ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ

ಬೆಂಗಳೂರು ಮಹಾನಗರದಾದ್ಯಂತ ಜೋರು ಮಳೆಯಾಗಿದೆ. ಮೊದಲ ಶ್ರಾವಣ ಸೋಮವಾರದಂದು ಬೆಂಗಳೂರಿಗರಿಗೆ ಮಳೆರಾಯ ಶಾಕ್​ ನೀಡಿದ್ದಾನೆ. ರಾತ್ರಿ ಸುರಿದ ಎರಡನೇ ಸುತ್ತಿನ ನಿರಂತರ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ರಸ್ತೆಗಳಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿದೆ.

ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ
ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಮಳೆಗೆ ರಸ್ತೆಗಳು ಜಲಾವೃತ: ಇನ್ನೂ 4 ದಿನ ಇರಲಿದೆ ವರುಣಾರ್ಭಟ
Follow us
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on:Aug 05, 2024 | 10:15 PM

ಬೆಂಗಳೂರು, ಆಗಸ್ಟ್​ 05: ಇಂದು(ಆಗಸ್ಟ್​ 05) ಮೊದಲ ಶ್ರಾವಣ ಸೋಮವಾರದಂದು ಸಂಜೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, (rain) ಇದೀಗ ರಾತ್ರಿ ಎರಡನೇ ಸುತ್ತಿನ ಮಳೆ ಜೋರಾಗಿದೆ. ಸಂಜೆಗಿಂತ ರಾತ್ರಿ ಮಳೆಯಾರ್ಭಟ ಜೋರಾಗಿದೆ. ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಿಲಿಕಾನ್​ ಸಿಟಿ ಮಂದಿ ಬೆಚ್ಚಿಬಿದ್ದಿದ್ದು, ಎಲ್ಲೆಡೆ ನೀರು ತುಂಬಿಕೊಂಡು ವಾಹನ ಸವಾರರು ಟ್ರಾಫಿಕ್​ನಿಂದ ಪರದಾಡುವಂತಾಗಿದೆ.

ರಾತ್ರಿ ವೇಳೆ ಬಂದ ಭಾರೀ ಧಾರಾಕಾರ ಮಳೆಗೆ ನಗರದ ರಸ್ತೆಗಳಲ್ಲಿ ಮಿನಿ ಕೆರೆಗಳು ನಿರ್ಮಾಣವಾಗಿವೆ. ವಾಹನ ಸವಾರರು ಮಳೆಗೆ ಹೈರಾಣಾಗಿದ್ದಾರೆ. ಬೆಂಗಳೂರಿನ ಕೆಂಗೇರಿ, ರಾಜರಾಜೇಶ್ವರಿನಗರ, ಈಜಿಪುರ, ಶಾಂತಿನಗರ, ವಿಜಯನಗರ, ಜಯನಗರ, ಕೆ.ಆರ್.ಮಾರ್ಕೆಟ್, ಬನಶಂಕರಿ, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ವೃತ್ತ, ವಿಧಾನಸೌಧದ ಸುತ್ತಮುತ್ತ ಭಾರೀ ವರ್ಷಧಾರೆ ಸುರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲೂ ಮಳೆ ಸುರಿಯುತ್ತಿದ್ದು, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ, ಸುಬ್ರಹ್ಮಣ್ಯಪುರ ಮುಖ್ಯ ರಸ್ತೆ ಸುತ್ತಮುತ್ತ ಸಂಜೆಯಿಂದಲೂ ಮಳೆ ಅಬ್ಬರಿಸಿದೆ.  ಧಾರಾಕಾರ ಮಳೆಯಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮೆಟ್ರೋ ನಿಲ್ದಾಣಗಳ ಕೆಳಗೆ ವಾಹನ ಸವಾರರು ಆಶ್ರಯ ಪಡೆದುಕೊಂಡಿದ್ದಾರೆ. ಜೋರು ಮಳೆ ಹಿನ್ನೆಲೆ ಮುಂದೆ ಸಾಗಲಾಗದೆ ಸವಾರರು ಕೈಕಟ್ಟಿನಿಂತಿದ್ದಾರೆ.

ಹೆಬ್ಬಾಳ ವೃತ್ತದಲ್ಲಿ ನೀರು ನಿಂತಿರುವುದರಿಂದ ವೀರಣ್ಣಪಾಳ್ಯ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ದಯಮಾಡಿ ಸಹಕರಿಸಿ ಎಂದು ಬೆಂಗಳೂರು ಟ್ರಾಫಿಕ್​ ಪೊಲೀಸರು ಮನವಿ ಮಾಡಿದ್ದಾರೆ.

ಪೂರ್ವ ಅರಬ್ಬೀ ಸಮುದ್ರದಲ್ಲಿ ಸುಳಿಗಾಳಿ ಹಿನ್ನೆಲೆ ಇನ್ನೂ 4 ದಿನ ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಮಳೆಯಿಂದಾಗಿ ಮನೆಗಳಿಗೆ ಹೋಗುವ ಜನರಿಗೆ ಮಳೆ ಎಫೆಕ್ಟ್ ತಟ್ಟಿದೆ. ಕಳೆದ ಅರ್ಧ ಗಂಟೆಗೂ ಕಾಲ ಅಧಿಕ ಸುರಿದ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:59 pm, Mon, 5 August 24

ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ