ಮಳೆ ಹಿನ್ನಲೆ ಹಾಟ್ ಸಿಟಿ ಕೂಲ್ ಕೂಲ್ ಆಗಿದೆ. ಇನ್ನು ಮಳೆ ಹಿನ್ನಲೆ ಉಷ್ಣಾಂಶದಲ್ಲಿ ಇಳಿಕೆ ಆಗಿದೆ.

ಇದನ್ನೂ ಓದಿ: ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿಗೆ ಕೊನೆಗೂ ತಂಪೆರೆದ ಮಳೆರಾಯ

ಮಳೆ ಹಿನ್ನಲೆ ಪ್ಯಾಲೇಸ್ ರಸ್ತೆ ಅಂಡರ್ ಪಾಸ್​​ಗಳಲ್ಲಿ ಜನರು ಆಸರೆ ಪಡೆದುಕೊಂಡಿದ್ದಾರೆ. ಅಂಡರ್ ಪಾಸ್ ಗಳಲ್ಲಿ ವಾಹನಗಳು ನಿಂತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ವಸಂತನಗರ ಸುತ್ತಮುತ್ತ ಕೂಡ ಜೋರು ಮಳೆ ಆಗುತ್ತಿದ್ದು, ನಿನ್ನೆಗಿಂತ ಇಂದು ಜೋರಾಗಿದೆ. ಜಯನಗರ, ಬಸವನಗುಡಿ, ಸೌತ್ ಎಂಡ್ ಸರ್ಕಲ್ ಬಳಿಯೂ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ.

ಏಪ್ರಿಲ್ ತಿಂಗಳಲ್ಲಿ ಬಾರದ ಮಳೆ

ಏಪ್ರಿಲ್​ ತಿಂಗಳಲ್ಲಿ 62 ಮೀ ಮೀ ಮಳೆ ಆಗಬೇಕಿತ್ತು. ಆದರೆ ಶೂನ್ಯ ಮಳೆ ದಾಖಲಾಗಿದೆ. 4 ದಶಕಗಳಲ್ಲಿ ಬೆಂಗಳೂರಿನಲ್ಲಿ ಏಪ್ರಿಲ್​​ ತಿಂಗಳಲ್ಲಿ ಶೂನ್ಯ ಮಳೆ ಆಗಿದೆ. ಮೇ ತಿಂಗಳ ಮೊದಲ ವಾರದಲ್ಲೇ ವರುಣನ ಅಬ್ಬರ ಶುರುವಾಗಿದೆ. ಕಳೆದ ಅರ್ಧ ಗಂಟೆಗೂ ಅಧಿಕ ಕಾಲ ಮಳೆ ಸುರಿಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಹಗುರ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿತ್ತು. ಆದರೆ ಹವಾಮಾನ ಇಲಾಖೆ ನಿರೀಕ್ಷೆಗೂ ಮೀರಿ ನಗರದಲ್ಲಿ ಮಳೆ ಸುರಿಯುತ್ತಿದೆ. ಮೇ 6 ಹಾಗೂ 7 ರಂದು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:38 pm, Fri, 3 May 24

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us