Bengaluru Rains: ಸಿಲಿಕಾನ್​ ಸಿಟಿಗೆ ದಿಢೀರ್ ಎಂಟ್ರಿ ಕೊಟ್ಟ ವರುಣ: ರಿಚ್​ಮಂಡ್​ ಟೌನ್​ ಸೇರಿ ಕೆಲವೆಡೆ ಮಳೆ

ಕೆಲದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಇಂದು ಮತ್ತೆ ಅಬ್ಬರಿಸಿದೆ. ರಿಚ್​ಮಂಡ್​ ಟೌನ್​ ಸೇರಿದಂತೆ ಕೆಲವೆಡೆ ದಿಢೀರ್​ ಮಳೆ ಆಗಿದೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಇನ್ನು ಸಂಜೆ ಕೂಡ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ​ಬೆಂಗಳೂರಿನಲ್ಲಿ ಮಂಗಳವಾರದಿಂದ ಮಾನ್ಸೂನ್ ಮಳೆಯಲ್ಲಿ ಇಳಿಮುಖವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Bengaluru Rains: ಸಿಲಿಕಾನ್​ ಸಿಟಿಗೆ ದಿಢೀರ್ ಎಂಟ್ರಿ ಕೊಟ್ಟ ವರುಣ: ರಿಚ್​ಮಂಡ್​ ಟೌನ್​ ಸೇರಿ ಕೆಲವೆಡೆ ಮಳೆ
ಸಿಲಿಕಾನ್​ ಸಿಟಿಗೆ ದಿಢೀರ್ ಎಂಟ್ರಿ ಕೊಟ್ಟ ವರುಣ: ರಿಚ್​ಮಂಡ್​ ಟೌನ್​ ಸೇರಿ ಕೆಲವೆಡೆ ಮಳೆ
Follow us
|

Updated on:Jun 19, 2024 | 3:24 PM

ಬೆಂಗಳೂರು, ಜೂನ್​ 19: ಕೆಲದಿನಗಳಿಂದ ಬಿಡುವು ನೀಡಿದ್ದ ಮಳೆರಾಯ (Rain) ಇಂದು ಮತ್ತೆ ಅಬ್ಬರಿಸಿದೆ. ರಿಚ್​ಮಂಡ್​ ಟೌನ್​ ಸೇರಿದಂತೆ ಕೆಲವೆಡೆ ದಿಢೀರ್​ ಮಳೆ ಆಗಿದೆ. ಬೆಳಿಗ್ಗೆಯಿಂದ ಎಲ್ಲೆಡೆ ಬಿಸಿಲಿದ್ದು, ಇದೀಗ ಜೋರು ಮಳೆ ಸುರಿದಿದೆ. ಮಟ ಮಟ ಮಧ್ಯಾಹ್ನವೇ ದಿಢೀರ್ ಸುರಿದ ಮಳೆಗೆ ವಾಹನ ಸವಾರರು ಶಾಕ್​ ಆಗಿದ್ದು, ಪರದಾಡಿದ್ದಾರೆ. ಇನ್ನು ಸಂಜೆ ಕೂಡ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಏಪ್ರಿಲ್‌ನಲ್ಲಿ ತೀವ್ರ ಬಿಸಿಲಿನ ಬೇಗೆ ಎದುರಿಸುತ್ತಿದ್ದ ಬೆಂಗಳೂರಿನ ಜನರಿಗೆ ಮಾನ್ಸೂನ್​ ಪ್ರಾರಂಭದ ನಂತರ ಕೂಲ್​ ಕೂಲ್​ ವಾತಾವರಣ ಇತ್ತು. ಆದರೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ ಇದೀಗ ಬೆಂಗಳೂರಿನಲ್ಲಿ ಮಂಗಳವಾರದಿಂದ ಮಾನ್ಸೂನ್ ಮಳೆಯಲ್ಲಿ ಇಳಿಮುಖವಾಗಲಿದೆ ಎಂದು ತಿಳಿಸಿದೆ. ಆದರೆ, ಇದು ತಾಪಮಾನದಲ್ಲಿ ಏರಿಕೆಗೆ ಆಗಲಿ ಅಥವಾ ನಗರದಲ್ಲಿ ಶಾಖದ ಅಲೆ ಹೆಚ್ಚಳ ಕುರಿತಾಗಿ ಯಾವುದೇ ಸೂಚನೆಗಿಳಲ್ಲ.

ಇದನ್ನೂ ಓದಿ: Bengaluru Rains: ಬೆಂಗಳೂರಿನ ಶಾಂತಿನಗರ, ವಿಜಯನಗರ ಸೇರಿದಂತೆ ಹಲವೆಡೆ ತುಂತುರು ಮಳೆ ಆರಂಭ

ಇನ್ನು ಇತ್ತೀಚೆಗೆ ಜೂನ್ ಮೊದಲ ವಾರದಲ್ಲಿ ನಗರದಲ್ಲಿ ಸುರಿದಿದ್ದ ಭಾರೀ ಭಾರೀ ಮಳೆಯು 113 ವರ್ಷ ಹಳೆ ದಾಖಲೆಯನ್ನು ಮುರಿದಿತ್ತು. ಜೂನ್‌ನಲ್ಲಿ ಬೆಂಗಳೂರಿನಲ್ಲಿ ಸರಾಸರಿ 110.3 ಮಿಮೀ ಮಳೆ ಆಗಿದೆ. ಆದರೆ, ಈ ವರ್ಷ, ತಿಂಗಳ ಮೊದಲ ಎರಡು ದಿನಗಳಲ್ಲಿ, ಬೆಂಗಳೂರಿನಲ್ಲಿ 120 ಮಿಮೀ ಮಳೆ ದಾಖಲಾಗಿತ್ತು. ಇದಕ್ಕೂ ಮೊದಲು, ಜೂನ್ 16, 1891 ರಂದು ಬೆಂಗಳೂರಿನಲ್ಲಿ ಅತಿ ಹೆಚ್ಚು ಏಕದಿನ ಮಳೆ ದಾಖಲಾಗಿತ್ತು ಮತ್ತು ಜೂನ್ 2ರಂದು 111 ಮಿಮೀ ಮಳೆ ಆಗಿತ್ತು.

ಇದನ್ನೂ ಓದಿ: Bengaluru Rain: ಗುಡ್​ನ್ಯೂಸ್, ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ

ಇತ್ತೀಚೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಬೆಳಗಾವಿ, ಧಾರವಾಡ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನಲೆ ಯಲ್ಲೋ ಅಲರ್ಟ್ ನೀಡಲಾಗಿತ್ತು. ಇನ್ನು ರಾಜ್ಯದಲ್ಲಿ ಮಳೆ ವಿಂಗಡಣೆಯಾಗಲಿದ್ದು, ಮಳೆ ವ್ಯಾಪಕತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:58 pm, Wed, 19 June 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು