ಬೆಂಗಳೂರಿನಲ್ಲಿ ವರುಣನ ಅಬ್ಬರ: ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಟ

ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಎಲ್ಲೆಡೆ ಮೋಡ ಕವಿದ ವಾತಾವರಣ ಇತ್ತು. ಆದರೆ ಇಂದು ನಗದೆಲ್ಲೆಡೆ ಮಧ್ಯಾಹ್ನದ ಬಳಿಕ ಮಳೆರಾಯ ಎಂಟ್ರಿಕೊಟ್ಟಿದ್ದಾನೆ. ಬಂಗಾಳಕೊಲ್ಲಿ, ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಿಲಿಕಾನ್​ ಸಿಟಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಭಾರಿ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು ಸವಾರರ ಪರದಾಡಿದ್ದಾರೆ.

ಬೆಂಗಳೂರಿನಲ್ಲಿ ವರುಣನ ಅಬ್ಬರ: ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಟ
ಬೆಂಗಳೂರಿನಲ್ಲಿ ವರುಣನ ಅಬ್ಬರ: ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಟ
Follow us
ಶಾಂತಮೂರ್ತಿ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 29, 2024 | 4:20 PM

ಬೆಂಗಳೂರು, ಆಗಸ್ಟ್​ 29: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಎಫೆಕ್ಟ್ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ (rain) ಆರ್ಭಟ ಶುರುವಾಗಿದೆ. ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಕೋರಮಂಗಲ, ಆಡುಗೋಡಿ, ಮಡಿವಾಳ, ಬನ್ನೇರುಘಟ್ಟ ರಸ್ತೆ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ. ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ.

ಮಧ್ಯಾಹ್ನದ ಬಳಿಕ ಮಳೆರಾಯ ಎಂಟ್ರಿಕೊಟ್ಟ ಹಿನ್ನೆಲೆ ಮೆಜೆಸ್ಟಿಕ್, ಕೆಆರ್ ಸರ್ಕಲ್, ವಿಧಾನ ಸೌಧ ಸುತ್ತಮುತ್ತ ಬಾರೀ ಟ್ರಾಫಿಕ್ ಜಾಮ್​ ಉಂಟಾಗಿದೆ. ಜಾಮ್​ನಲ್ಲಿ ಸಿಲುಕಿ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಇನ್ನು ಮಳೆಯಿಂದ ರಕ್ಷಣೆ ಪಡೆಯಲು ಜನರು ಫ್ಲೈಓವರ್ ಕೆಳಗೆ ನಿಂತ್ತುಕೊಂಡಿದ್ದಾರೆ. ಮಳೆ ಆರ್ಭಟಕ್ಕೆ ರಸ್ತೆಗಳು ಕೆರೆಯಂತಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕೂಡ ಬಿರುಗಾಳಿ ಸಹಿತ ಮಳೆ ಅಬ್ಬರಿಸಿದೆ.

ಇದನ್ನೂ ಓದಿ: ಟ್ರಫ್​ ಎಫೆಕ್ಟ್​​: ಬೆಂಗಳೂರಲ್ಲಿ ಅ.1ರವರೆಗೂ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ವಿಲ್ಸ‌ನ್ ಗಾರ್ಡ್‌ನನ ಸಿದ್ದಯ್ಯ ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ‌ ಟ್ರಾಫಿಕ್‌ ಜಾಮ್ ಆಗಿದೆ. ಮತ್ತೊಂದೆಡೆ ನೀರು ನಿಂತ ಸ್ಥಳದಲ್ಲಿ ಗುಂಡಿ ಕಾಣದೇ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿದೆ. ಚರಂಡಿ ಕ್ಲೀನ್ ಮಾಡದ ಹಿನ್ನಲೆ ರಸ್ತೆ ಮೇಲೆ‌ ನೀರು ನಿಂತ್ತುಕೊಂಡಿದೆ. ಆದರೆ ಮಳೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಪಾಲಿಕೆ ಹೇಳುತ್ತದೆ. ಆದರೆ ಇದೀಗ ಪಾಲಿಕೆ ನಿರ್ಲಕ್ಷಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ.

ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಎಲ್ಲೆಡೆ ಮೋಡ ಕವಿದ ವಾತಾವರಣ ಇತ್ತು. ಆದರೆ ಇಂದು ನಗದೆಲ್ಲೆಡೆ ಮಧ್ಯಾಹ್ನದ ಬಳಿಕ ಮಳೆರಾಯ ಎಂಟ್ರಿಕೊಟ್ಟಿದ್ದಾನೆ. ಅ.1ರ ವರೆಗೂ ನಗರದಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಎಂದು ನಿನ್ನೆ ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿತ್ತು.

ಇದನ್ನೂ ಓದಿ: Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​

ಇನ್ನು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೂಡ ಮಳೆ ಸುರಿಯುತ್ತಿದ್ದು, ಆ.30ರ ವರೆಗೆ ಆರೆಂಜ್​ ಅಲರ್ಟ್​ ಮತ್ತು ಕೊಡಗು, ಬೆಳಗಾವಿ ಜಿಲ್ಲೆಗಳಿಗೆ ಆ.30ರ ವರೆಗೆ ಯಲ್ಲೋ ಅಲರ್ಟ್​ ಘೋಷಿಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:54 pm, Thu, 29 August 24

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ