Bengaluru Rains: ಮೆಜೆಸ್ಟಿಕ್ ಸೇರಿದಂತೆ ಬೆಂಗಳೂರಿನ ಬಹುತೇಕ ಕಡೆ ಬೆಳಗ್ಗೆಯೇ ಭಾರಿ ಮಳೆ

Bangalore Weather forecast; ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ವರುಣ ತಂಪೆರೆದಿದ್ದಾನೆ. ಮೆಜೆಸ್ಟಿಕ್, ಜಯನಗರ, ಬನಶಂಕರಿ ಸೇರಿದಂತೆ ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಬೆಳಗ್ಗೆ ಭಾರಿ ಮಳೆ ಸುರಿಯಿತು. ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Bengaluru Rains: ಮೆಜೆಸ್ಟಿಕ್ ಸೇರಿದಂತೆ ಬೆಂಗಳೂರಿನ ಬಹುತೇಕ ಕಡೆ ಬೆಳಗ್ಗೆಯೇ ಭಾರಿ ಮಳೆ
ಬೆಂಗಳೂರಿನ ಕಾರ್ಪೊರೇಷನ್ ವೃತ್ತದಲ್ಲಿ ಮಳೆಯಾಯಿತು
Follow us
Ganapathi Sharma
|

Updated on:May 17, 2024 | 7:17 AM

ಬೆಂಗಳೂರು, ಮೇ 17: ಮೆಜೆಸ್ಟಿಕ್, ಕೆಆರ್ ಮಾರ್ಕೆಟ್​, ಶಿವಾಜಿನಗರ, ವಿಧಾನಸೌಧ ಪ್ರದೇಶ ಸೇರಿದಂತೆ ಬೆಂಗಳೂರು (Bengaluru) ನಗರದ ಬಹುತೇಕ ಕಡೆಗಳಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆಯೇ (Bangalore Rains) ಮಳೆಯಾಗಿದೆ. ರಾಮಕೃಷ್ಣ ಆಶ್ರಮ, ಜೆಸಿ ರಸ್ತೆ, ನ್ಯಾಷನಲ್ ಕಾಲೇಜು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದು ವಾಹನ ಸವಾರರ ಸಂಚಾರಕ್ಕೆ ತೊಡಕು ಉಂಟಾಯಿತು. ನ್ಯಾಷನಲ್ ಕಾಲೇಜು ಹಾಗೂ ಲಾಲ್​ ಬಾಗ್ ಮಧ್ಯೆ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು.

ಬೆಂಗಳೂರಿನ ಎಲ್ಲೆಲ್ಲಿ ಮಳೆ?

ಶಾಂತಿನಗರ, ಕೋರಮಂಗಲ, ರಿಚ್ಮಂಡ್​ ಸರ್ಕಲ್​​, ಕಾರ್ಪೊರೇಷನ್​, ಕೆಆರ್ ಮಾರ್ಕೆಟ್​, ಮೆಜೆಸ್ಟಿಕ್, ಶಿವಾಜಿನಗರ, ವಿಧಾನಸೌಧ, ವಸಂತನಗರ, ಎಂಜಿ ರಸ್ತೆ, ಕಬ್ಬನ್​ಪಾರ್ಕ್, ಟ್ಯಾನಿರೋಡ್, ರಾಮಕೃಷ್ಣ ಆಶ್ರಮ, ಬಸವನಗುಡಿ, ಗಿರಿನಗರ, ಶ್ರೀನಿವಾಸ ನಗರ, ಕತ್ರಿಗುಪ್ಪೆ, ಜಯನಗರ, ಬನಶಂಕರಿ ಸೇರಿದಂತೆ ಹಲವೆಡೆ ಮಳೆ ಸುರಿಯಿತು.

ಬೆಳಗ್ಗೆ 5 ಗಂಟೆಯಿಂದಲೇ ಕೆಲವೆಡೆ ಸಾಧಾರಣ ಮಳೆಯಾದರೆ ಇನ್ನು ಕೆಲವೆಡೆ ಧಾರಾಕಾರವಾಗಿ ಮಳೆ ಸುರಿಯಿತು.

ಮೂರು ದಿನ ಭಾರಿ ಮಳೆ ಮುನ್ಸೂಚನೆ

ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೇ 19ರ ನಂತರ 3 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು ಮತ್ತು ಬೆಂಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮೇ 31ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮುಂಗಾರು ಮಳೆ ಮೇ 31ರಂದು ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಡಿಕೆಯಂತೆ ಜೂನ್ 1ರಂದು ಮುಂಗಾರು ಮಳೆ ಕೇರಳ ಪ್ರವೇಶಿಸುತ್ತದೆ. ಆದರೆ ಈ ಬಾರಿ 1 ದಿನ ಮುನ್ನವೇ ಮುಂಗಾರು ಮಾರುತ ಆಗಮನವಾಗಲಿದೆ. ಕರ್ನಾಟಕ ಕರಾವಳಿ ಭಾಗಕ್ಕೆ ಜೂನ್ 2 ಅಥವಾ 3ಕ್ಕೆ ಮುಂಗಾರು ಮಾರುತಗಳು ಆಗಮನವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಉತ್ತರ ಭಾರತಕ್ಕೆ ಶಾಖದ ಅಲೆಯ ಅಲರ್ಟ್; ಮೇ 22ರವರೆಗೆ ದಕ್ಷಿಣ ಭಾರತದಲ್ಲಿ ಭಾರೀ ಮಳೆ

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 18ರ ನಂತರ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ‘ಆರೆಂಜ್’ ಮತ್ತು ‘ಯೆಲ್ಲೋ’ ಅಲರ್ಟ್ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:03 am, Fri, 17 May 24

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ